ಖಾನಾಪುರ : ರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಳಗಾವಿ : ಬೆಳಗಾವಿಯ ಜಿಲ್ಲೆಯ ಖಾನಾಪುರ ಬಳಿಯ ಚೋರ್ಲಾ ಘಾಟ್ ಬಳಿ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.
ಬೆಂಕಿಯಿಂದ ಇಡೀ ಕಾರು ಸಂಪೂರ್ಣ ಕರಕಲಾಗಿದೆ. ಸ್ಥಳೀಯರು ಕಾರು ಉರಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಗುಜರಾತ್ ನೋಂದಣಿಯ ಕಾರು ಇದಾಗಿದ್ದು, ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.  ಕಾರು ಬೆಂಕಿಗಾಹುತಿಯಾಗುತ್ತಿರುವುದನ್ನು ಗಮನಿಸಿದ ಅದರಲ್ಲಿದ್ದವರು ತಕ್ಷಣ ಕೆಳಗಿಳಿದಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಶಾಲನಗರ: ನಿಂತಿದ್ದ ಕಾರಿನಲ್ಲಿ ವೈದ್ಯ ಶವವಾಗಿ ಪತ್ತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement