ಗುಜರಾತ್ ಚುನಾವಣೆಗೆ ಮುನ್ನ ಆಪ್ ಸಿಎಂ ಅಭ್ಯರ್ಥಿ ಆಯ್ಕೆ ಮಾಡಲು ಅಭಿಯಾನ ಆರಂಭಿಸಿದ ಅರವಿಂದ್ ಕೇಜ್ರಿವಾಲ್

ಗುಜರಾತ್ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸೂರತ್‌ನಲ್ಲಿ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಚಾರ ಪ್ರಾರಂಭಿಸಿದರು.
ಗುಜರಾತ್ ಜನತೆ ನಮಗೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೇಳಬೇಕೆಂದು ನಾವು ಬಯಸುತ್ತೇವೆ. ನಾವು ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ನೀಡುತ್ತಿದ್ದೇವೆ. ನೀವು ನವೆಂಬರ್ 3ರ ಸಂಜೆ 5 ಗಂಟೆಯವರೆಗೆ ಅದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಳುಹಿಸಬಹುದು. ನಾವು ನವೆಂಬರ್ 4 ರಂದು ಫಲಿತಾಂಶವನ್ನು ಪ್ರಕಟಿಸುತ್ತೇವೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುಜರಾತ್‌ನಲ್ಲಿ ಹೇಳಿದರು.

ಇದಕ್ಕಾಗಿ, ನಾವು ಸಾರ್ವಜನಿಕರ ಅಭಿಪ್ರಾಯವನ್ನು ತಿಳಿಯಲು 6357000360 ಸಂಖ್ಯೆಯನ್ನು ನೀಡುತ್ತಿದ್ದೇವೆ. ಈ ಸಂಖ್ಯೆಗೆ ನೀವು SMS ಅಥವಾ WhatsApp ಸಂದೇಶವನ್ನು ಕಳುಹಿಸಬಹುದು ಅಥವಾ ಧ್ವನಿ ಸಂದೇಶವನ್ನು ಕಳುಹಿಸಬಹುದು. ನೀವು [email protected] ಗೆ ಇಮೇಲ್ ಮಾಡಬಹುದು ಎಂದು ಕೇಜ್ರಿವಾಲ್ ಹೇಳಿದರು.
ಬಿಜೆಪಿ ಆಡಳಿತವಿರುವ ರಾಜ್ಯಕ್ಕೆ ಕಾಲಿಡುವ ಹಂಬಲದಲ್ಲಿ ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ಎಎಪಿ ಗುಜರಾತದಲ್ಲಿ ರ್ಯಾಲಿಗಳನ್ನು ನಡೆಸುತ್ತಿದೆ ಮತ್ತು ಉಚಿತ ವಿದ್ಯುತ್, ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳಂತಹ ಚುನಾವಣಾ ಪೂರ್ವ ಭರವಸೆಗಳನ್ನು ನೀಡುತ್ತಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement