ನೂತನ ಬಾಹ್ಯಾಕಾಶ ತಂತ್ರಜ್ಞಾನದಿಂದ ಕೇವಲ 5 ನಿಮಿಷಗಳಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದು ಎಂದ ನಾಸಾ…!

ವಾಷಿಂಗ್ಟನ್: ಭವಿಷ್ಯದ ಬಾಹ್ಯಾಕಾಶ ಕಾರ್ಯಾಚರಣೆಗಳಿಗಾಗಿ ಅಭಿವೃದ್ಧಿಪಡಿಸಿರುವ ನಾಸಾ-ಧನಸಹಾಯದ ನೂತನ ತಂತ್ರಜ್ಞಾನ ಬಳಸಿ ಕೇವಲ ಐದು ನಿಮಿಷಗಳಲ್ಲಿ ಎಲೆಕ್ಟ್ರಿಕ್ ಕಾರನ್ನು ಚಾರ್ಜ್ ಮಾಡಬಹುದು ಎಂದು ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಹೇಳಿದೆ. ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾನಿಲಯ ಸಂಶೋಧಕರು ಎರಡು-ಹಂತದ ದ್ರವ ಹರಿವು ಮತ್ತು ಶಾಖ ವರ್ಗಾವಣೆ ಪ್ರಯೋಗಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ದೀರ್ಘಾವಧಿಯ ಮೈಕ್ರೊಗ್ರಾವಿಟಿ ಪರಿಸರದಲ್ಲಿ … Continued

ಟಿಪ್ಪು ಎಕ್ಸ್ ಪ್ರೆಸ್’ ರೈಲು ಹೆಸರು ಬದಲಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರುನಾಮಕರಣ

ಬೆಂಗಳೂರು: ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ. ಅಕ್ಟೋಬರ್ 7 ರಂದು, ಅಧಿಸೂಚನೆಯಲ್ಲಿ, ಕೇಂದ್ರ ರೈಲ್ವೆ ಸಚಿವಾಲಯದ ಅಪೇಕ್ಷೆಯಂತೆ ರೈಲುಗಳ ಹೆಸರುಗಳನ್ನು ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ಅನ್ನು ಒಡೆಯರ್ ಎಕ್ಸ್‌ಪ್ರೆಸ್ ಮತ್ತು 16221/16222 ತಾಳಗುಪ್ಪ-ಮೈಸೂರು … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡ ಹತ್ಯೆಯಾದ ಹೋರಾಟಗಾರ್ತಿ ಗೌರಿ ಲಂಕೇಶ್ ತಾಯಿ, ಸಹೋದರಿ

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಮತ್ತು ತಾಯಿ ಇಂದಿರಾ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಾರತ್ ಜೋಡೋ ಯಾತ್ರೆಯು ಲಂಕೇಶ್ ಅವರಂತಹವರ ಧ್ವನಿಯಾಗಿದೆ ಮತ್ತು ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು. ಗೌರಿ … Continued

ಎಎಪಿ ಸಚಿವರ ಉಪಸ್ಥಿತಿಯಲ್ಲಿ ‘ಧರ್ಮ ಪರಿವರ್ತನೆ’ ಕಾರ್ಯಕ್ರಮದ ವಿವಾದ; ಸಚಿವರ ವಜಾಕ್ಕೆ ಸಿಎಂ ಕೇಜ್ರಿವಾಲ್‌ಗೆ ಬಿಜೆಪಿ ಒತ್ತಾಯ

ನವದೆಹಲಿ: ಆಪ್‌ ಸಚಿವ ರಾಜೇಂದ್ರ ಪಾಲ್‌ ಗೌತಮ್‌ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೀಡಿಯೋ ವೈರಲ್‌ ಆಗಿದ್ದು, ಸಾವಿರಾರು ಜನರು ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದ್ದು, ಮುಖ್ಯಮಂತ್ರಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಶುಕ್ರವಾರ ದೆಹಲಿಯಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಯನ್ನು ವಜಾಗೊಳಿಸಬೇಕು … Continued

2022ರ ನೊಬೆಲ್ ಶಾಂತಿ ಪ್ರಶಸ್ತಿ ಹಂಚಿಕೊಂಡ ಅಲೆಸ್ ಬೈಲ್ಯಾಟ್ಸ್ಕಿ- ಎರಡು ಸಂಸ್ಥೆಗಳಾದ ರಷ್ಯಾದ ಗ್ರುಪ್‌ ಮೆಮೊರಿಯಲ್‌, ಉಕ್ರೇನಿಯನ್ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್

ಸ್ಟಾಕ್‌ಹೋಮ್:‌ ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಜೈಲಿನಲ್ಲಿರುವ ಬೆಲಾರಸ್ ಮಾನವ ಹಕ್ಕುಗಳ ಕಾರ್ಯಕರ್ತ ಅಲೆಸ್ ಬಿಲಿಯಾಟ್ಸ್ಕಿ, ಹಾಗೂ ಹಾಗೂ ಮಾನವ ಹಕ್ಕು ಸಂಸ್ಥೆಗಳಾದ  ರಷ್ಯಾದ ಗ್ರುಪ್‌ ಮೆಮೊರಿಯಲ್‌ (Russian group Memorial) ಮತ್ತು ಉಕ್ರೇನಿಯನ್ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಅವರಿಗೆ ನೀಡಲಾಗಿದೆ. ಶುಕ್ರವಾರ ಓಸ್ಲೋದಲ್ಲಿ ನಾರ್ವೇಜಿಯನ್ ನೊಬೆಲ್ ಸಮಿತಿಯ ಅಧ್ಯಕ್ಷ ಬೆರಿಟ್ … Continued

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಹೆಚ್ಚಳ ಮಾಡಿದೆ. ತುಟ್ಟಿಭತ್ಯೆಯನ್ನು ಶೇಕಡಾ 3.75 ರಷ್ಟು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಜುಲೈ 2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 3.75 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟರ್‌ ಮೂಲಕ … Continued

ಸರ್ವಪಕ್ಷ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಇಂದು, ಶುಕ್ರವಾರ ನಗರದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮೋಹನ್‌ ದಾಸ್‌ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ. ನಾಳೆಯೇ ಸಂಪುಟ ಸಭೆ ಕರೆಯಲಾಗುತ್ತಿದ್ದು, ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ಅಧಿಕೃತ ಆದೇಶದ ಮುದ್ರೆ … Continued

ದಸರಾ ಮೆರವಣಿಗೆ ವೇಳೆ ಪಾರಂಪರಿಕ ಮದರಸಾದಲ್ಲಿ ಪೂಜೆ, 9 ಜನರ ವಿರುದ್ಧ ಪ್ರಕರಣ ದಾಖಲು

ಬೀದರ: ಪುರಾತತ್ವ ಇಲಾಖೆ ಸಂರಕ್ಷಣೆಯಲ್ಲಿರುವ ನಗರದ ಪಾರಂಪರಿಕ ಕಟ್ಟಡ (ಮದರಸಾ)ದಲ್ಲಿ ಹಿಂದೂಗಳು ಪೂಜೆ ನಡೆಸಿ, ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಮ್ಮದ್ ಗವಾನ್ ಯುನಿವರ್ಸಿಟಿ ಮುಂದೆ ಪೊಲೀಸ್ ಭದ್ರತೆ ನೀಡಲಾಗಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ … Continued

ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದ ಒಲವು – ಸಿ.ಟಿ. ರವಿ

ಬೆಂಗಳೂರು: ಎಸ್.ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.ಎಸ್.ಟಿ ಮೀಸಲಾತಿಯ ಪ್ರಮಾಣ ಹೆಚ್ಚಳ ಮಾಡುವ ಕುರಿತಾಗಿ ಅಕ್ಟೋಬರ್ 9ರ ಒಳಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ … Continued

ಮನೆಗೆ ನುಗ್ಗಿ ಒಳಗೆಲ್ಲ ಆರಾಮವಾಗಿ ಓಡಾಡಿದ ಚಿರತೆ..! ವೀಕ್ಷಿಸಿ

ಮುಂಬೈ: ಮಹಾರಾಷ್ಟ್ರದ ಸತಾರಾದಲ್ಲಿರುವ ಕುಟುಂಬವೊಂದು ಗುರುವಾರ ರಾತ್ರಿ ಮನೆಗೆ ಬಂದಾಗ ಮನೆಯೊಳಗೆ ಚಿರತೆ ಇರುವುದನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಮನೆಯವರೆಲ್ಲರೂ ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಚಿರತೆಯು ಕೋಯಾನಗರದಲ್ಲಿರುವ ಈ ಮನೆಗೆ ನುಗ್ಗಿದೆ. ದುರ್ಗಾ ವಿಸರ್ಜನೆ ಮುಗಸಿ ವಾಪಸ್‌ ಬಂದು ಮನೆಯೊಳಗೆ ಕಾಲಿಟ್ಟಾಗ ಚಿರತೆ ಕೋಣೆಯೊಂದರ ಬಾಗಿಲಲ್ಲಿ ಕುಳಿತಿರುವುದು ಅವರಿಗೆ ಕಂಡುಬಂದಿದೆ. ತಕ್ಷಣವೇ ಎಚ್ಚೆತ್ತ … Continued