ಪತ್ರಕರ್ತರಿಗೆ ಉಡುಗೊರೆ ಆರೋಪ ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್: ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಬೆಂಗಳೂರು : ಎಲ್ಲ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಉಡುಗೊರೆ ನೀಡಲಾಗಿದೆ ಎನ್ನುವುದು ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್. ಸುಳ್ಳು ಹೇಳುವ ಮೂಲಕ ಎಲ್ಲ ಪತ್ರಕರ್ತರಿಗೆ ಅವಮಾನಿಸಿರುವುದನ್ನು ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳನ್ನೇ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಪತ್ರಕರ್ತರಿಗೆ ಐ ಫೋನ್, ಚಿನ್ನದ ನಾಣ್ಯ ನೀಡಿತ್ತು. ಈಗ ಆರೋಪ ಮಾಡಲು ಕಾಂಗ್ರೆಸ್‌ಗೆ ಯಾವ ನೈತಿಕತೆ ಇದೆ. ಪತ್ರಕರ್ತರಿಗೆ ಹಣ ನೀಡಿದ್ದಾರೆಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಇದರ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು.
ಇತರೆ ಹಿಂದುಳಿದ ವರ್ಗಗಳು ಬಿಜೆಪಿ ಬೆನ್ನಿಗೆ ನಿಂತಿರುವ ಸಂಕೇತವಾಗಿ ಕಲಬುರಗಿಯಲ್ಲಿ ಇಂದು, ಭಾನುವಾರ ಒಬಿಸಿ ಮೋರ್ಚಾ ಸಮಾವೇಶ ನಡೆಯುತ್ತಿದ್ದು, ಎರಡು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದಾದ ಬಳಿಕ ಎಸ್​ಟಿ, ಎಸ್​ಸಿ ಮೋರ್ಚಾ ಸಮಾವೇಶಗಳು ನಡೆಯಲಿವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement