ಕಂಚುಗಲ್ಲು ಬಂಡೇಮಠದ ಶ್ರೀಗಳು ಶವವಾಗಿ ಪತ್ತೆ : ಆತ್ಮಹತ್ಯೆ ಟಿಪ್ಪಣಿ’ಯಲ್ಲಿ ಕಿರುಕುಳದ ಆರೋಪ

ಬೆಂಗಳೂರು: ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಅಕ್ಟೋಬರ್ 24 ರಂದು ಕಂಚುಗಲ್ ಬಂಡೇಮಠದ 45 ವರ್ಷದ ಬಸವಲಿಂಗ ಸ್ವಾಮಿ ಸೋಮವಾರ ತಮ್ಮ ಮಠದ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸೋಮವಾರ ಕಿಟಕಿಯ ಮೇಲಿನ ಗ್ರಿಲ್‌ಗಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಈ ಸಂಬಂಧ ರಾಮನಗರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಲಿಂಗಾಯತ ಸ್ವಾಮೀಜಿ ಕೊಠಡಿಯಿಂದ ಪೊಲೀಸರು ಎರಡು ಪುಟಗಳ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಪ್ರಭಾವಿಗಳ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆಯು ಆತ್ಮಹತ್ಯೆಯ ಶಂಕಿತ ಪ್ರಕರಣವಾಗಿದೆ, ಆದರೆ ಸ್ಪಷ್ಟವಾದ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ತನಿಖೆ ಚುರುಕುಗೊಳಿಸಲಾಗಿದೆ.
ವಶಪಡಿಸಿಕೊಂಡಿರುವ ಎರಡು ಪುಟಗಳ ಡೆತ್ ನೋಟ್‌ನಲ್ಲಿ, ಮೃತ ಸ್ವಾಮೀಜಿ ತಾವು ಕಿರುಕುಳವನ್ನು ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ. ಪೊಲೀಸರು ಸ್ವಾಮೀಜಿ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದು ಫೋನ್‌ ಕರೆ ದಾಖಲೆಗಳನ್ನು ಸಹ ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಬಂಡೆಮಠಕ್ಕೆ 400 ವರ್ಷಗಳ ಇತಿಹಾಸವಿದೆ ಮತ್ತು ಬಸವಲಿಂಗ ಸ್ವಾಮೀಜಿ ಕಳೆದ 25 ವರ್ಷಗಳಿಂದ ಮಠದ ಪೀಠಾಧಿಪತಿಯಾಗಿದ್ದರು. ಸೋಮವಾರ ಮುಂಜಾನೆ ಕಂಚುಗಲ್ಲು ಬಂಡೇಮಠದ ಬಸವಲಿಂಗ ಸ್ವಾಮೀಜಿ ಬೆಟ್ಟದ ಮೇಲಿನ ಮಹಾಲಿಂಗೇಶ್ವರ ದೇವಾಲಯ ಪಕ್ಕದ ಪೂಜಾ ಗೃಹದಿಂದ ಹೊರ ಬಂದಿರಲಿಲ್ಲ. ಶ್ರೀಗಳು ಹೊರಬಾರದ ಹಿನ್ನೆಲೆಯಲ್ಲಿ ಕೆಲವರು ಸಾಕಷ್ಟು ಬಾರಿ ಕೂಗಿದರು. ಆದರೂ ಪ್ರತಿಕ್ರಿಯೆ ಬಾರದ ಕಾರಣ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಶ್ರೀಗಳ ಮೃತದೇಹ ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement