ತಮಿಳುನಾಡಿನ ಹಲವೆಡೆ ಭಾರೀ ಮಳೆ; ಚೆನ್ನೈ, ಏಳು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಚೆನ್ನೈ: ಕಳೆದ 24 ಗಂಟೆಗಳಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದ್ದು, ಚೆನ್ನೈ ನಗರದಲ್ಲಿ ಟ್ರಾಫಿಕ್ ಅಸ್ತವ್ಯಸ್ತವಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈಶಾನ್ಯ ಮಾನ್ಸೂನ್ ಅಕ್ಟೋಬರ್ 29 ರಂದು ತಮಿಳುನಾಡನ್ನು ಅಪ್ಪಳಿಸಿತು. ಪ್ರಾದೇಶಿಕ ಹವಾಮಾನ ಕೇಂದ್ರ (RMC), ಚೆನ್ನೈನಲ್ಲಿ ನವೆಂಬರ್ 2 ರವರೆಗೆ ಭಾರೀ ಮಳೆ ಮತ್ತು ಮುಂದಿನ ಕೆಲವು ದಿನಗಳಲ್ಲಿ ಪಕ್ಕದ ಜಿಲ್ಲೆಗಳಾದ ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವರೂರ್ ಮತ್ತು ತಂಜಾವೂರು ಸೇರಿದಂತೆ ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸರ್ಕಾರ ಮಂಗಳವಾರ ರಜೆ ಘೋಷಿಸಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿಗಾ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಚೆನ್ನೈ ಮೇಯರ್ ಆರ್ ಪ್ರಿಯಾ, ಪಾಲಿಕೆ ಆಯುಕ್ತ ಗಗನ್‌ದೀಪ್ ಸಿಂಗ್ ಬೇಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಕ್ಷೇತ್ರ ಅಧಿಕಾರಿಗಳ ಪ್ರಯತ್ನಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ಮುಂದಿನ ನಾಲ್ಕು ದಿನಗಳ ಮುನ್ಸೂಚನೆ
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಸೇಲಂ ಮತ್ತು ಕೃಷ್ಣಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಚೆನ್ನೈ, ಚೆಂಗಲ್ಪಟ್ಟು, ತಿರುವಣ್ಣಾಮಲೈ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ಅರಿಯಲೂರ್, ತಂಜಾವೂರು, ತಿರುವರೂರ್, ನಾಗಪಟ್ಟಿಣಂ, ಮೈಲಾಡುತುರೈ, ಪುದುಕೊಟ್ಟೈ, ನಾಮಕ್ಕಲ್ ಮತ್ತು ತಿರುಚಿರಾಪಳ್ಳಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement