ರಾಜ್ಯದ ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣ ಬೋಧನೆ ಬಗ್ಗೆ ವರದಿ ಸಲ್ಲಿಸಲು ಸೂಚನೆ : ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ರಾಜ್ಯದ ಅರೇಬಿಕ್ ಶಾಲೆಗಳ ವಿದ್ಯಾರ್ಥಿಗಳು ಸಹ ಇತರ ಶಾಲೆಗಳಿಗೆ ಸಮಾನವಾದ ಶಿಕ್ಷಣ ಸೌಲಭ್ಯಗಳನ್ನು ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ   ಸಚಿವರಾದ ಬಿ ಸಿ ನಾಗೇಶ್ ಹೇಳಿದರು.
ಅರೇಬಿಕ್ ಶಾಲೆಗಳಲ್ಲಿ ಬೋಧನೆಗೆ ಸಂಬಂಧಿಸಿದಂತೆ ವರದಿಯನ್ನು ತಮ್ಮ ಸಚಿವಾಲಯ ಕೇಳಿದೆ ಎಂದು ನಾಗೇಶ್ ಮಾಧ್ಯಮಗಳಿಗೆ ತಿಳಿಸಿದರು. ರಾಜ್ಯದಲ್ಲಿ 106 ಅನುದಾನಿತ ಮತ್ತು 80 ಅನುದಾನ ರಹಿತ ಅರೇಬಿಕ್ ಶಾಲೆಗಳಿವೆ. ಈ ಶಾಲೆಗಳಲ್ಲಿ ಶಿಕ್ಷಣ ಇಲಾಖೆ ನಿಗದಿಪಡಿಸಿರುವ ಪಠ್ಯಕ್ರಮದ ಪ್ರಕಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಈ ಕುರಿತು ಇಲಾಖೆ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು.

ಈ ಶಾಲೆಗಳಲ್ಲಿ ವಿಜ್ಞಾನ ಮತ್ತು ಇತರ ಭಾಷೆಗಳನ್ನು ಸಹ ಕಲಿಸಲಾಗುತ್ತಿಲ್ಲ. ಇತರೆ ಅನುದಾನಿತ ಶಾಲೆಗಳಿಗೆ ಹೋಲಿಸಿದರೆ ಈ ಶಾಲೆಗಳಿಗೆ ದಾಖಲಾದ ವಿದ್ಯಾರ್ಥಿಗಳು ಒಂದೇ ರೀತಿಯ ಶಿಕ್ಷಣವನ್ನು ಪಡೆಯುತ್ತಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಸರಿಸುಮಾರು, 27,000 ವಿದ್ಯಾರ್ಥಿಗಳು ಪ್ರತಿ ವರ್ಷ ರಾಜ್ಯದ ಅರೇಬಿಕ್ ಶಾಲೆಗಳಿಗೆ ದಾಖಲಾಗುತ್ತಾರೆ. ಆದರೆ ಅವರಲ್ಲಿ 2,000 ಮಂದಿ ಮಾತ್ರ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಹಂತಕ್ಕೆ ತೇರ್ಗಡೆಯಾಗಿದ್ದಾರೆ ಎಂದು ಅವರು ಹೇಳಿದರು.
“ಹಲವು ಶಾಲೆಗಳಲ್ಲಿ, ದಾಖಲಾದ ಮತ್ತು ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸವಿದೆ. ಹೀಗಾಗಬಾರದು ಎಂದರು

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement