ಶರಾಬಿ ಕೋತಿ…: ಮದ್ಯದಂಗಡಿಗೆ ನುಗ್ಗಿ ಕ್ಯಾನ್‌ನಿಂದ ಗಟಗಟನೆ ಬೀಯರ್‌ ಕುಡಿಯುವ ಈ ಮಂಗ | ವೀಕ್ಷಿಸಿ

ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕೋತಿಯೊಂದು ಬಿಯರ್ ಕುಡಿಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ ಮಂಗವೊಂದು ಕ್ಯಾನ್‌ನಿಂದ ಬಿಯರ್ ಕುಡಿಯುತ್ತಿರುವುದು ಕಂಡು ಬಂದಿದೆ. ಈ ಕೋತಿ, ಹತ್ತಿರದ ವೈನ್ ಶಾಪ್‌ನಿಂದ ಪಾನೀಯಗಳನ್ನು ಖರೀದಿಸುವವರಿಂದ ಮದ್ಯವನ್ನು ಕಸಿದುಕೊಳ್ಳುತ್ತದೆ.
ಆಜ್‌ ತಕ್ ವರದಿಗಳ ಪ್ರಕಾರ, ಅಂಗಡಿಯವನು ಕೋತಿಯ ವರ್ತನೆಯಿಂದ ಬೇಸತ್ತಿದ್ದಾನೆ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಲಾಗಿದೆ.
ಕೋತಿಯು ಖರೀದಿದಾರರಿಂದ ಪಾನೀಯಗಳನ್ನು ಕಸಿದುಕೊಳ್ಳುವುದಲ್ಲದೆ, ಅಂಗಡಿಯಿಂದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಹಲವು ಬಾರಿ ಪ್ರಯತ್ನಿಸಿದೆ ಎಂದು ಅಂಗಡಿಯ ಸಹಾಯಕರೊಬ್ಬರು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಜಿಲ್ಲೆಯ ಅಚಲಗಂಜ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮದ್ಯದ ಅಂಗಡಿಯವರೊಬ್ಬರು ಮದ್ಯ ಕಳ್ಳನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಕೋತಿ ಅಟ್ಟಿಸಿಕೊಂಡು ಹೋದರೆ ಕಚ್ಚುತ್ತದೆ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಸುಮ್ಮನಿದ್ದಾರೆ ಎಂದು ಅಂಗಡಿಕಾರರು ಆರೋಪಿಸಿದ್ದಾರೆ.

ಮತ್ತೊಂದು ವೀಡಿಯೊದಲ್ಲಿ, ಕೋತಿಯು ಬಾಟಲಿಯಿಂದ ಬಿಯರ್ ಕುಡಿಯುತ್ತಿರುವುದು ಕಂಡುಬರುತ್ತದೆ. ಅನುರಾಗ್ ಮಿಶ್ರಾ ಎಂಬ ಟ್ವಿಟ್ಟರ್ ಬಳಕೆದಾರರು ಅಕ್ಟೋಬರ್ 30 ರಂದು “ರಾಯಬರೇಲಿಯಲ್ಲಿ ಕೋತಿಯೊಂದು ಮದ್ಯಪಾನ ಮಾಡುವ ವಿಡಿಯೋ ವೈರಲ್ ಆಗಿದ್ದು, ಮದ್ಯದಂಗಡಿಗೆ ಬರುವ ಜನರಿಂದ ಮದ್ಯವನ್ನು ಕಸಿದುಕೊಂಡು ಕುಡಿಯುತ್ತದೆ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಅಪ್ಲೋಡ್ ಮಾಡಿದ್ದಾರೆ.
ಜಿಲ್ಲಾ ಅಬಕಾರಿ ಅಧಿಕಾರಿ ರಾಜೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, ಅರಣ್ಯ ಇಲಾಖೆಯ ನೆರವಿನಿಂದ ಈ ಕೋತಿಯನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ, ಶೀಘ್ರದಲ್ಲೇ ಗ್ರಾಹಕರು ಈ ಸಮಸ್ಯೆಯಿಂದ ಮುಕ್ತರಾಗುತ್ತಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಪಾಲಿಗ್ರಾಫ್ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿದ್ದು ಒಪ್ಪಿಕೊಂಡ ಅಫ್ತಾಬ್ ಪೂನಾವಾಲಾ, ಆದ್ರೆ ಯಾವುದೇ ಪಶ್ಚಾತ್ತಾಪವಿಲ್ಲ: ವರದಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement