ಭಗತ್ ಸಿಂಗ್ ನೇಣುಗಂಬಕ್ಕೇರುವ ಪಾತ್ರದ ಅಭ್ಯಾಸ ಮಾಡುತ್ತಿದ್ದಾಗ ವಿದ್ಯಾರ್ಥಿ ಸಾವು

ಚಿತ್ರದುರ್ಗ: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ನೇಣುಗಂಬಕ್ಕೆ ಏರುವ ಪಾತ್ರದ ಪ್ರಾಕ್ಟೀಸ್‌ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೇಣು ಬಿಗಿದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಆಘಾತಕಾರಿ ಘಟನೆ ನಗರದ ಕೆಳಗೋಟೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸಂಜಯ್ ಗೌಡ (12) ಎಂದು ಗುರುತಿಸಲಾಗಿದೆ. ಈತ ನಗರದ ಎಸ್.ಎಲ್.ವಿ ಶಿಕ್ಷಣ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಹೇಳಲಾಗಿದೆ.

ನವೆಂಬರ್‌ 1ರಂದು ರಾಜ್ಯೋತ್ಸವ ಸಮಾರಂಭದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯು ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಪಾತ್ರ ಮಾಡಬೇಕಿತ್ತು. ಇದಕ್ಕೆ ಸಿದ್ಧತೆ ಮಾಡಿಕೊಳ್ಳುವಾಗ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಮನೆಯಲ್ಲಿ ತಂದೆ-ತಾಯಿ ಇಲ್ಲದಿರುವಾಗ ವಿದ್ಯಾರ್ಥಿ ಸಂಜಯ್, ಶಹೀದ್‌ ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದ. ಭಗತ್‌ ಸಿಂಗ್‌ ನೇಣುಗಂಬ ಏರುವ ಸಂದರ್ಭದ ಅಭಿನಯಕ್ಕೆ ಫ್ಯಾನಿಗೆ ನೂಲಿನ ಹಗ್ಗ ಕಟ್ಟಿಕೊಂಡು ಅಭ್ಯಾಸ ಮಾಡಲು ಮುಂದಾಗಿದ್ದಾನೆ. ಸ್ಟೂಲ್ ಮೇಲೆ ನಿಂತು ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಟೂಲ್ ಜಾರಿದ್ದರಿಂದ ನೇಣು ಬಿಗಿದುಕೊಂಡು ಉಸಿರುಗಟ್ಟಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement