ತಮ್ಮನನ್ನು ರಕ್ಷಿಸಲು ಹೋದ ಮೂವರು ಸೋದರಿಯರು ಸೇರಿ ನಾಲ್ವರು ಕೆರೆ ಪಾಲು

posted in: ರಾಜ್ಯ | 0

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದ ಬಳಿಯಿರುವ ಕೆರೆಯೊಂದರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ.
. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಕ್ಕಳೆಲ್ಲ ಒಂದೇ ಕುಟುಂಬದವರಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಭಿ (13), ಅಶ್ವಿನಿ (14), ಕಾವೇರಿ (18) ಅಪೂರ್ವಾ (18) ಎಂದು ಗುರುತಿಸಲಾಗಿದೆ.
ಮೊದಲು ಅಭಿ ಎಂಬಾತ ನೀರಿನ ಬಳಿ ಆಟ ಆಡಲು ಹೋದಾಗ ಆಕಸ್ಮಾತ್ ಕೆರೆಯಲ್ಲಿ ಬಿದ್ದಿದ್ದಾನೆ. ಅದನ್ನು ನೋಡಿದ ಆತನ ಮೂವರೂ ಅಕ್ಕಂದಿರು ಕೆರೆಗೆ ಇಳಿದು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಆತನ ಜತೆಗೆ ಮೂವರು ಅಕ್ಕಂದಿರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಹಿಳೆಯರಿಗಾಗಿ ಧಾರವಾಡ ಜೆಎಸ್ಎಸ್‌ನಲ್ಲಿ ಉದ್ಯೋಗ ಮೇಳ

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement