ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ಸರ್ಕಾರಿ ನೌಕರರಿಗೆ ಸರ್ಕಾರದ ಮಹತ್ವದ ಸೂಚನೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯ ಸರ್ಕಾರದಿಂದ ನಾಳೆ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರು ಭಾಗವಹಿಸುವಂತೆ ರಾಜ್ಯ ಸರ್ಕಾರ (Karnataka Government) ಮಹತ್ವದ ಸೂಚನೆ ನೀಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ.ಹೇಮಲತಾ ಅವರು, ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು, ಅಕ್ಟೋಬರ್ 28ರಂದು ನಾಡು ನುಡಿಯ ಬಗ್ಗೆ ಅಭಿಮಾನ ಹಾಗೂ ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 28ರಂದು ಕನ್ನಡ ನಾಡು-ನುಡಿಯ ಶ್ರೇಷ್ಠತೆಯನ್ನು ಸಾವು ನನ್ನ ನಾಡು, ನನ್ನ ಹಾಡು ಸಮೂಹ ಗೀತ ಗಾಯ, ನಾಡಗೀತೆ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವು ಕನ್ನಡ ನಾಡು, ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ.ಡಿಎಸ್ ಕರ್ಕಿಯವರ ಹಚ್ಚೇವು ಕನ್ನಡ ದೀಪ, ನಾಡೋಜ ಡಾ.ಚೆನ್ನವೀರಕಣವಿಯವರ ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಡಾ.ಹಂಸಲೇಖ ಅವರ ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟಬೇಕು ಎಂಬ ಈ ಗೀತೆಗಳು ಕನ್ನಡದ ಶಕ್ತಿಯಾಗಿದ್ದು, ನಾಳೆ ಬೆಳಿಗ್ಗೆ 12 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಹಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ನಾಳೆ ಸಚಿವಾಲಯದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಐಎಎಸ್, ಐಪಿಎಸ್, ಐಎಫ್ಎಸ್, ಅಧಿಕಾರಿಗಳು ಹಾಗೂ ಸಚಿವಾಲಯದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಬೆಳಿಗ್ಗೆ 11:30ಕ್ಕೆ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಬೃಹತ್ ಮೆಟ್ಟಿಲುಗಳ ಬಳಿ ಸೇರಿ, ಮಧ್ಯಾಹ್ನ 12 ಗಂಟೆಗೆ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸುವಂತೆ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement