ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ : ಬಿಜೆಪಿ ಮೇಲುಗೈ; ಮುಗ್ಗರಿಸಿದ ಕಾಂಗ್ರೆಸ್‌

ವಿಜಯಪುರ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  35 ಸ್ಥಾನಗಳಲ್ಲಿ 17 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮೇಲುಗೈ ಸಾಧಿಸಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ವಿಜಯ ನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅವರು ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಂತಾಗಿದೆ.
35 ವಾರ್ಡುಗಳಲ್ಲಿ ಬಿಜೆಪಿ-17, ಕಾಂಗ್ರೆಸ್‌-10, ಪಕ್ಷೇತರರು-5, ಎಐಎಂಐಎಂ-2, ಜೆಡಿಎಸ್‌-1 ವಾರ್ಡುಗಳಲ್ಲಿ ಜಯಗಳಿಸಿದೆ.
ಎಲ್ಲಾ 35 ವಾರ್ಡ್ ಗಳಲ್ಲಿ ಬಿಜೆಪಿ 33 ವಾರ್ಡ್ ಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್‌ ಎಲ್ಲ ವಾರ್ಡುಗಳಿಗೂ ಅಭ್ಯರಥಿಗಳನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್‌ 10 ಸ್ಥಾನಕ್ಕೆ ತೃಪ್ತಿಪಟ್ಟಿದೆ. ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಸ್ಪರ್ಧಿಸಿದ ನಾಲ್ಕು ವಾರ್ಡುಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದೆ.ಜೆಡಿಎಸ್‌ಗೆ 20 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ ಒಂದು ವಾರ್ಡ್ ನಲ್ಲಿ ಮಾತ್ರ ಗೆಲ್ಲಲು ಸಾಧಿಸಿದ್ದು ಊವರು ಪಕ್ಷೇತರರು ಗೆದ್ದಿದ್ದಾರೆ. ಪಕ್ಷೇತರರು ಒಂಬತ್ತು ವಾರ್ಡಗಳಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಖಾತೆ ತೆರೆಯಲಿಲ್ಲ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement