ಹುಬ್ಬಳ್ಳಿ -ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಕೇವಲ ಘೋಷಣೆಯಲ್ಲಿ ಮಾತ್ರ, ಕಾರ್ಯರೂಪದಲ್ಲಿಲ್ಲ ಯಾಕೆ : ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕೇವಲ ೨೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣ ಕೈಗೊಂಡ ಧಾರವಾಡ ರೈಲು ನಿಲ್ದಾಣವನ್ನು ಲೋಕಾರ್ಪಣೆಗೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರು ಮತ್ತದೆ ಹಳೆಯ ವಂದೇ ಭಾರತ ರೈಲು ಸೇವೆ ಒದಗಿಸುವ ಘೋಷಣೆಯನ್ನು ಮುಂದಿನ ಚುನಾವಣಾ ದೃಷ್ಟಿಯಿಂದ ಮಾಡಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, … Continued

ಹಿಜಾಬ್ ನಿಷೇಧ: ಸುಪ್ರೀಂಕೋರ್ಟ್ ವಿಭಜಿತ ತೀರ್ಪು; ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪಿಗೆ ಸುಪ್ರೀಂ ಕೋರ್ಟ್ ಗುರುವಾರ ವಿಭಜಿತ ತೀರ್ಪು ನೀಡಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅದನ್ನು ತಳ್ಳಿಹಾಕಿದ್ದಾರೆ. ಅಭಿಪ್ರಾಯದಲ್ಲಿ ಭಿನ್ನಾಭಿಪ್ರಾಯವಿದೆ. ನಾನು ಮೇಲ್ಮನವಿಯನ್ನು ವಜಾಗೊಳಿಸುವುದಾಗಿ ನ್ಯಾಯಮೂರ್ತಿ ಹೇಮಂತ್ … Continued

ವಾಟ್ಸಾಪ್ ಗ್ರೂಪ್‌ನಲ್ಲಿ ಶೀಘ್ರದಲ್ಲೇ 1,024 ಜನರನ್ನು ಸೇರಿಸಲು ಅವಕಾಶ: ವರದಿ

ಮೆಟಾ-ಮಾಲೀಕತ್ವದ ತ್ವರಿತ ಸಂದೇಶ ಕಳುಹಿಸುವ ಅಪ್ಲಿಕೇಶನ್ ವಾಟ್ಸ್‌ಆಪ್‌ (WhatsApp) ಶೀಘ್ರದಲ್ಲೇ ತನ್ನ ಬಳಕೆದಾರರಿಗೆ ದೊಡ್ಡ ಗ್ರೂಪ್‌ಗಳನ್ನು ಕ್ರಿಯೇಟ್ ಮಾಡಲು ಅನುಮತಿಸುತ್ತದೆ ಎಂದು ವರದಿಯಾಗಿದೆ. ಈ ಸಂಖ್ಯೆಯನ್ನು 1024 ಗೆ ಹೆಚ್ಚಿಸಲು ಈಗ ವಾಟ್ಸಾಪ್ ಸಂಸ್ಥೆ ಕೆಲಸ ಮಾಡುತ್ತಿದೆ. WaBetaInfo ವರದಿಯ ಪ್ರಕಾರ, ವಾಟ್ಸ್‌ಆಪ್‌ ಬಳಕೆದಾರರು ಭವಿಷ್ಯದಲ್ಲಿ ಪ್ರತಿಗುಂಪಿನಲ್ಲಿ 1,024 ಸದಸ್ಯರನ್ನು ಸೇರಿಸಲು ಸಾಧ್ಯವಾಗುತ್ತದೆ. ಈ ವರ್ಷದ … Continued

ನೋಟು ಅಮಾನ್ಯೀಕರಣ : ಈ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೇಂದ್ರ, ಆರ್‌ಬಿಐಗೆ ಸೂಚಿಸಿದ ಸುಪ್ರೀಂಕೋರ್ಟ್

ನವದೆಹಲಿ: 500 ಮತ್ತು 1,000 ರೂಪಾಯಿ ನೋಟುಗಳ ಅಮಾನ್ಯೀಕರಣದ ನಿರ್ಧಾರದ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೇಂದ್ರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಬುಧವಾರ ಸೂಚಿಸಿದ್ದು, ಆರ್‌ಬಿಐ (RBI) ಕಾಯಿದೆಯ ಸೆಕ್ಷನ್ 26 ಅಡಿಯಲ್ಲಿ ಸರ್ಕಾರಕ್ಕೆ ಹಾಗೆ ಮಾಡಲು ಅಧಿಕಾರವಿದೆಯೇ ಎಂದು ಪರಿಶೀಲಿಸುವುದಾಗಿ ಹೇಳಿದೆ. ನ್ಯಾಯಮೂರ್ತಿಗಳಾದ ಎಸ್‌ಎ ನಜೀರ್, … Continued

ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್​​ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್​.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಎಲ್​.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ … Continued

ಕಾಶಿ ದೇವಸ್ಥಾನದಲ್ಲಿ ಗಿಟಾರ್‌ನೊಂದಿಗೆ ಹನುಮಾನ್ ಚಾಲೀಸಾ ಪಠಣ ಮಾಡುತ್ತಿರುವ ವಿದೇಶಿಯರು | ವೀಕ್ಷಿಸಿ

ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ಹನುಮಂತನ ಕೃಪಾಶೀರ್ವಾದ ಪಡೆಯಲು ಹಾಗೂ ದುಷ್ಟಶಕ್ತಿಗಳು ಮತ್ತು ನಕಾರಾತ್ಮಕ ಶಕ್ತಿಯನ್ನು ದೂರವಿಡಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ಹನುಮಾನ್ ಚಾಲೀಸಾವನ್ನು ಅತ್ಯಂತ ಸಮರ್ಪಣೆಯಿಂದ ಓದುವವರು ತಮ್ಮ ಪ್ರಯತ್ನಗಳಲ್ಲಿ ಅಡೆತಡೆಗಳನ್ನು ನಿವಾರಿಸುವ ಭಗವಾನ್ ಹನುಮಂತನ ದಿವ್ಯ ರಕ್ಷಣೆಯನ್ನು ಆಹ್ವಾನಿಸುತ್ತಾರೆ ಎಂದು ನಂಬಲಾಗಿದೆ. ಭಾರತೀಯ ಸಂಪ್ರದಾಯಗಳು, ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಗಳು ಅನೇಕ ವಿದೇಶಿಯರನ್ನು … Continued

ಯಕ್ಷಗಾನ ವೇಷದಲ್ಲಿ ಮಿಂಚಿದ ಕನ್ನಡದ ಖ್ಯಾತ ನಟ ರಮೇಶ

ಉಡುಪಿ : ನಟ ರಮೇಶ ಅರವಿಂದ ಅವರು ಯಕ್ಷಗಾನ ನಟರಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಯ ಹಲವು ದಿನಗಳ ಕನಸನ್ನು ಕೊನೆಗೂ ನನಸು ಮಾಡಿಕೊಂಡಿದ್ದಾರೆ. ಉಡುಪಿಯ ಪ್ರವಾಸದಲ್ಲಿರುವ ರಮೇಶ್ ಅರವಿಂದ್ ಕೂದ್ರು ನೆಸ್ಟ್ ಗೆಸ್ಟ್ ಹೌಸಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭ ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷವನ್ನು ಹಾಕಿಸಿಕೊಂಡಿದ್ದಾರೆ. … Continued

ಎಎಪಿಗೆ ಹಿನ್ನಡೆ: ಬಿಜೆಪಿಯ ತಜೀಂದರ್ ಬಗ್ಗಾ, ಕುಮಾರ ವಿಶ್ವಾಸ್ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಪಂಜಾಬ್-ಹರಿಯಾಣ ಹೈಕೋರ್ಟ್

ಚಂಡೀಗಡ: ಮಾಜಿ ಎಎಪಿ ನಾಯಕ ಕುಮಾರ ವಿಶ್ವಾಸ ಮತ್ತು ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ಬಗ್ಗಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದು ‘ಕಾನೂನಿನ ಪ್ರಕ್ರಿಯೆಯ ದುರುಪಯೋಗ’ ಎಂದು ನ್ಯಾಯಾಲಯ ಹೇಳಿದೆ. ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ … Continued

ಉದ್ಯಾನವನಕ್ಕೆ ಮೀಸಲಿಟ್ಟ ಜಮೀನು ಡಿನೋಟಿಫೈ ಮಾಡಿದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು ಮೂರು ಎಕರೆ ಭೂಮಿಯನ್ನು ಬಿಲ್ಡರ್‌ ಒಬ್ಬರಿಗೆ ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮ್‌ ಭಟ್‌ ವಿರುದ್ಧ ಬುಧವಾರ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಬೆಂಕಿ ಹಚ್ಚಿಕೊಳ್ಳಲು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿಕಡ್ಡಿ ಹೊತ್ತಿಸಲು ಮುಂದಾದ ಬೆಂಗಳೂರು ದಂಪತಿ ರಕ್ಷಣೆ : ದೃಶ್ಯ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ನಗರದ ಒಳಚರಂಡಿಗೆ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವು ಮಾಡಲು ಮುಂದಾದ ಪೌರಕಾರ್ಮಿಕರಿಗೆ ತಮ್ಮ ಮನೆ ಕೆಡವಿದರೆ ಬೆಂಕಿ ಹಚ್ಚಿಕೊಳ್ಳುವುದಾಗಿ ದಂಪತಿ ಇಂದು, ಬುಧವಾರ ಬುಲ್ಡೋಜರ್ ಮುಂದೆ ನಿಂತು ಬೆದರಿಕೆ ಹಾಕಿದ ಘಟನೆ ನಡೆದಿದೆ. ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನಗರದ ಈಶಾನ್ಯ ಭಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎನ್ನಲಾದ ಕಟ್ಟಡಗಳನ್ನು ನೆಲಸಮ ಕಾರ್ಯಾಚರಣೆ ನಡೆಸುತ್ತಿದ್ದಾಗ … Continued