ದೆಹಲಿ ಮದ್ಯ ನೀತಿ ಪ್ರಕರಣ: ದೆಹಲಿ-ಎನ್‌ಸಿಆರ್, ಪಂಜಾಬ್‌ ಸೇರಿ 35 ಸ್ಥಳಗಳಲ್ಲಿ ಇ.ಡಿ. ದಾಳಿ

ನವದೆಹಲಿ: ಮೂಲಗಳ ಪ್ರಕಾರ ದೆಹಲಿ ಅಬಕಾರಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹೈದರಾಬಾದ್‌ನ 35 ಸ್ಥಳಗಳಲ್ಲಿ ಹೊಸ ದಾಳಿ ನಡೆಸಿದೆ. ಹೊಸ ದಾಳಿಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ, “500 ಕ್ಕೂ ಹೆಚ್ಚು ದಾಳಿಗಳು, 3 ತಿಂಗಳಿನಿಂದ, 300 … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇ.ಡಿ. ಮುಂದೆ ಡಿ.ಕೆ. ಶಿವಕುಮಾರ ಹಾಜರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೂಚಿಸಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ದೆಹಲಿ ತಲುಪಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಕ್ಟೋಬರ್ 7 ರಂದು ದೆಹಲಿಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಫೆಡರಲ್ ಸಂಸ್ಥೆ ತನ್ನ ಮನವಿಯನ್ನು ತಿರಸ್ಕರಿಸಿದ್ದರಿಂದ ಇಡಿ ಮುಂದೆ ಹಾಜರಾಗಲು ಭಾರತ್ ಜೋಡೋ ಯಾತ್ರೆಯನ್ನು … Continued

ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸೂಕ್ತ ಚಿಕಿತ್ಸೆ

ಮೈಸೂರು: ಗಾಯಗೊಂಡ ಆನೆ ಮರಿಗೆ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬರೆದಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ ಸ್ಪಂದಿಸಿದ್ದು, ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ  ಆನೆ ಮರಿಗೆ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಅಕ್ಟೋಬರ್‌ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಫಾರಿ ವೇಳೆ … Continued

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

ಹುಬ್ಬಳ್ಳಿ: ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಶುಕ್ರವಾರ (ಅಕ್ಟೋಬರ್‌ 7) ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು, ಶುಕ್ರವಾರ ನಿಧನರಾದರು. ಜಬ್ಬಾರ್‌ ಖಾನ್‌ ಹೊನ್ನಾಳಿ ಅವರು ಎಸ್​.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್​ ಸರ್ಕಾರದಲ್ಲಿ ಯುವಜನ ಮತ್ತು … Continued

ಹಿರಿಯ ನಟ ಅರುಣ್ ಬಾಲಿ ಮುಂಬೈನಲ್ಲಿ ನಿಧನ

ಮುಂಬೈ: ಬಾಲಿವುಡ್‌ನ ಹಲವು ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಎಲ್ಲರನ್ನೂ ಸೆಳೆದಿದ್ದ ಹಿರಿಯ ನಟ ಅರುಣ ಬಾಲಿ ಇನ್ನಿಲ್ಲ. ಅವರು ಮುಂಬೈನಲ್ಲಿ 79 ನೇ ವಯಸ್ಸಿನಲ್ಲಿ ನಿಧನರಾದರು. ಕೆಲ ಸಮಯದಿಂದ ಅರುಣ ಬಾಲಿ ಅವರು ಅಪರೂಪದ ನರ ಕಾಯಿಲೆಯಾದ ಮೈಸ್ತೇನಿಯಾ ಗ್ರ್ಯಾವಿಸ್‌ನಿಂದ ಬಳಲುತ್ತಿದ್ದರು. ಈ ವರ್ಷದ ಆರಂಭದಲ್ಲಿ ನಟನನ್ನು ಮುಂಬೈನ ಹಿರ್ನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರುಣ್ … Continued

ಜನನಿಬಿಡ ರಸ್ತೆಯಲ್ಲಿ ಜನ-ವಾಹನ ತಪ್ಪಿಸಿ ಜಿಂಕೆಯ ಭಾರಿ ಜಿಗಿತ.. ಇದು’ಅದ್ಭುತ’ ಎಂದ ನೆಟಿಜನ್‌ಗಳು ….ವೀಕ್ಷಿಸಿ

ಕೆಲವೊಂದು ಸಲ ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಿಗಳು ಅದ್ಭುತವಾಗಿ ತಮ್ಮ ಜೀವವನ್ನು ಕಾಪಾಡಿಕೊಳ್ಳುತ್ತವೆ. ಕೆಲವೊಮ್ಮೆ ನಂಬಲಸಾಧ್ಯ ದೃಶ್ಯಗಳು ಎದುರಾಗುತ್ತವೆ. ಇಂತಹದ್ದೇ ಒಂದು ಅದ್ಭುತ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದೆ. ಜಿಂಕೆಯೊಂದು ಜನ ಹಾಗೂ ವಾಹನಗಳ ಮಧ್ಯೆ ಅದ್ಭುತವಾಗಿ ಜಿಗಿದು ತನ್ನ ಜೀವ ಉಳಿಸಿಕೊಂಡಿದೆ. ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಾಂತ ನಂದಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ … Continued

ಡಿಸೆಂಬರ್‌ 15ರ ವೇಳೆಗೆ ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌ ಕಾರ್ಯಾರಂಭ: ಸಚಿವ ಸುಧಾಕರ

ಬೆಂಗಳೂರು: ರಾಜ್ಯದಲ್ಲಿ 438 ‘ನಮ್ಮ ಕ್ಲಿನಿಕ್‌’ಗಳನ್ನು ಡಿಸೆಂಬರ್‌ 15ರ ವೇಳೆಗೆ ಕಾರ್ಯಾರಂಭ ಮಾಡಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯಸಚಿವ ಡಾ. ಕೆ. ಸುಧಾಕರ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿ ಲೇಔಟ್‌ನ ವಾರ್ಡ್‌ – 58 ರ ಪಂಚ ಮುಖಿ ದೇವಸ್ಥಾನದ ಸಮೀಪ ‘ನಮ್ಮ ಕ್ಲಿನಿಕ್‌’ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿ … Continued

ಗಾಂಬಿಯಾ ಮಕ್ಕಳ ಸಾವಿಗೆ ಸಂಬಂಧಿಸಿದ ಕೆಮ್ಮಿನ ಸಿರಪ್‌ ಭಾರತದಲ್ಲಿ ಮಾರಾಟ ಮಾಡಿಲ್ಲ ಎಂದ ಸರ್ಕಾರ, ತನಿಖೆಗೆ ಆದೇಶ

ನವದೆಹಲಿ: ಗಾಂಬಿಯಾದಲ್ಲಿ ಮಕ್ಕಳ ಸಾವಿಗೆ ಸಂಬಂಧಿಸಿವೆ ಎನ್ನಲಾದ ಕೆಮ್ಮು ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಆದಾಗ್ಯೂ, ಈ ಸಿರಪ್‌ಗಳನ್ನು ರಫ್ತಿಗಾಗಿ ಮಾತ್ರ ತಯಾರಿಸಲಾಗುತ್ತದೆ ಮತ್ತು ಭಾರತದಲ್ಲಿ ಮಾರಾಟ ಮಾಡಲಾಗಿಲ್ಲ ಎಂದು ಸರ್ಕಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯು ಹರಿಯಾಣದ ಸೋನೆಪತ್‌ನಲ್ಲಿ ತಯಾರಿಸಲಾದ ನಾಲ್ಕು ಕೆಮ್ಮು ಸಿರಪ್‌ಗಳಿಗೆ ವೈದ್ಯಕೀಯ ಉತ್ಪನ್ನ … Continued

ಅ.11ರಂದು ಕಾರವಾರಕ್ಕೆ ಆರೋಗ್ಯ ಸಚಿವ ಡಾ.ಸುಧಾಕರ  ಭೇಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳ ಪರಿಶೀಲನೆ-ಶಾಸಕಿ ರೂಪಾಲಿ

ಕಾರವಾರ : ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ಸೌಲಭ್ಯ ಕಲ್ಪಿಸುವುದು, 450 ಬೆಡ್‌ಗಳ ಆಸ್ಪತ್ರೆಗೆ ಶಿಲಾನ್ಯಾಸ ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಅಕ್ಟೋಬರ್ 11ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ-ಸಿದ್ದರಾಮಯ್ಯ ರನ್ನಿಂಗ್‌ ರೇಸ್‌ | ವೀಕ್ಷಿಸಿ

ಮಂಡ್ಯ: ಇಳಿ ವಯಸ್ಸಿನಲ್ಲಿಯೂ ಉತ್ಸಾಹ ಭರಿತವಾಗಿಯೇ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ಭಾರತ್‌ ಜೋಡೋ ಯಾತ್ರೆಯಲ್ಲಿ ರನ್ನಿಂಗ್‌ ಮಾಡಿದ್ದಾರೆ…! ಈ ದೃಶ್ಯಾವಳಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಟ್ವೀಟ್‌ ಮಾಡಿದೆ.ಜಗ್ಗದ, ಕುಗ್ಗದ ಉತ್ಸಾಹ ನಮ್ಮದು, ನುಗ್ಗುವುದೊಂದೇ ದ್ಯೇಯ ನಮ್ಮದು, ನಡೆದಷ್ಟೂ ನೂರ್ಮಡಿಯಾಗುತ್ತಿರುವ … Continued