‘ಕಾಂತಾರ’ ಸಿನೆಮಾ ವಿರುದ್ಧ ಕೃತಿಚೌರ್ಯದ ಆರೋಪ: ಕಾನೂನು ಕ್ರಮಕ್ಕೆ ಮುಂದಾದ ಕೇರಳದ ಮ್ಯುಸಿಕ್‌ ಬ್ಯಾಂಡ್‌

posted in: ರಾಜ್ಯ | 0

ಬೆಂಗಳೂರು: ಕಾಂತಾರ ಸಿನೆಮಾ ಸೆಪ್ಟೆಂಬರ್ 30 ರಂದು ಬಿಡುಗಡೆಯಾದಾಗಿನಿಂದ ಪ್ಯಾನ್-ಇಂಡಿಯಾದಲ್ಲಿ ಭಾರಿ ಯಶಸ್ಸನ್ನು ಗಳಿಸಿದ ಕನ್ನಡ ಚಲನಚಿತ್ರವಾಗಿದೆ. ಆದರೆ ಈಗ ಈ ಸಿನೆಮಾ ತಂಡದ ವಿರುದ್ಧ ಕೃತಿಚೌರ್ಯದ ಆರೋಪ ಕೇಳಿಬಂದಿದೆ.
ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಈಗ ‘ಕಾಂತಾರ’ ಚಿತ್ರದ ಹಾಡೊಂದಕ್ಕೆ ಆಕ್ಷೇಪಣೆ ಮಾಡಿದೆ. ಅದು ಕೃತಿಚೌರ್ಯದ ಆರೋಪ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.
‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ‘ಥೈಕ್ಕುಡಮ್ ಬ್ರಿಡ್ಜ್’ ಸಾಮಾಜಿಕ ಮಾಧ್ಯಮಗಳಲ್ಲಿ ಸೋಮವಾರ ಪೋಸ್ಟ್ ಹಾಕಿದೆ. ʼಥೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡುಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ’ ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಮ್ಮ ದೃಷ್ಟಿಕೋದಲ್ಲಿ ‘ಪ್ರೇರಣೆ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ’ ಎಂದು ಅದು ಹೇಳಿದೆ.
ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲ ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ತಮ್ಮ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ಬ್ಯಾಂಡ್ ವಿಪಿನ್ ಲಾಲ್ ಹಾಡಿರುವ ಅವರ ‘ನವರಸಂ’ ಮತ್ತು ಅಜನೀಶ್ ಲೋಕನಾಥ್ ಮತ್ತು ಸಾಯಿ ವಿಘ್ನೇಶ್ ಹಾಡಿರುವ ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವಿನ ವಿಲಕ್ಷಣ ಹೋಲಿಕೆಗಳನ್ನು ಎತ್ತಿ ತೋರಿಸಿದೆ.
ಆಡಿಯೋ ವಿಷಯದಲ್ಲಿ ಕೃತಿಸ್ವಾಮ್ಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ನಮ್ಮ ದೃಷ್ಟಿಕೋನದಿಂದ, ಕೃತಿಚೌರ್ಯವಾಗಿದೆ. ಆದ್ದರಿಂದ, ನಾವು ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಕೊಚ್ಚಿ ಮೂಲದ ಬ್ಯಾಂಡ್ ‘ಥೈಕ್ಕುಡಮ್ ಬ್ರಿಡ್ಜ್’ ಎಚ್ಚರಿಸಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement