ರಿಷಿ ಸುನಕ್‌ಗೆ ಅಭಿನಂದಿಸಿದ ಪ್ರಧಾನಿ ಮೋದಿ: ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ

ನವದೆಹಲಿ: ಭಾರತೀಯ ಮೂಲದ ರಿಷಿ ಸುನಕ್ ಅವರು ಯುನೈಟೆಡ್ ಕಿಂಗ್ ಡಂನ ಪ್ರಧಾನಿಯಾದ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿ ಅವರ ಜೊತೆ ಮಾತನಾಡಿ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ವೇಳೆ ಎರಡೂ ರಾಷ್ಟ್ರಗಳು ಸಮತೋಲಿತ ವ್ಯಾಪಾರ ಒಪ್ಪಂದವನ್ನು ಮುಂದುವರಿಸುವ ಆಶಯ ವ್ಯಕ್ತಪಡಿಸಿದ್ದಾರೆ.
ಮಂಗಳವಾರವಷ್ಟೇ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು, ಗುರುವಾರ ರಿಷಿ ಸುನಕ್ ಅವರೊಂದಿಗೆ ಮಾತನಾಡಿದ ನಂತರ ಬಹಳ ಸಂತೋಷವಾಯಿತು. ಯುನೈಟೆಡ್ ಕಿಂಗ್ ಡಂನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದೇನೆ. ನಾವು ಎರಡು ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಯನ್ನು ಜೊತೆಯಾಗಿ ಮುನ್ನಡೆಸುತ್ತೇವೆ. ನಾವು ಸಮಗ್ರ ಮತ್ತು ಸಮತೋಲಿತ ಮುಕ್ತ ವ್ಯಾಪಾರ ಒಪ್ಪಂದ(FTA) ವನ್ನು ಮುಂದುವರಿಸಲು ಸಮ್ಮತಿಸಿದ್ದೇವೆ ಎಂದು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಜನವರಿಯಲ್ಲಿ ಭಾರತ ಮತ್ತು ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ ಕುರಿತಾಗಿ ಮಾತುಕತೆಗೆ ಮುಂದಾಗಿತ್ತು. ಎಲ್ಲ ಅಂದುಕೊಂಡಂತೆ ನಡೆದಿದ್ದರೆ ದೀಪಾವಳಿ ಒಳಗಾಗಿ ಅಂತಿಮ ಹಂತದ ಮಾತುಕತೆಗಳು ಮುಗಿದಿರಬೇಕಿತ್ತು. ಆದರೆ ಸಾಧ್ಯವಾಗಿರಲಿಲ್ಲ.
ಈ ಹಿಂದೆ ಬ್ರಿಟನ್ ವರಮಾನ ಇಲಾಖೆಯ ಚಾನ್ಸಲರ್ ಆಗಿದ್ದ ರಿಷಿ ಸುನಕ್ ಅವರು ಈ ಒಪ್ಪಂದವನ್ನು ಬೆಂಬಲಿಸಿದ್ದರು. ಈ ಒಪ್ಪಂದ ಫಿನ್ ಟೆಕ್ ಮತ್ತು ಇನ್ಶೂರೆನ್ಸ್ ವಲಯಗಳಲ್ಲಿ ಎರಡೂ ದೇಶಗಳಿಗೆ ಸಾಕಷ್ಟು ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಇಂದಿನ ಪ್ರಮುಖ ಸುದ್ದಿ :-   ಮುಂಗುಸಿ - ಕಪ್ಪು ನಾಗರಹಾವಿನ ನಡುವಿನ ಮಾರಣಾಂತಿಕ ಹೋರಾಟ: ಉಸಿರು ಬಿಗಿಹಿಡಿಯುವ ಕಾದಾಟ | ವೀಕ್ಷಿಸಿ

ರಿಷಿ ಸುನಾಕ್ ರೀಟ್ವೀಟ್
ಪ್ರಧಾನಿ ಮೋದಿ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಮರುಟ್ವೀಟ್ ಮಾಡಿದ ರಿಷಿ ಸುನಕ್ “ನಾನು ಹೊಸಹುದ್ದೆಗೆ ನಿಮ್ಮ ಶುಭಹಾರೈಕೆಗಾಗಿ ಧನ್ಯವಾದಗಳನ್ನು ಸಮರ್ಪಿಸುತ್ತಿದ್ದೇನೆ. ಇನ್ನುಮುಂದೆ ಯುನೈಟೈಡ್ ಕಿಂಗ್‌ಡಂ ಮತ್ತು ಭಾರತ ಬಹಳಷ್ಟು ವಿಚಾರಗಳಲ್ಲಿ ಜೊತೆಯಾಗಿ ಮುನ್ನಡಿಯಿಡಲಿವೆ. ಮುಂದಿನ ವರ್ಷಗಳಲ್ಲಿ ಭದ್ರತೆ, ರಕ್ಷಣಾ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಎರಡು ಮಹಾನ್ ಪ್ರಜಾಪ್ರಭುತ್ವ ದೇಶಗಳು ಶ್ರಮಿಸಲಿವೆ ಎಂದು ಹೇಳಲು ನನಗೆ ಸಂತೋಷವಾಗುತ್ತಿದೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಬ್ರಿಟನ್‌ನ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲೇ ಭಾರತಕ್ಕೆ ಆಗಮಿಸುತ್ತಿದ್ದು ವಿದೇಶಾಂಗ ಸಚಿವ ಜೈಶಂಕರ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಇಬ್ಬರು ಸಚಿವರು ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಸಲುವಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯಾಲಯ ತಿಳಿಸಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ದೊಡ್ಡ ಸುರಂಗವನ್ನೇ ಕೊರೆದು ರೈಲು ಇಂಜಿನ್ ಕದ್ದೊಯ್ದ ಕಳ್ಳರು...!

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement