ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯಗೆ ಭಾರತದ ಕ್ರಿಕೆಟ್‌ ತಂಡದ ನಾಯಕತ್ವದ ಹೊಣೆ

ಮುಂಬೈ: ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಬಾಂಗ್ಲಾದೇಶ (Bangladesh) ವಿರುದ್ಧದ ಸರಣಿಗಾಗಿ ಭಾರತದ ತಂಡವನ್ನು ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಉಮ್ರಾನ್ ಮಲಿಕ್‍ಗೆ ಅವರಿಗೆ ಮತ್ತೆ ಬುಲಾವ್‌ ನೀಡಲಾಗಿದೆ. ಆದರೆ ಗಾಯಾಳುವಾಗಿ ಟಿ20 ವಿಶ್ವಕಪ್ ಸರಣಿಯಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಈ ಎರಡೂ ಸರಣಿಯಿಂದಲೂ ಹೊರಗುಳಿದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್‍ರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಗಾಯಾಳುವಾಗಿದ್ದ ದೀಪಕ್ ಚಹರ್‌ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ.

ಭಾರತದ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ಏಕದಿನ ತಂಡ:
ಶಿಖರ್ ಧವನ್ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ಪ್ರಮುಖ ಸುದ್ದಿ :-   2027ರ ಉತ್ತರ ಪ್ರದೇಶ ಚುನಾವಣೆ | ಯೋಗಿ-ಅಖಿಲೇಶ ಜನಪ್ರಿಯತೆ-ಕಾರ್ಯಕ್ಷಮತೆ ; ನ್ಯೂಸ್18 ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು ?

ಬಾಂಗ್ಲಾದೇಶದ ಏಕದಿನ ಮತ್ತು ಟೆಸ್ಟ್ ಸರಣಿಗೆ ತಣಡದ ಆಯ್ಕೆ
ಬಾಂಗ್ಲಾದೇಶದ ಏಕದಿನ ಮತ್ತು ಟೆಸ್ಟ್ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ. ನಾಯಕ ರೋಹಿತ್ ಶರ್ಮಾ, ಕೊಹ್ಲಿ ಸೇರಿದಂತೆ ಆಲೌರೌಂಡರ್ ರವೀಂದ್ರ ಜಡೇಜಾರನ್ನು ಮತ್ತೆ ಬಿಸಿಸಿಐ (BCCI) ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಯಶ್‌ ದಯಾಲ್‌ಗೆ ಟೀಂ ಇಂಡಿಯಾ ಪರ ಆಡಲು ಅವಕಾಶ ನೀಡಲಾಗಿದೆ.

ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಗೆ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.

ಪ್ರಮುಖ ಸುದ್ದಿ :-   ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌, ಏಕದಿನ ಸರಣಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ

ಟೆಸ್ಟ್ ಸರಣಿ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ.ಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement