ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ‘ಏರಿಯಲ್ ಲ್ಯಾಡರ್’ : ಇಂದು ಹಸ್ತಾಂತರ

ಬೆಂಗಳೂರು: ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸುವ ಆಗ್ನಿ ಅವಘಡಗಳನ್ನ ನಿಯಂತ್ರಿಸುವ ವಾಹನ ‘ಏರಿಯಲ್ ಲ್ಯಾಡರ್’ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಬಂದಿದೆ. ಬೆಂಕಿ ಅನಾಹುತ ಸಂಭವಿಸಿದಾಗ ‘ಏರಿಯಲ್ ಲ್ಯಾಡರ್’ ಮೂಲಕ 90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿ ನಂದಿಸಬಹುದಾಗಿದೆ. ಇದನ್ನು ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ … Continued

“ಬೇಗ ಹೊರಡಿ”: ರಷ್ಯಾ-ಉಕ್ರೇನ್‌ ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ಉಕ್ರೇನ್‌ನಲ್ಲಿರುವ ತನ್ನ ನಾಗರಿಕರಿಗೆ ಸೂಚಿಸಿದ ಭಾರತ

ನವದೆಹಲಿ: ಉಕ್ರೇನ್‌ನಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಉಕ್ರೇನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಭಾರತ ತನ್ನ ಎಲ್ಲಾ ನಾಗರಿಕರಿಗೆ ಬುಧವಾರ ಸಲಹೆ ನೀಡಿದೆ. ಪ್ರಸ್ತುತ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಲಭ್ಯವಿರುವ ವಿಧಾನಗಳ ಮೂಲಕ ಉಕ್ರೇನ್‌ನಿಂದ ಬೇಗನೆ ಹೊರಡುವಂತೆ ಸೂಚಿಸಲಾಗಿದೆ” ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿದೆ. … Continued

ಬಲಿಪಾಡ್ಯಮಿ ದಿನ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಬಲಿಪಾಡ್ಯಮಿ ದಿನ ಅಕ್ಟೋಬರ್ 26ರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. 24 ವರ್ಷಗಳ ನಂತರ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಲಿಕೊಳ್ಳಲಿರುವ ಅವರು, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7897 ಮತಗಳನ್ನು ಪಡೆದು ಜಯಗಳಿಸಿದ್ದಾರೆ, ಅವರ ಪ್ರತಿಸ್ಪರ್ಧಿ ಶಶಿ ತರೂರ್ … Continued

ಬ್ರಿಟನ್‌ನ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್ಮನ್

ಲಂಡನ್‌: ಭಾರತೀಯ ಮೂಲದ ಬ್ರಿಟನ್ನಿನ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರಾವರ್‌ಮನ್ ಕೇವಲ ಆರು ವಾರಗಳ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀತಿಯ ಬಗ್ಗೆ ಭಿನ್ನಾಭಿಪ್ರಾಯಕ್ಕಿಂತ ಹೆಚ್ಚಾಗಿ “ಪ್ರಾಮಾಣಿಕ ತಪ್ಪಿನಿಂದ” ಅವರು ಕೆಳಗಿಳಿಯುತ್ತಿದ್ದಾರೆ ಎಂದು ತಿಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. ಎಂಎಸ್ ಬ್ರೆವರ್‌ಮನ್ ನಂತರ ಲಿಜ್ ಟ್ರಸ್ ಪ್ರಧಾನ ಮಂತ್ರಿ ಅವಧಿಯ ಆರು ವಾರಗಳಲ್ಲಿ … Continued

ಹುಬ್ಬಳ್ಳಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಡಾ.ವೀರೇಂದ್ರ ಹೆಗ್ಗಡೆಗೆ ಜೈನ ಸಮಾಜದಿಂದ ಸನ್ಮಾನ

ಹುಬ್ಬಳ್ಳಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಧಾರವಾಡದ ಸತ್ತೂರಿನಲ್ಲಿ ಜೈನ ಸಮಾಜದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಜೈನ್ ರಾಜಸ್ಥಾನ ವಿದ್ಯಾ ಪ್ರಚಾರಕ ಮಂಡಲದ ಅಧ್ಯಕ್ಷ ಭವರಲಾಲ್ ಸಿ. ಜೈನ್, ಶ್ರೀ ಜೈನ್ ರಾಜಸ್ಥಾನ ವಿದ್ಯಾ ಪ್ರಚಾರಕ ಮಂಡಲದ ಕಾರ್ಯದರ್ಶಿ ಹಾಗೂ ಲೆಕ್ಕಪರಿಶೋಧಕ ಭರತ್ … Continued

ನವಂಬರ್14 ರಿಂದ‌ ʼಸಹಕಾರ ಸಪ್ತಾಹʼ, ಕಲಬುರಗಿಯಲ್ಲಿ ಉದ್ಘಾಟನೆ : ಸಚಿವ ಸೋಮಶೇಖರ ಮಾಹಿತಿ

ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷ ಕೂಡ ನವೆಂಬರ್ 14 ರಿಂದ 20ರ ವರೆಗೆ ಸಹಕಾರ ಸಪ್ತಾಹ ನಡೆಯಲಿದೆ. ನವೆಂಬರ್ 14ರಂದು ಹಿರಿಯ ಸಹಕಾರಿಗಳಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ ಹೇಳಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಸಭಾಂಗಣ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಹಕಾರ ಸಪ್ತಾಹದ ಪೂರ್ವಭಾವಿ ಸಿದ್ಧತಾ ಸಭೆ” … Continued

ಸ್ಟಾಫ್ ಸೆಲೆಕ್ಷನ್ ಕಮಿಷನ್: 990 ಸೈಟಿಂಸ್ಟ್​ ಹುದ್ದೆಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ 990 ಸೈಟಿಂಸ್ಟ್​ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಹವಾಮಾನ ಇಲಾಖೆಯಲ್ಲಿ (IMD) ಈ ನೇಮಕಾತಿ ನಡೆಯಲಿದ್ದು, ಇವುಗಳು ಗ್ರೂಪ್​​ ಬಿ ನಾನ್​ ಗೆಜೆಟ್​ ಹುದ್ದೆಗಳಾಗಿವೆ. ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 18. … Continued

ಕನಕಪುರದಲ್ಲಿ ರೇಷನ್ ಕಾರ್ಡ್​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ; ಮತ್ತೆ ವಿವಾದ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ವಿವಾದ ಶುರುವಾಗಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಪಡಿತರಿಗೆ ನೀಡುವ ರೇಷನ್ ಕಾರ್ಡ್​​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ ಮಾಡಿ ಹಂಚಲಾಗಿದೆ. ಮುದ್ರಣವಾಗಿರುವ ರೇಷನ್ ಕಾರ್ಡ್​ಗಳು ಗಮನಕ್ಕೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಆಕ್ರೋಶವ್ಯಕ್ತಪಡಿಸಿವೆ. ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತನ ಫೋಟೋ ಮುದ್ರಿಸಲಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ … Continued

ಇದೇ ಮೊದಲ ಬಾರಿಗೆ ಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

ನವದೆಹಲಿ: ಬುಧವಾರ ಡಾಲರ್ ವಿರುದ್ಧ ರೂಪಾಯಿಯು ಕನಿಷ್ಠ ಮಟ್ಟಕ್ಕೆ ಕುಸಿಯಿತು. ಬುಧವಾರ ಮುಕ್ತಾಯದ ವೇಳೆಗೆ ಪ್ರತಿ ಡಾಲರ್‌ಗೆ 83.02 ರೂ.ಗಳಿಗೆ ಈವರೆಗಿನ ಕನಿಷ್ಠ ಮಟ್ಟಕ್ಕೆ ಕುಸಿಯಿತು. 82.3062 ನಲ್ಲಿ ಪ್ರಾರಂಭವಾದ ನಂತರ ಡಾಲರ್ ಎದುರು ರೂಪಾಯಿ ತನ್ನ ಹಿಂದಿನ 82.36 ಕ್ಕೆ ಹೋಲಿಸಿದರೆ ಬುಧವಾರದ ವಹಿವಾಟಿನಲ್ಲಿ ಗ್ರೀನ್‌ಬ್ಯಾಕ್ ವಿರುದ್ಧ ದೇಶೀಯ ಕರೆನ್ಸಿ ಹೊಸ ಇಂಟ್ರಾ-ಡೇ ದಾಖಲೆಯ … Continued

ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ಗುಡ್​ ನ್ಯೂಸ್ : 50 ಲಕ್ಷ ರೂ. ವರೆಗೆ ಅಪಘಾತ ವಿಮೆ ಯೋಜನೆ ಜಾರಿ

ಬೆಂಗಳೂರು: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರ ಮೊದಲ ಬಾರಿಗೆ ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ 50 ಲಕ್ಷ ರೂ.ಗಳ ವರೆಗೆ ಅಪಘಾತ ವಿಮೆ ಯೋಜನೆ(Insurance Scheme)ಯನ್ನು ನಿಗಮ ಜಾರಿ ಮಾಡಿದೆ. ಈ ಸಂಬಂಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಜತೆ ಕೆಎಸ್‌ಆರ್‌ಟಿಸಿ ಬುಧವಾರ ಒಡಂಬಡಿಕೆ ಮಾಡಿಕೊಂಡಿದೆ. ನಿಗಮದ ಅಧ್ಯಕ್ಷ ಚಂದ್ರಪ್ಪ ಸಮ್ಮುಖದಲ್ಲಿ … Continued