ಧಾರ್ಮಿಕ ಮತಾಂತರದ ಕಾರ್ಯಕ್ರಮದಲ್ಲಿ ಸಚಿವರಾಗಿ ಉಪಸ್ಥಿತಿ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಲ್‌ಗೆ ಪೊಲೀಸರಿಂದ ಸಮನ್ಸ್

ನವದೆಹಲಿ: ದೆಹಲಿಯ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಬಿಜೆಪಿ ಪ್ರತಿಭಟನೆಯ ನಂತರ ಭಾನುವಾರ ರಾಜೀನಾಮೆ ನೀಡಿದ್ದು, ಅವರನ್ನು ಈಗ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಹಿಂದೂ ದೇವತೆಗಳನ್ನು ನಿಂದಿಸಲಾಗಿದೆ ಎಂದು ಹೇಳಲಾದ ಕಾರ್ಯಕ್ರಮದಲ್ಲಿ ಪಾಲ್ ಅವರ ಉಪಸ್ಥಿತಿಯ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ … Continued

ಈ ವರ್ಷದ ನವರಾತ್ರಿ ವೇಳೆ 5.40 ಲಕ್ಷ ವಾಹನಗಳ ದಾಖಲೆಯ ಮಾರಾಟ: 57% ರಷ್ಟು ಹೆಚ್ಚಳ ಎಂದ ಎಫ್‌ಎಡಿಎ

ನವದೆಹಲಿ: ಈ ವರ್ಷ ನವರಾತ್ರಿ ಉತ್ಸವದಲ್ಲಿ ದೇಶದಲ್ಲಿ ವಾಹನ ಚಿಲ್ಲರೆ ಮಾರಾಟವು ಶೇಕಡಾ 57 ರಷ್ಟು ಏರಿಕೆಯಾಗಿದ್ದು, ಸುಮಾರು 5.4 ಲಕ್ಷ ವಾಹನಗಳ ದಾಖಲೆಯ ಮಾರಾಟವಾಗಿದೆ ಎಂದು ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್‌ಗಳ ಒಕ್ಕೂಟ ಸೋಮವಾರ ತಿಳಿಸಿದೆ. ಸೆಪ್ಟೆಂಬರ್ 26 ಮತ್ತು ಅಕ್ಟೋಬರ್ 5ರ ನಡುವಿನ ಒಟ್ಟು 5,39,227 ವಾಹನಗಳು ಮಾರಾಟವಾಗಿವೆ ಎಂದು ಅದು ತಿಳಿಸಿದೆ. ಕಳೆದ … Continued

ಬೆಳ್ಳಿ ಕಾಲುಂಗುರಕ್ಕಾಗಿ 108 ವರ್ಷದ ವೃದ್ಧೆಯ ಪಾದವನ್ನೇ ಕತ್ತರಿಸಿದ ಕಳ್ಳರು…!

ಜೈಪುರ: ವೃದ್ಧೆಯೊಬ್ಬರು ಧರಿಸಿದ್ದ ಬೆಳ್ಳಿಯ ಕಾಲುಂಗುರ ಕದಿಯಲು ಕಳ್ಳರು ಆಕೆಯ ಪಾದವನ್ನೇ ಕತ್ತರಿಸಿದ ಅಮಾನುಷ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಪಾದ ಕಳೆದುಕೊಂಡ  108 ವರ್ಷದ ಜಮುನಾ ದೇವಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಮುಂಜಾನೆ  5:30ರ ಸುಮಾರಿಗೆ  ಈ ಘಟನೆ ನಡೆದಿದ್ದು, ಆ ವೇಳೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದರು ಎಂದು ಹೇಳಲಾಗಿದೆ. ಈ … Continued

ನಾಳೆಯಿಂದ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾ ಪ್ರವಾಸ ಆರಂಭ

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತಾರೂಢ ಬಿಜೆಪಿ, ನಾಳೆ, ಮಂಗಳವಾರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಯಚೂರಿನಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ವಿಜಯ ಸಂಕಲ್ಪ ಯಾತ್ರೆ ಗಿಲ್ಲೇಸೂಗೂರು ಗ್ರಾಮದಿಂದ ಶುರುವಾಗಲಿದೆ. ರಾಜ್ಯಾದ್ಯಂತ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ವಿಜಯ ಸಂಕಲ್ಪ ಯಾತ್ರೆ … Continued

ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣಗಳಿಗೆ ಹೊಸ ಹೆಸರು ನೀಡಿದ ಚುನಾವಣಾ ಆಯೋಗ

ಮುಂಬೈ: ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗವು ಸೋಮವಾರ ಠಾಕ್ರೆ ನೇತೃತ್ವದ ಬಣಕ್ಕೆ ‘ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ)’ ಮತ್ತು ಏಕನಾಥ್ ಶಿಂಧೆ ಬಣ ‘ಬಾಳಾಸಾಹೆಬಂಚಿ ಶಿವಸೇನೆ’ ಎಂಬ ಹೆಸರನ್ನು ನಿಗದಿಪಡಿಸಿದೆ. ಚುನಾವಣಾ ಆಯೋಗವು ಠಾಕ್ರೆ ನೇತೃತ್ವದ ಶಿವಸೇನೆಗೆ ಪಕ್ಷದ ಚಿಹ್ನೆಯಾಗಿ ‘ಉರಿಯುವ ಟಾರ್ಚ್ʼ ನೀಡಿತು. ಆದರೆ, ಶಿಂಧೆ ಬಣಕ್ಕೆ ಪಕ್ಷದ ಚಿಹ್ನೆ … Continued

ಕಾನ್ಪುರ ದೇವಸ್ಥಾನದಲ್ಲಿ ಆರತಿ ಮಾಡುವಾಗ ಮಂಡಿಯೂರಿ ಶಿವನನ್ನು ಪ್ರಾರ್ಥಿಸಿದ ಮೇಕೆ ; ನಂಬಲಾಗದ ವೀಡಿಯೊ ವೈರಲ್- ಬೆರಗಾದ ಇಂಟರ್ನೆಟ್ …ವೀಕ್ಷಿಸಿ

ಪ್ರಾಣಿಗಳು ಅನಿರೀಕ್ಷಿತ ವರ್ತನೆಗಳನ್ನು ತೋರುವ ಮೂಲಕ ಮೂಕವಿಸ್ಮಿತರನ್ನಾಗಿ ಮಾಡುತ್ತವೆ. ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದೇಗುಲವೊಂದರ ಮುಂದೆ ಮೇಕೆಯೊಂದು ಮಂಡಿಯೂರಿ ಕುಳಿತು ನಮಸ್ಕರಿಸುತ್ತಿರುವ ವೀಡಿಯೊ ಈಗ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಈ ವೀಡಿಯೊವನ್ನು ಡೇವಿಡ್ ಜಾನ್ಸನ್ ಎಂಬ ಬಳಕೆದಾರರು ಭಾನುವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಪ್ಶನ್‌ನಲ್ಲಿ, ಕಾನ್ಪುರ ಜಿಲ್ಲೆಯ ಬಾಬಾ ಆನಂದೇಶ್ವರ ದೇವಸ್ಥಾನದಲ್ಲಿ ಭಕ್ತರೊಬ್ಬರು ಕ್ಲಿಪ್ ಅನ್ನು ಸೆರೆಹಿಡಿದಿದ್ದಾರೆ … Continued

ಮೋದಿ ಬಗ್ಗೆ ಸಂಸತ್ತಿನಲ್ಲಿ ಹೇಳಿಕೆ ನೀಡಿ ಪ್ರತಿಪಕ್ಷಗಳನ್ನೇ ಬೆಚ್ಚಿ ಬೀಳಿಸಿದ್ದ ಮುಲಾಯಂ ಸಿಂಗ್ ಯಾದವ್ ಮಾತನ್ನು ಗುಜರಾತ್‌ ಸಮಾವೇಶದಲ್ಲಿ ನೆನಪಿಸಿಕೊಂಡ ಪ್ರಧಾನಿ

ನವದೆಹಲಿ: ಇಂದು, ಸೋಮವಾರ ಬೆಳಗ್ಗೆ ನಿಧನರಾದ ಹಿರಿಯ ರಾಜಕಾರಣಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ನೆನಪುಗಳನ್ನು ಪ್ರಧಾನಿ ಮೋದಿ ಅವರು ಗುಜರಾತ್‌ನಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಹಂಚಿಕೊಂಡಿದ್ದಾರೆ. ಮುಲಾಯಂ ಸಿಂಗ್‌ ಅವರ ನಿಧನವು ದೇಶಕ್ಕೆ “ದೊಡ್ಡ ನಷ್ಟ” ಎಂದು ಬಣ್ಣಿಸಿದ ಪ್ರಧಾನಿ ಮೋದಿ, ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ … Continued

ಮೂವರು ಅಮೆರಿಕ ಮೂಲದ ಅರ್ಥಶಾಸ್ತ್ರಜ್ಞರು 2022ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆ

ಸ್ಕಾಕ್‌ಹೋಮ್‌: ಬ್ಯಾಂಕುಗಳು ಮತ್ತು ಆರ್ಥಿಕ ಬಿಕ್ಕಟ್ಟುಗಳ ಸಂಶೋಧನೆಗಾಗಿ” 2022 ರ2022 ರ ನೊಬೆಲ್ ಪ್ರಶಸ್ತಿಗೆ ಅಮೆರಿಕ ಮೂಲದ ಮೂವರು ಅರ್ಥಶಾಸ್ತ್ರಜ್ಞರು ಭಾಜನರಾಗಿದ್ದಾರೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಸೋಮವಾರ ಪ್ರಕಟಿಸಿದೆ. ಅಮೆರಿಕ ಫೆಡರಲ್ ರಿಸರ್ವ್‌ನ ಮಾಜಿ ಮುಖ್ಯಸ್ಥ ಬೆನ್ ಬರ್ನಾಂಕೆ ಮತ್ತು ಚಿಕಾಗೋ ವಿಶ್ವವಿದ್ಯಾಲಯದ ಡೌಗ್ಲಾಸ್ ಡೈಮಂಡ್; ಮತ್ತು ಮಿಸೌರಿಯ ಸೇಂಟ್ ಲೂಯಿಸ್‌ನಲ್ಲಿರುವ … Continued

ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇಂತಹ ಪ್ರಕರಣಗಳ ಬಗ್ಗೆ ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್. ಓಕಾ ಅವರಿದ್ದ ಪೀಠ ಹೇಳಿತು. ಹಾಗೂ ಘೋಷಿಸದೇ ಇರುವುದರಿಂದ ಅರ್ಜಿದಾರರ … Continued

ಎಸಿಬಿ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: 2016 ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ದೂರುದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತದಿಂದ ರಕ್ಷಿಸುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ಎಸಿಬಿಯನ್ನು ಸ್ಥಾಪಿಸಿದೆ ಎಂದು ಗಮನಿಸಿದ ಕರ್ನಾಟಕ ಹೈಕೋರ್ಟ್ ಆಗಸ್ಟ್ 11 … Continued