ರಾಜ್ಯ ಸರ್ಕಾರದಿಂದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರವು ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಐಎಎಸ್ ಅಧಿಕಾರಿ ಶೆಟ್ಟೆಣ್ಣನವರ್ ಎಸ್. ಬಿ. ಅವರನ್ನು ಹಟ್ಟಿ ಗೋಲ್ಡ್ ಮೈನಿಂಗ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಮಂಜುನಾಥ್ ಜೆ ಅವರನ್ನು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
ಅನ್ನೀಸ್ ಕಣ್ಮಣಿ ಜೋಯ್ ಅವರನ್ನು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್‌ನ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದೆ. ಚಾರುಲತಾ ಸೋಮಲ್ ಅವರನ್ನು ನವದೆಹಲಿಯ ಕರ್ನಾಟಕ ಭವನದ ಎಆರ್‌ಸಿ ಆಗಿ ನೇಮಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಐಎಎಸ್ ಅಧಿಕಾರಿ ಬಸವರಾಜೇಂದ್ರ ಹೆಚ್ ಅವರನ್ನು ಸ್ಕಿಲ್ ಡೆಲವೆಲಪ್‌ಮೆಂಟ್, ಎಂಟರ್ ಪ್ರೈನರ್ ಮತ್ತು ಲೈವ್ಲಿ ಹುಡ್ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಕವಿತಾ ಎಸ್‌ ಮನ್ನಿಕೇರಿ ಅವರನ್ನು ಬೆಂಗಳೂರಿನ ಕರ್ನಾಟಕ ಹೌಸಿಂಗ್‌ ಬೋರ್ಡ್‌ ಆಯುಕ್ತರನ್ನಾಗಿ ನೇಮಿಸಲಾಗಿದೆ.
ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಆಗಿದ್ದ ರವಿಕುಮಾರ ಎಂ.ಆರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಡಾ.ವಾಸಂತಿ ಅಮರ ಬಿ.ವಿ. ಅವರನ್ನು ಕೆಎಸ್‌ಎಂಸಿಎಲ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುದ್ದೆಯಿಂದ ಬೆಂಗಳೂರು ನಗರ ಉತ್ತರ ವಿಭಾಗದ ವಿಶೇಷ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement