ತಳವಾರ, ಪರಿವಾರ ಜಾತಿಗಳನ್ನು ಒಬಿಸಿ ಮೀಸಲಾತಿ ಪಟ್ಟಿಯಿಂದ ಕೈಬಿಟ್ಟು ಸರ್ಕಾರ ಆದೇಶ

ಬೆಂಗಳೂರು: ತಳವಾರ (Talawara) ಮತ್ತು ಪರಿವಾರ ನಾಯಕ (Parivara Nayaka) ಜಾತಿಗಳನ್ನು ಹಿಂದುಳಿದ ವರ್ಗಗಳ (OBC) ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್‌ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಕಾರಣದಿಂದ ಈ ಜಾತಿಗಳನ್ನು ಒಬಿಸಿ ಮೀಸಲಾತಿ ಪಟ್ಟಿಯಿಂದ ರಾಜ್ಯ ಸರ್ಕಾರ ತೆಗೆದುಹಾಕಿದೆ.

20-03-2020ರಂದು ಭಾರತ ಸರ್ಕಾರವು ಗೆಜೆಟ್ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿನ ಕ್ರಮ ಸಂಖ್ಯೆ 38ರಲ್ಲಿ ಪರಿವಾರ ಮತ್ತು ತಳವಾರ ಜಾತಿಗಳ್ನು ಸೇರಿಸಲಾಗಿದೆ. ಈ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ನಿರ್ದೇಶಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement