ಸಿಡಬ್ಲ್ಯೂಸಿ ಬದಲಿಗೆ 47 ಸದಸ್ಯರ ಸ್ಟೀರಿಂಗ್ ಕಮಿಟಿ ರಚಿಸಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ : ಶಶಿ ತರೂರ್‌ಗೆ ಸ್ಥಾನವಿಲ್ಲ- ಪೂರ್ಣಪಟ್ಟಿ ಇಲ್ಲಿದೆ…

ನವದೆಹಲಿ: ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ, ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ 47 ಸದಸ್ಯರ ಸ್ಟೀರಿಂಗ್ ಕಮಿಟಿಯನ್ನು ರಚಿಸಿದ್ದಾರೆ. ಇದು ಪ್ರಸ್ತುತ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಬದಲಿಸುತ್ತದೆ, ಇದು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಮತಿಯಾಗಿದ್ದು, ಹೊಸ ಸಿಡಬ್ಲ್ಯುಸಿ ರಚನೆಯಾಗುವ ವರೆಗೆ ಖರ್ಗೆ ನೇತೃತ್ವದ ಸ್ಟೀರಿಂಗ್ ಸಮಿತಿಯು ಉನ್ನತ ನಿರ್ಧಾರ ತೆಗೆದುಕೊಳ್ಳುವ ಅದರ ಸ್ಥಾನವನ್ನು ವಹಿಸಿಕೊಳ್ಳುತ್ತದೆ.
ಹೊಸದಾಗಿ ರಚನೆಯಾಗಿರುವ ಸಮಿತಿಯ ನಾಯಕರಲ್ಲಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು ಇದ್ದಾರೆ. ಸಮಿತಿಯ ಇತರ ಸದಸ್ಯರಲ್ಲಿ ಪ್ರಿಯಾಂಕಾ ಗಾಂಧಿ, ಪಿ ಚಿದಂಬರಂ, ರಣದೀಪ್ ಸುರ್ಜೆವಾಲಾ, ಅಧೀರ್ ರಂಜನ್ ಚೌಧರಿ, ಎ.ಕೆ. ಆಂಟನಿ, ಅಭಿಷೇಕ್ ಮನು ಸಿಂಘ್ವಿ, ಅಜಯ್ ಮಾಕನ್ ಮತ್ತು ಇತರರು ಸೇರಿದ್ದಾರೆ.

ಕಾಂಗ್ರೆಸ್‌ನ ತಿರುವನಂತಪುರಂ ಸಂಸದ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಖರ್ಗೆ ಅವರ ಎದುರಾಳಿ ಶಶಿ ತರೂರ್‌ ಅವರು ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ ಎಂಬುದು ಗಮನಾರ್ಹ.
ಸಿಡಬ್ಲ್ಯುಸಿಯ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ತಮ್ಮ ರಾಜೀನಾಮೆಯನ್ನು ಖರ್ಗೆ ಅವರಿಗೆ ಸಲ್ಲಿಸಿದ್ದಾರೆ, ಇದರಿಂದಾಗಿ ಪಕ್ಷದ ಹೊಸ ಮುಖ್ಯಸ್ಥರು ತಮ್ಮದೇ ತಂಡವನ್ನು ಆಯ್ಕೆ ಮಾಡಬಹುದು. ಮಧ್ಯಂತರ ಸಮಿತಿಯಲ್ಲಿ, ಸಿಡಬ್ಲ್ಯೂಸಿಯ ಹೆಚ್ಚಿನ ಸದಸ್ಯರನ್ನು ಸ್ಟೀರಿಂಗ್ ಸಮಿತಿಯಲ್ಲಿ ಉಳಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   'ತಾರಕ್ ಮೆಹ್ತಾ' ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

ಕಾಂಗ್ರೆಸ್ ಸಂವಿಧಾನದ ಪ್ರಕಾರ, ಮುಂದಿನ ವರ್ಷ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯುವ ಪಕ್ಷದ ಸರ್ವಸದಸ್ಯರ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರ ಆಯ್ಕೆಯನ್ನು ಅಂಗೀಕರಿಸಲಾಗುತ್ತದೆ. ಅಲ್ಲಿಯವರೆಗೆ, ಹೊಸದಾಗಿ ರಚನೆಯಾದ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಂವಿಧಾನದ XV (ಬಿ) ಪರಿಚ್ಛೇದದ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷರು ಸ್ಟೀರಿಂಗ್ ಸಮಿತಿಯನ್ನು ರಚಿಸಿದ್ದಾರೆ, ಅದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬದಲಿಗೆ ಕಾರ್ಯನಿರ್ವಹಿಸುತ್ತದೆ” ಎಂದು ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement