ಹಬ್ಬದಲ್ಲಿ ಪತ್ರಕರ್ತರಿಗೆ ಸ್ವೀಟ್‌ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದೆ : ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು : ರಾಜ್ಯದಲ್ಲಿ ಹಬ್ಬದ ಸಂದರ್ಭದಲ್ಲಿ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದ್ದು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರು ಈ ಬಗ್ಗೆ ರಾಜ್ಯದ ಕಾಂಗ್ರೆಸ್‌ ನಾಯಕರಿಂದ ಮಾಹಿತಿ ಪಡೆದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು ಅನಗತ್ಯ ಆಧಾರ ರಹಿತ ಆರೋಪ ಮಾಡುತ್ತಿರುವ ಮೂಲಕ ಹಳೆಯ ಟೇಪನ್ನೇ ರಿಪೀಟ್ ಮಾಡುತ್ತಿದ್ದಾರೆ. ಭಾರತ ಜೋಡೊ ಪಾದಯಾತ್ರೆ ಫಲ ನೀಡಿಲ್ಲ ಎನ್ನುವುದು ಅವರಿಗೆ ಅರಿವಾದಂತಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಕಳೆದ ಒಂದು ವರ್ಷದಿಂದ ಕೇವಲ ಆರೋಪ ಮಾಡುತ್ತಿದ್ದು, ಆರೋಪಕ್ಕೆ ಯಾವುದೇ ದಾಖಲೆ ನೀಡಿಲ್ಲ. ಈಗ ಹೊಸ ರಾಗದಲ್ಲಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ನ ಟೂಲ್ ಕಿಟ್. ಮಾನ್ಯ ಸುರ್ಜೇವಾಲಾ ಅವರೇ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.ನಿಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಭ್ರಷ್ಟಾಚಾರದ ದೊಡ್ಡ ಪಟ್ಟಿಯೇ ದೇಶದ ಜನರ ಮುಂದಿದೆ. ಹಾಸಿಗೆ ದಿಂಬು, ರಿ ಡೂ ಹಗರಣ, ಸೋಲಾರ್ ಹಗರಣಕ್ಕೆ ಉತ್ತರ ಕೊಡುವಿರಾ ಎಂದು ಬಿಜೆಪಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ ಅವರು ಐಫೋನ್ ಗಿಫ್ಟ್ ನೀಡಿದ್ದು, ಮಾಜಿ ಸಚಿವರು ಲ್ಯಾಪ್ ಟಾಪ್ ಹಂಚಿದ್ದು, ಗೋಲ್ಡ್ ಕಾಯಿನ್ ಹಂಚಿಕೆ ಮಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲದಿದ್ದರೆ, ಪಕ್ಷದ ರಾಜ್ಯ ಉಸ್ತುವಾರಿಯಾಗಿ, ನಿಮ್ಮ ಪಕ್ಷದಲ್ಲಿನ ಬೆಳವಣಿಗೆಯ ಬಗ್ಗೆ ಮೊದಲು ತಿಳಿದುಕೊಳ್ಳುವುದು ಒಳಿತು ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

 

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement