ಕಾಶ್ಮೀರ: 4 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು, ಉಗ್ರರ ಸಂಚು ವಿಫಲ

ಕಾಶ್ಮೀರ : ಮಂಗಳವಾರ ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಹಾಗೂ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದಾರೆ. ಇದೇವೇಳೆ ಮೂವರು ಹೈಬ್ರಿಡ್ ಉಗ್ರರನ್ನು ಬಂಧಿಸಲಾಗಿದೆ ಮತ್ತು ಶ್ರೀನಗರದಲ್ಲಿ ಅವರ ವಶದಿಂದ 10 ಕೆಜಿ ಐಇಡಿ ವಶಪಡಿಸಿಕೊಳ್ಳಲಾಗಿದೆ.
ಅವಂತಿಪೋರಾ ಪ್ರದೇಶದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಬಿಜ್‌ಬೆಹರಾ ಪ್ರದೇಶದಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕ ವಿಜಯಕುಮಾರ್ ತಿಳಿಸಿದ್ದಾರೆ.

ಅವಂತಿಪೋರಾದಲ್ಲಿ ಹತರಾದವರಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಮುಖ್ತಾರ್ ಭಟ್ ಸಹ ಸೇರಿದ್ದಾರೆ ಮತ್ತು ಮೂಲದ ಪ್ರಕಾರ, ಅವರು ಫಿದಾಯೀನ್ ಭಯೋತ್ಪಾದಕರೊಂದಿಗೆ ಭದ್ರತಾ ಪಡೆಗಳ ಶಿಬಿರದ ಮೇಲೆ ಆತ್ಮಾಹುತಿ ದಾಳಿ ಮಾಡುವ ಮಿಷನ್‌ನಲ್ಲಿದ್ದರು. ಶೋಧದ ವೇಳೆ ಸ್ಥಳದಿಂದ ಎಕೆ-74 ರೈಫಲ್, ಎಕೆ-56 ರೈಫಲ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾದ ಸೆಮ್ಥಾನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

3.5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement