ಕಿತ್ತೂರು ಬಳಿ ಸಾವಿರ ಎಕರೆ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣ: ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಳಗಾವಿ : ಕಿತ್ತೂರು ಬಳಿ ಇರುವ ಕೆಐಎಡಿಬಿ ಜಾಗದಲ್ಲಿ 1000 ಎಕರೆ ಕೈಗಾರಿಕಾ ಟೌನ್‌ಶಿಪ್ ನಿರ್ಮಿಸಲು ನಿರ್ಧರಿಸಲಾಗಿದೆ. ಶೀಘ್ರವೇ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ(ಅ.24) ಚನ್ನಮ್ಮನ ಕಿತ್ತೂರು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧಾರವಾಡ-ಬೆಳಗಾವಿ ರೈಲುಮಾರ್ಗವನ್ನು ಕಿತ್ತೂರು ಮಾರ್ಗವಾಗಿ ನಿರ್ಮಿಸಲಾಗುವುದು. ಇದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಇನ್ನು ಕೆಲವು ದಿನಗಳಲ್ಲಿ ಸಿಹಿ ಸುದ್ದಿ ಸಿಗಲಿದೆ. ಅಲ್ಲದೆ, ಕಳಸಾ-ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ಸರಕಾರ ಬದ್ಧವಿದೆ. ಇದರ ಅನುಷ್ಠಾನಕ್ಕೆ ಕೂಡ ಶೀಘ್ರ ಕಾಲ ಕೂಡಿ ಬರಲಿದೆ ಎಂದರು.
ಚನ್ನಮ್ಮನ ಉತ್ಸವಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂಬುದು ಮೂಢನಂಬಿಕೆ.‌ ಇದಕ್ಕೆ ಸೆಡ್ಡು ಹೊಡೆದು ಮುಖ್ಯಮಂತ್ರಿ ಯಾಗಿ ಎರಡು ಬಾರಿ ಉತ್ಸವಕ್ಕೆ ಬಂದಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸುವರ್ಣ ಸೌಧದ ಆವರಣದಲ್ಲಿ ಅಂಬೇಡ್ಕರ್, ಚನ್ನಮ್ಮ ಪ್ರತಿಮೆ:
ಸುವರ್ಣಸೌಧದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್, ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಮುಂದಿನ ತಿಂಗಳು ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅಡಿಗಲ್ಲು ಮಾತ್ರವಲ್ಲ; ನಮ್ಮ ಅವಧಿಯಲ್ಲಿ ಉದ್ಘಾಟನೆ ಕೂಡ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಬೈಲಹೊಂಗಲ ಸ್ಮಾರಕ ಅಭಿವೃದ್ಧಿಗೆ ಎರಡು ಕೋಟಿ ಅನುದಾನವನ್ನು ಪ್ರಾಧಿಕಾರದ ವತಿಯಿಂದ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಇಂದಿನ ಪ್ರಮುಖ ಸುದ್ದಿ :-   ಪ್ರವೇಗ್ ಡಿಫೈ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆ : ಪ್ರತಿ ಚಾರ್ಜ್‌ಗೆ 500 ಕಿಮೀ ಮೈಲೇಜ್

ಕೋಟೆ ಪಕ್ಕದಲ್ಲಿ ಅರಮನೆ ಪ್ರತಿರೂಪ:
ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರು 1857 ರಲ್ಲಿ ಹೋರಾಡಿದರು. ಆದರೆ ಅದಕ್ಕೂ ಮುಂಚೆ 1824 ರಲ್ಲಿ ಚನ್ನಮ್ಮ ಹೋರಾಡಿದ್ದರು. ಬ್ರಿಟೀಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ ಚನ್ನಮ್ಮ ಎಂಬ ಸತ್ಯವನ್ನು ಇತಿಹಾಸದ ಪುಟಗಳಲ್ಲಿ ಸೇರಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ರೈತರ ಮನವೊಲಿಸಿ ಜಮೀನು ಸ್ವಾಧೀನಪಡಿಸಿಕೊಂಡು ಈಗಿರುವ ಚನ್ನಮ್ಮನ ಕೋಟೆಯ ಪಕ್ಕದಲ್ಲೇ ಅರಮನೆಯ ಪ್ರತಿರೂಪ ನಿರ್ಮಿಸಲಾಗುವುದು. ಶಿಥಿಲಾವಾಸ್ಥೆಯಲ್ಲಿರುವ ಕೋಟೆಯ‌ ಜೀರ್ಣೋದ್ಧಾರಕ್ಕೆ 27 ಕೋಟಿ ರೂಪಾಯಿ ಅನುದಾನವನ್ನು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ತೆಗೆದಿರಿಸಲಾಗಿದೆ ಎಂದರು.

ಏತ ನೀರಾವರಿ ಯೋಜನೆಗೆ 580 ಕೋಟಿ ಅನುದಾನ ನೀಡಲಾಗಿದೆ. ಅದೇ ರೀತಿ ಜಲಜೀವನ ಮಿಷನ್ ಯೋಜನೆಯಡಿ ಕಿತ್ತೂರು, ಖಾನಾಪು ಹಾಗೂ ಬೈಲಹೊಂಗಲ ಕ್ಷೇತ್ರಗಳಿಗೆ 960 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ. ಚನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ,ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ,ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿದರು.
ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹಾಂತೇಶ್ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು. ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮಿಗಳು ಹಾಗೂ ನಿಚ್ಚಣಕಿಯ ಶ್ರೀಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಇದೇ ವೇಳೆ ಅನಾರೋಗ್ಯದಿಂದ‌ ಭಾನುವಾರ ನಿಧನರಾದ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ‌ ಮಾಮನಿ ಅವರ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement