ಆಘಾತಕಾರಿ ವರ್ತನೆ..: ಬೈಕ್ ಸವಾರನೊಂದಿಗೆ ಜಗಳ ಮಾಡಿದ ನಂತರ ಸಿಟ್ಟಿನಲ್ಲಿ ಜನರಿಗೆ ಕಾರು ಡಿಕ್ಕಿ ಹೊಡೆಸಿದ ವ್ಯಕ್ತಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಬೈಕ್ ಸವಾರನೊಂದಿಗೆ ಜಗಳವಾಡಿದ ವ್ಯಕ್ತಿಯೊಬ್ಬ ಆ ಸಿಟ್ಟಿನಲ್ಲಿ ತನ್ನ ಕಾರನ್ನು ಜನರ ಮೇಲೆ ಹಾಯಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಅಕ್ಟೋಬರ್ 26 ರಂದು ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಕಿರಿದಾದ ರಸ್ತೆಯಲ್ಲಿ ಬೈಕ್ ಅನ್ನು ನಿಲ್ಲಿಸಿದ್ದಕ್ಕಾಗಿ ಕಾರು ಚಾಲಕ ತಾನು ಮುಂದೆ ಹೋಗಲು ಸಾಧ್ಯವಾಗದಕ್ಕೆ ಸಿಟ್ಟುಗೊಂಡು ಮೊದಲಿಗೆ ಬೈಕಿಗೆ ಡಿಕ್ಕಿ ಹೊಡೆಸಿದ್ದಾನೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಇಬ್ಬರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಕೋಪ ತಣ್ಣಗಾಗದ ಕಾರು ಚಾಲಕ ಆಕ್ಸಲೇಟರ್ ಒತ್ತಿ ಜನರ ಮಧ್ಯೆ ಇದ್ದ ಬೈಕ್‌ ಸವಾರನಿಗೆ ಬುದ್ಧಿಕಲಿಸಲು ನೆರೆದಿದ್ದ ಜನರ ಮೇಲೆ ಓಡಿಸಿದ್ದಾನೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡಿದೆ. ನಂತರ ಜನರು ಕಾರನ್ನು ನಿಲ್ಲಿಸಲು ಪ್ರಯತ್ನಿಸಿದರೂ ನಿಲ್ಲಿಸದೆ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾನೆ.
ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಯ ಸಹಾಯದಿಂದ ಕಾರಿನ ನಂಬರ್ ಪ್ಲೇಟ್ ಮೂಲಕ ಚಾಲಕನನ್ನು ಪತ್ತೆ ಹಚ್ಚಿದ್ದು, ಮನೆಯಿಂದಲೇ ಆತನನ್ನು ಬಂಧಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಜೈಲಿನೊಳಗೆ ಮಸಾಜ್, ಅದ್ದೂರಿ ಊಟದ ನಂತರ ಹೊರಬಿದ್ದ ಸತ್ಯೇಂದ್ರ ಜೈನ್ ಸೆಲ್‌ಗೆ ರೂಂ ಸೇವೆ ಮಾಡಿದ ವೀಡಿಯೊ

ಎರಡ್ಮೂರು ದಿನಗಳ ಹಿಂದೆ ಗಾಜಿಯಾಬಾದ್‌ನಲ್ಲಿಯೂ ವಾಹನ ನಿಲುಗಡೆ ಮಾಡಿದ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ನಡೆಸಿದ್ದ. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಭಾರತ ಜೋಡೋ ಯಾತ್ರೆಯಲ್ಲಿ ಬೈಕ್ ಸವಾರಿ ಮಾಡಿದ ರಾಹುಲ್ ಗಾಂಧಿ | ವೀಕ್ಷಿಸಿ

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement