ನಾಳೆ ಹುಬ್ಬಳ್ಳಿ-ಧಾರವಾಡಕ್ಕೆ ಸಚಿವ ವೈಷ್ಣವ್‌ : ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಮೂರನೇ ಎಂಟ್ರೆನ್ಸ್‌, ಹುಬ್ಬಳ್ಳಿ-ದೆಹಲಿ ರೈಲು ಉದ್ಘಾಟನೆ, ಸವಾಯಿ ಗಂಧರ್ವ ಅಂಚೆಚೀಟಿ ಬಿಡುಗಡೆ

ಹುಬ್ಬಳ್ಳಿ : ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಅವಳಿ ನಗರದ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಂಗಳವಾರ, ಅಕ್ಟೋಬರ್‌ 11ರಂದು ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಆಗಮಿಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ನಡೆಯುವ ಸವಾಯಿ ಗಂಧರ್ವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ … Continued

ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿ ನಗರ ಫಸ್ಟ್ ಬ್ಲಾಕ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹಂಸಲೇಖ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ ಹಂಸಲೇಖ ಅವರು ಗ್ಯಾಸ್ಟ್ರಿಕ್ … Continued

ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ  ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ … Continued

ಇನ್‌ಕ್ರೆಡಿಬಲ್‌ ಇಂಡಿಯಾ…| ಸೀರೆಯುಟ್ಟು ಸಖತ್ತಾಗಿ ಕಬಡ್ಡಿ ಆಡಿದ ಮಹಿಳೆಯರು, ಬೆರಗಾದ ನೆಟ್ಟಿಗರು…ವೀಕ್ಷಿಸಿ

ಕಬಡ್ಡಿ ಭಾರತದ ಅತ್ಯಂತ ಜನಪ್ರಿಯ ಆಟಗಳಲ್ಲಿ ಒಂದು ಮಾತ್ರವಲ್ಲ, ಭಾರತೀಯ ಉಪಖಂಡದಲ್ಲಿ ಒಂದು ಭಾವನೆಯಾಗಿದೆ. ಆಟಕ್ಕೆ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯಗಳ ಸಮಾನ ಮಿಶ್ರಣದ ಅಗತ್ಯವಿದೆ. ಪ್ರತಿಯೊಂದು ವಯೋಮಾನದವರೂ ಕಬಡ್ಡಿ ಆಡುವುದನ್ನು ತೋರಿಸುವ ಅನೇಕ ವೀಡಿಯೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಇತ್ತೀಚೆಗೆ, ಛತ್ತೀಸ್‌ಗಢಿಯ ಒಲಿಂಪಿಕ್ಸ್‌ನಲ್ಲಿ ಹಲವಾರು ಮಹಿಳೆಯರು ಕಬಡ್ಡಿ ಸೀರೆಯುಟ್ಟು ಆಡುತ್ತಿರುವ ವೀಡಿಯೊ ವೈರಲ್ ಆಗಿದೆ. … Continued

ಕೇರಳದ ಕಾಸರಗೋಡು ಅನಂತಪುರ ಸರೋವರ ದೇವಸ್ಥಾನದ ಸಸ್ಯಾಹಾರಿ ಮೊಸಳೆ ದೈವಿಕ ‘ಬಬಿಯಾ’ ಇನ್ನಿಲ್ಲ..ಭಕ್ತರ ಕಂಬನಿ | ವೀಕ್ಷಿಸಿ

ಕಾಸರಗೋಡು (ಕೇರಳ): ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಸಸ್ಯಾಹಾರಿ ಮೊಸಳೆ ಬಬಿಯಾ ನಿಧನಹೊಂದಿದೆ. ಸುಮಾರು 75 ವರ್ಷದ ಬಬಿಯಾ ಭಾನುವಾರ ರಾತ್ರಿ ನಿಧನವಾಗಿದ್ದು, ಭಕ್ತರು ಕಂಬನಿ ಮಿಡಿದಿದ್ದಾರೆ. ಅನ್ನ ತಿನ್ನಲು ಇಷ್ಟಪಡುತ್ತಿದ್ದ ಕೇರಳದ ಪ್ರಸಿದ್ಧ ದೇವಸ್ಥಾನದ ದೈವಿಕ ಮೊಸಳೆ ಬಬಿಯಾ ಸಸ್ಯಾಹಾರಿಯಾಗಿದ್ದು, ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಪ್ರಸಾದವನ್ನು … Continued

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಅಕ್ಟೋಬರ್‌ 31ರ ವರೆಗೆ ವಿಸ್ತರಿಸಿದೆ. ಮಲ್ಲೇಶ್ವರದ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಅರ್ಹ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು ಎಂದು ತಿಳಿಸಿದೆ. ಪದವಿ ವಿಭಾಗದಲ್ಲಿ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ, … Continued

ತಾಂತ್ರಿಕ-ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಿಂದಿ ಅಥವಾ ಸ್ಥಳೀಯ ಭಾಷೆಗಳು ಬೋಧನಾ ಮಾಧ್ಯಮವಾಗಲಿ: ಅಮಿತ್ ಶಾ ನೇತೃತ್ವದ ಸಂಸದೀಯ ಸಮಿತಿ ಶಿಫಾರಸು

ನವದೆಹಲಿ: ಹಿಂದಿ ಮಾತನಾಡುವ ರಾಜ್ಯಗಳಲ್ಲಿನ ಐಐಟಿಗಳಂತಹ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಹಿಂದಿ ಮತ್ತು ಭಾರತದ ಇತರ ಭಾಗಗಳಲ್ಲಿ ಕಲಿಕಾ ಮಾಧ್ಯಮವು ಆಯಾ ಸ್ಥಳೀಯ ಭಾಷೆಯಾಗಿರಬೇಕು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ವಿಶ್ವಸಂಸ್ಥೆಯ ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದಾಗಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಕಳೆದ ತಿಂಗಳು ರಾಷ್ಟ್ರಪತಿ … Continued

ಸಮಾಜವಾದಿ ಪಕ್ಷದ ಸಂಸ್ಥಾಪಕ, ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾದ ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಸೋಮವಾರ ಬೆಳಿಗ್ಗೆ ನಿಧನರಾದರು. ಮುಲಾಯಂ ಸಿಂಗ್‌ ನಿಧನದ ಸುದ್ದಿಯನ್ನು ಅವರ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ … Continued

ಕನ್ನಡದ ಹಿರಿಯನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಲೋಹಿತಾಶ್ವ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ … Continued

ಇಂಗ್ಲೆಂಡ್ ಬೌಲರ್ ಕ್ಯಾಚ್ ತೆಗೆದುಕೊಳ್ಳದಂತೆ ತಡೆದ ಆಸ್ಟ್ರೇಲಿಯಾ ಬ್ಯಾಟರ್‌ ಮ್ಯಾಥ್ಯೂ ವೇಡ್: ಇದು ಈಗ ತೀವ್ರ ಚರ್ಚೆಗೆ ಗ್ರಾಸ | ವೀಕ್ಷಿಸಿ

ಪರ್ತ್‌ನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ-20 ಪಂದ್ಯದ ಸಮಯದಲ್ಲಿ ರಿಟರ್ನ್ ಕ್ಯಾಚ್ ತೆಗೆದುಕೊಳ್ಳದಂತೆ ಮಾರ್ಕ್ ವುಡ್ ಅವರನ್ನು ಮ್ಯಾಥ್ಯೂ ವೇಡ್ ತಡೆದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಇಂಗ್ಲೆಂಡ್‌ ನೀಡಿದ್ದ 209 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 17 ನೇ ಓವರ್‌ನಲ್ಲಿ, ವುಡ್ ಅವರು ಟಾಪ್-ಎಡ್ಜ್ ಮಾಡಿದರು ಮತ್ತು ಚೆಂಡು ನೇರವಾಗಿ ಗಾಳಿಯಲ್ಲಿ … Continued