11 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ 11 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪ್ರಿನ್ಸಿಪಲ್ ಸೆಕ್ರೇಟರಿ ಆಗಿದ್ದ ಮಾಲಿನಿ ಕೃಷ್ಣ ಮೂರ್ತಿ ಅವರನ್ನು ಐಎಸ್‌ಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಎಸಿಬಿ ಸೀಮಂತ್ ಕುಮಾರ್ ಸಿಂಗ್ ಅವರನ್ನ ಕೆಎಸ್‌ಆರ್‌ಪಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಕೆಎಸ್‌ಆರ್‌ಪಿ ಐಜಿಪಿ (IGP) ಆಗಿದ್ದ ಎಸ್.ರವಿ ಅವರನ್ನು ಪೊಲೀಸ್ ಅಂಡ್ ಪ್ರಿನ್ಸಿಪಲ್ ಸೆಕ್ರೆಟೆರಿ ಆಗಿ ವರ್ಗಾಯಿಸಲಾಗಿದೆ. ಅಜಯ ಹಿಲೋರಿ ಅವರನ್ನ ಡಿಸಿಆರ್‌ಇ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಿದೆ.

ಎಸಿಬಿ ಪೊಲೀಸ್ ಅಧೀಕ್ಷಕರಾಗಿದ್ದ ಯತೀಶಚಂದ್ರ ಅವರನ್ನ ಡಿಸಿಪಿ-2 ಅಪರಾಧ ವಿಭಾಗಕ್ಕೆ, ಕಲಬುರಗಿ ಜಿಲ್ಲೆಯ ಎಸಿಬಿ ಎಸ್ಪಿ ಆಗಿದ್ದ ವೈ ಅಮರನಾಥ ರೆಡ್ಡಿ ಅವರನ್ನ ಗುಪ್ತಚರ ದಳದ ಅಧೀಕ್ಷಕರನ್ನಾಗಿ ವರ್ಗಾಯಿಸಲಾಗಿದೆ. ಬಳ್ಳಾರಿಯ ಎಸಿಬಿ ಎಸ್ಪಿ ಶ್ರೀಹರಿ ಬಾಬು ಬಿಎಲ್ ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್ಪಿಯಾಗಿ ನೇಮಕ ಮಾಡಿದೆ. ಎಸಿಬಿ ಎಸ್ಪಿ ಆಗಿದ್ದ ಡಾ.ಶೋಭಾರಾಣಿ ಅವರನ್ನ ಬೆಂಗಳೂರಿನ ಬಿಎಂಟಿಎಫ್ ಆಗಿ, ಮೈಸೂರು ವಿಭಾಗದ ಎಸಿಬಿ ಎಸ್ಪಿಯಾಗಿದ್ದಂತ ಸಜೀತ್ ವಿ.ಜೆ. ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್ಪಿಯನ್ನಾಗಿ ನೇಮಿಸಿದೆ. ರಾಂ ಎಲ್ ಅರಶಿದ್ದಿ ಅವರನ್ನು ವಿಜಯಪುರ ಜಿಲ್ಲೆಯ ಹೆಚ್ಚುವರಿ ಎಸ್‌ಪಿಯಿಂದ ವರ್ಗಾವಣೆ ಮಾಡಿ ಕರ್ನಾಟಕ ಲೋಕಾಯುಕ್ತ ಎಸ್ಪಿಯನ್ನಾಗಿ ನೇಮಿಸಿದೆ. ಬೆಳಗಾವಿಯ ಎಸಿಬಿ ಎಸ್ಪಿ ಬಾಬಸಾಬ್ ನೇಮಗೌಡ ಅವರನ್ನು ಬೆಳಗಾವಿಯ ಗುಪ್ತಚರದ ಎಸ್‌ಪಿಯಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಪ್ರಮುಖ ಸುದ್ದಿ :-   ಕುಶಾಲನಗರ: ನಿಂತಿದ್ದ ಕಾರಿನಲ್ಲಿ ವೈದ್ಯ ಶವವಾಗಿ ಪತ್ತೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement