ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ನವೆಂಬರ್‌ 5ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್‌

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿಯ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಾಗಿರುವ ಮೂವರು ಆರೋಪಿಗಳನ್ನು ಮಾಗಡಿ ನ್ಯಾಯಾಲಯವು ವಿಚಾರಣೆಗಾಗಿ ಐದು ದಿ‌ನ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಮಾಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಜೆಎಂಎಫ್‌ಸಿ ಎಂ. ಧನಲಕ್ಷ್ಮಿ ಅವರ ಮುಂದೆ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಹಾಜರು ಪಡಿಸಿದರು. ಹಾಗೂ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡುವಂತೆ ಸರ್ಕಾರಿ ಅಭಿಯೋಜಕರು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ನವೆಂಬರ್ 4ರ ವರೆಗೆ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದರು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ಅಕ್ಟೋಬರ್‌ 24ರಂದು ಮಾಗಡಿ ತಾಲ್ಲೂಕಿನ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ (45) ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳದಲ್ಲಿ ದೊರೆತ ಡೆತ್‌ನೋಟ್‌, ಸ್ವಾಮೀಜಿ ಹನಿಟ್ರ್ಯಾಪ್‌ಗೆ ಒಳಗಾಗಿರುವ ಸುಳಿವು ನೀಡಿತ್ತು. ಅದನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಬಸವಲಿಂಗ ಸ್ವಾಮೀಜಿ ಹಾಗೂ ಆರೋಪಿ ನೀಲಾಂಬಿಕೆಗೆ ವರ್ಷದ ಹಿಂದೆಯೇ ಪರಿಚಯ ಆಗಿತ್ತು. ನಂತರ ಅವಳು ಮಠಕ್ಕೆ ಬಂದಿದ್ದಳು. ನಂತರ ಸಲುಗೆ ಬೆಳೆದಿತ್ತು. ಫೆಬ್ರುವರಿಯಿಂದ ಈ ಇಬ್ಬರು ನಿರಂತರ ಸಂಪರ್ಕದಲ್ಲಿದ್ದರು. ವಿಡಿಯೊ ಚಾಟ್‌ಗಳು ನಡೆಯುತ್ತಿತ್ತು. ಏಪ್ರಿಲ್‌ನಲ್ಲಿ ವೀಡಿಯೊ ಮಾಡಿಕೊಂಡ ನೀಲಾಂಬಿಕೆ ಅದನ್ನು ಮೃತ್ಯುಂಜಯ ಸ್ವಾಮೀಜಿಗೆ ತಲುಪಿಸಿದ್ದಳು. ಸ್ವಾಮೀಜಿ ಅದನ್ನು ವಕೀಲ ಮಹದೇವಯ್ಯರಿಗೆ ತಲುಪಿಸಿ, ಎಡಿಟ್ ಮಾಡಿಸಿ ಸಿ ಡಿ ಮಾಡಿಸಿಕೊಂಡಿದ್ದರು. ಅಲ್ಲಿಂದ ಬಸವಲಿಂಗ ಸ್ವಾಮೀಜಿಗೆ ಬ್ಲಾಕ್‌ಮೇಲ್ ಮಾಡಲಾಗಿತ್ತು. ನಂತರದಲ್ಲಿ ಆ ಸಿ ಡಿಯನ್ನು ಹಲವು ಮುಖಂಡರಿಗೂ ಹಂಚಲಾಗಿತ್ತು ಎಂದು ಆರೋಪಿಸಲಾಗಿದೆ. ಇದಕ್ಕೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement