ಟ್ವಿಟರ್​ಗೆ ಕಂಟೆಂಟ್ ಮಾಡರೇಷನ್ ಕೌನ್ಸಿಲ್ ಸ್ಥಾಪಿಸುವುದಾಗಿ ಘೋಷಿಸಿದ ಎಲಾನ್ ಮಸ್ಕ್

ನ್ಯೂಯಾರ್ಕ್: ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್​ನ (Twitter) ನೂತನ ಮಾಲೀಕ, ವಿಶ್ವದ ಅತಿ ಶ್ರೀಮಂತ ಎಲಾನ್ ಮಸ್ಕ್ ಹೊಸ ಘೋಷಣೆ ಮಾಡಿದ್ದು, ಟ್ವಿಟರ್​ಗೆ ‘ಕಂಟೆಂಟ್ ಮಾಡರೇಷನ್ ಕೌನ್ಸಿಲ್’ ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ಈ ಮಂಡಳಿಯು ಪ್ರಮುಖ ಕಂಟೆಂಟ್​ಗಳು ಮತ್ತು ಖಾತೆ ಮರುಸ್ಥಾಪನೆಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ದೈತ್ಯ ಕಂಪನಿ ಖರೀದಿಸುವ 44 … Continued

ಗೋಕರ್ಣ: ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಪ್ರವಾಸಿಗ ಸಾವು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ (Gokarna)ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದ ಬಳಿ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ನಾಲ್ವರು ಸ್ನೇಹಿತರೊಂದಿಗೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜಲು … Continued

ಈಗಲೂ ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸ್ತಾರೆ ಕೆಲವು ಜನಪ್ರತಿನಿಧಿಗಳು : ಬಿಜೆಪಿ ನಾಯಕನ ಅಸಮಾಧಾನ

ಬಾರಾಬಂಕಿ (ಉತ್ತರ ಪ್ರದೇಶ) : ಶಾಸಕರು ಮತ್ತು ಸಂಸದರ ವಿರುದ್ಧ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಪ್ರತಿನಿಧಿಗಳಾದ ನಂತರವೂ ಕೆಲವರು ಅಧಿಕಾರಿಗಳನ್ನು “ಸರ್” ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲಿಲ್ಲ ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು, ಕೆಲವು ನಾಯಕರು ಅಧಿಕಾರಿಗಳ … Continued

ಗುಜರಾತ್ ಚುನಾವಣೆಗೆ ಮುನ್ನ ಆಪ್ ಸಿಎಂ ಅಭ್ಯರ್ಥಿ ಆಯ್ಕೆ ಮಾಡಲು ಅಭಿಯಾನ ಆರಂಭಿಸಿದ ಅರವಿಂದ್ ಕೇಜ್ರಿವಾಲ್

ಗುಜರಾತ್ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸೂರತ್‌ನಲ್ಲಿ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಚಾರ ಪ್ರಾರಂಭಿಸಿದರು. ಗುಜರಾತ್ ಜನತೆ ನಮಗೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೇಳಬೇಕೆಂದು ನಾವು ಬಯಸುತ್ತೇವೆ. ನಾವು ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ನೀಡುತ್ತಿದ್ದೇವೆ. ನೀವು ನವೆಂಬರ್ 3ರ ಸಂಜೆ 5 ಗಂಟೆಯವರೆಗೆ ಅದರ … Continued

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ : 24369 ಕಾನ್ಸ್​ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸ್‌ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 24,369 ಕಾನ್ಸ್​ಟೇಬಲ್(ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​(SSC)ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಆಸಕ್ತರು ನವೆಂಬರ್ 30, 2022ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ http://ssc.nic.inಗೆ ಭೇಟಿ ನೀಡಬಹುದಾಗಿದೆ. … Continued

ವಿಲಕ್ಷಣ ಘಟನೆಯಲ್ಲಿ ವಾಹನ ನಿಬಿಡ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವ ಕಾರಿನ ಡಿಕ್ಕಿ ಮೇಲೆ ಸರಣಿ ಪಟಾಕಿ ಸಿಡಿಸಿದ ಕಿಡಿಗೇಡಿಗಳು: ಮೂವರ ಬಂಧನ | ವೀಕ್ಷಿಸಿ

ನವದೆಹಲಿ: ಗುರುಗ್ರಾಮದಲ್ಲಿ ದೀಪಾವಳಿಯ ಅಪಾಯಕಾರಿ ಆಚರಣೆಯ ವಿಲಕ್ಷಣ ಘಟನೆ ವರದಿಯಾಗಿದೆ. ಕೆಲವು ನಿವಾಸಿಗಳು ವಾಹನ ನಿಬಿಡ ರಸ್ತೆಯಲ್ಲಿ ಚಲಿಸುತ್ತಿರುವ ತಮ್ಮ ಕಾರಿನ ಮೇಲೆ ಪಟಾಕಿಗಳನ್ನು ಸಿಡಿಸಿದ್ದು, ಘಟನೆಯ ವಿಡಿಯೋ ವೈರಲ್ ಆದ ನಂತರ, ಗುರುಗ್ರಾಮ್ ಪೊಲೀಸರು ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ವೈರಲ್ ವೀಡಿಯೊದಲ್ಲಿ, ಬೂಟ್‌ನಲ್ಲಿ ಪಟಾಕಿ ಪೆಟ್ಟಿಗೆಯೊಂದಿಗೆ ಕಾರೊಂದು ಗುರುಗ್ರಾಮ್‌ನ ಬೀದಿಗಳಲ್ಲಿ ವೇಗವಾಗಿ ಚಲಿಸುತ್ತಿರುವುದು … Continued

ಕಾಂತಾರ ಸಿನೆಮಾ ‘ವರಾಹರೂಪಂ’ ಹಾಡಿಗೆ ನ್ಯಾಯಾಲಯದ ನಿರ್ಬಂಧ

ಕೋಯಿಕ್ಕೋಡ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಸಿನಿಮಾದಲ್ಲಿ ಬಳಸದಂತೆ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಕುರಿತು ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದೆ. ಕನ್ನಡ ಚಲನಚಿತ್ರ ‘ಕಾಂತಾರ’ ಚಿತ್ರದ ನಿರ್ಮಾಪಕರಿಗೆ ‘ತೈಕ್ಕುಡಂ ಬ್ರಿಡ್ಜ್’ ಎಂಬ ಮ್ಯೂಸಿಕ್ ಬ್ಯಾಂಡ್‌ನ ಅನುಮತಿಯಿಲ್ಲದೆ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ … Continued

ರಾಜ್ಯದ 5 ಕಡೆ ಕೈಗಾರಿಕಾ ವಿಶೇಷ ಟೌನ್ ಶಿಪ್‌ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ

ಹುಬ್ಬಳ್ಳಿ: ರಾಜ್ಯದ ಧಾರವಾಡ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಬೆಳಗಾವಿಯಲ್ಲಿ ಕೈಗಾರಿಕಾ ವಿಶೇಷ ಟೌನ್‌ಶಿಪ್‌ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮುಮ್ಮಿಗಟ್ಟಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ‘ಎಫ್‌ಎಂಸಿಜಿ ಕ್ಲಸ್ಟರ್‌(ಫಾಸ್ಟ್‌ ಮೂವಿಂಗ್‌ ಕನ್ಸ್ಯೂಮರ್‌ ಗೂಡ್ಸ್‌) ಬಂಡವಾಳ ಹೂಡಿಕೆದಾರರ ಒಡಂಬಡಿಕೆ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಮುಂಬೈ- ಚೆನ್ನೈ ಕೈಗಾರಿಕಾ ಕಾರಿಡಾರ್‌ … Continued

ಟೇಕ್-ಆಫ್ ಸಮಯದಲ್ಲಿ ಬೆಂಕಿ ಹೊತ್ತಿಕೊಂಡ ಇಂಡಿಗೋ ವಿಮಾನದ ಇಂಜಿನ್ | ವೀಕ್ಷಿಸಿ

ನವದೆಹಲಿ: ಬೆಂಗಳೂರಿಗೆ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನದ ಇಂಜಿನ್‌ಗೆ ಶುಕ್ರವಾರ ಬೆಂಕಿ ಹೊತ್ತಿಕೊಂಡ ನಂತರ ಅದನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಬೇಕಾಯಿತು. ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನ 6E-2131 ತನ್ನ ಟೇಕ್-ಆಫ್ ಅನ್ನು ಸ್ಥಗಿತಗೊಳಿಸಿತು ಮತ್ತು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಪೂರ್ಣ ತುರ್ತುಸ್ಥಿತಿ” ಘೋಷಿಸಲಾಯಿತು ಎಂದು ವರದಿಗಳು ತಿಳಿಸಿವೆ. ಎಲ್ಲ ಪ್ರಯಾಣಿಕರು ಮತ್ತು … Continued

ಟ್ವಿಟರ್, ಫೇಸ್‌ಬುಕ್ ಬಳಕೆದಾರರ ದೂರು ಕೇಳಲು 3 ತಿಂಗಳಲ್ಲಿ ಹೊಸ ಸಮಿತಿ ರಚನೆ: ಕೇಂದ್ರ

ನವದೆಹಲಿ: ವಿವಾದಾತ್ಮಕ ವಿಷಯವನ್ನು ಹೋಸ್ಟ್ ಮಾಡುವ ಕುರಿತು ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ನಿರ್ಧಾರಗಳ ವಿರುದ್ಧ ಬಳಕೆದಾರರು ಹೊಂದಿರಬಹುದಾದ ಕುಂದುಕೊರತೆಗಳನ್ನು ನಿವಾರಿಸಲು ಮೇಲ್ಮನವಿ ಸಮಿತಿಗಳನ್ನು ಸ್ಥಾಪಿಸುವ ನಿಯಮಗಳನ್ನು ಕೇಂದ್ರವು ಶುಕ್ರವಾರ ಸೂಚಿಸಿದೆ. ಮೂರು ಸದಸ್ಯರ ಕುಂದುಕೊರತೆ ಮೇಲ್ಮನವಿ ಸಮಿತಿ(ಗಳನ್ನು) ಮೂರು ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು MeitY (ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ) … Continued