ಕಾಂತಾರ ಸಿನೆಮಾ ‘ವರಾಹರೂಪಂ’ ಹಾಡಿಗೆ ನ್ಯಾಯಾಲಯದ ನಿರ್ಬಂಧ

ಕೋಯಿಕ್ಕೋಡ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಸಿನಿಮಾದಲ್ಲಿ ಬಳಸದಂತೆ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಕುರಿತು ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದೆ.
ಕನ್ನಡ ಚಲನಚಿತ್ರ ‘ಕಾಂತಾರ’ ಚಿತ್ರದ ನಿರ್ಮಾಪಕರಿಗೆ ‘ತೈಕ್ಕುಡಂ ಬ್ರಿಡ್ಜ್’ ಎಂಬ ಮ್ಯೂಸಿಕ್ ಬ್ಯಾಂಡ್‌ನ ಅನುಮತಿಯಿಲ್ಲದೆ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ನುಡಿಸದಂತೆ ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿದೆ.
ಜನಪ್ರಿಯ ಮಲಯಾಳಂ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್‌ನಿಂದ ಕೃತಿಚೌರ್ಯದ ಮೊಕದ್ದಮೆಯನ್ನು ಸ್ವೀಕರಿಸಿದ ನಂತರ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯವು ‘ವರಾಹ ರೂಪಂ’ ಹಾಡನ್ನು ಪ್ಲೇ ಮಾಡದಂತೆ ತಯಾರಕರಿಗೆ ತಡೆಯಾಜ್ಞೆ ನೀಡಿದೆ. ಎಲ್ಲಾ ಪ್ರಮುಖ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೂ ಹಾಡನ್ನು ಪ್ಲೇ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದೆ.

ಚಿತ್ರದಲ್ಲಿ ಬಳಸಲಾದ ಹಾಡು ತಮ್ಮ ಮೂಲ ಗೀತೆ ‘ನವರಸಂ’ ನಿಂದ ನೇರವಾಗಿ ನಕಲು ಮಾಡಲಾಗಿದೆ ಎಂದು ಆರೋಪಿಸಿ ಬ್ಯಾಂಡ್ ಸಲ್ಲಿಸಿದ ದೂರಿನ ನಂತರ ಕೋರ್ಟ್‌ ಈ ಆದೇಶ ಮಾಡಿದೆ. ನ್ಯಾಯಾಲಯವು ತನ್ನ ಆದೇಶದಲ್ಲಿ, ಅಮೆಜಾನ್, ಯೂಟ್ಯೂಬ್, ಸ್ಪಾಟಿಫೈ, ಜಿಯೋಸಾವನ್ ಮತ್ತು ಇತರ ಸಂಗೀತ ವಿತರಣಾ ವೇದಿಕೆಗಳನ್ನು ಬ್ಯಾಂಡ್‌ನ ಒಪ್ಪಿಗೆಯಿಲ್ಲದೆ ಹಾಡುವ ಪ್ಲೇ ಮಾಡಬಾರದು ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್‌ನ ನವರಸಂ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿತ್ತು. ಬ್ಯಾಂಡ್‌ ಕೊಯಿಕ್ಕೋಡು ಕೋರ್ಟ್ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

ಐದು ವರ್ಷಗಳ ಹಿಂದೆ ಬಿಡುಗಡೆಯಾದ ‘ನವರಸಂ’ ಎಂಬ ಹಾಡನ್ನು ʼವರಾಹ ರೂಪಂʼ ಗೀತೆ ಹೋಲುತ್ತದೆ ಎಂದು ಆರೋಪಿಸಿದ ʼತೈಕ್ಕುಡಂ ಬ್ರಿಜ್‌ʼ ಕೂಡಲೇ ಸಾಮಾಜಿಕ ಜಾಲತಾಣಗಳ ಮೂಲಕ ತನಗೂ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿತು.ನಮ್ಮ ನವರಸಂ ಮತ್ತು ವರಾಹ ರೂಪಂ ಆಡಿಯೋ ವಿಚಾರದಲ್ಲಿ ಅನೇಕ ಅನಿವಾರ್ಯ ಹೋಲಿಕೆಗಳು ಇದ್ದುದರಿಂದ ಹಕ್ಕುಸ್ವಾಮ್ಯ ಕಾಯಿದೆಯ ಘೋರ ಉಲ್ಲಂಘನೆಯಾಗಿದೆ. ನಮ್ಮ ದೃಷ್ಟಿಯಲ್ಲಿ ಸ್ಫೂರ್ತಿ ಮತ್ತು ಕೃತಿಚೌರ್ಯಕ್ಕೂ ನಡುವಿನ ಗೆರೆ ಭಿನ್ನ ಮತ್ತು ನಿರ್ವಿವಾದಿತವಾಗಿದ್ದು ಇದಕ್ಕೆ ಕಾರಣರಾದ ಸಿನಿಮಾ ತಂಡದ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರುತ್ತೇವೆ. ಹಾಡನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಜೊತೆಗೆೆ ಸಿನಿಮಾದ ಸೃಜನಶೀಲ ತಂಡ ತನ್ನದೇ ಮೂಲ ಕೃತಿ ಎಂಬಂತೆ ಹಾಡನ್ನು ಬಿಡುಗಡೆ ಮಾಡಿದೆ ಎಂದು ಬ್ರಿಜ್‌ನ ಇನ್‌ಸ್ಟಾಗ್ರಾಂ ಪೋಸ್ಟ್‌ ವಿವರಿಸಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

ಸೆಪ್ಟೆಂಬರ್ 30 ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ’ ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯುತ್ತಿದೆ. ಕಾಂತಾರ ಸಿನೆಮಾ ಈಗ ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಎಲ್ಲಾ ಪ್ರಮುಖ ಭಾರತೀಯ ಭಾಷೆಗಳಲ್ಲಿ ಡಬ್ ಆಗಿದೆ.

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement