ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ: ದೂರು ದಾಖಲು

posted in: ರಾಜ್ಯ | 0

ಚಿತ್ರದುರ್ಗ: ಚಿತ್ರದುರ್ಗದ ಹಿರಿಯ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರನ್ನು ಯುವತಿಯೊಬ್ಬಳು ಹನಿಟ್ರ್ಯಾಪ್ ಗೆ ಕೆಡವಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಎರಡು ದಿನಗಳಿಂದ ಶಾಸಕರು ತಮ್ಮ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸುವ ಸಂದರ್ಭದಲ್ಲಿ ಅಪರಿಚಿತ ಯುವತಿಯೊಬ್ಬಳು ನಗ್ನಾವಸ್ಥೆಯಲ್ಲಿ ವೀಡಿಯೋ ಕಾಲ್ ಮಾಡಿದ್ದು ಗಾಬರಿಯಾದ ಶಾಸಕ ತಿಪ್ಪಾರೆಡ್ಡಿ ಕೂಡಲೇ ವೀಡಿಯೋ ಕಾಲ್ ಕಟ್‌ ಮಾಡಿದ್ದಾರೆ. ಅಲ್ಲದೆ ಮೊಬೈಲ್ ಫೋನ್ ಗೆ ವಿಡಿಯೊ ಕರೆ ಮಾಡಿದ ಯುವತಿ ಅಶ್ಲೀಲವಾಗಿ ಮಾತನಾಡಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇದರಿಂದ ಅನುಮಾನಗೊಂಡ ಅವರು ಕರೆ ಕಟ್‌ ಮಾಡಿದ್ದಾರೆ. ನಂತರ ಯುವತಿ ಎರಡು ಮೂರು ಬಾರಿ ವಿಡಿಯೊ ಕರೆ ಮಾಡಿದ್ದಳು. ಕರೆ ಸ್ಥಗಿತಗೊಳಿಸಿ ಫೋನ್ ನಂಬರ್ ಬ್ಲ್ಯಾಕ್ ಮಾಡಿದ್ದೇನೆ. ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ’ ಎಂದು ಶಾಸಕ ತಿಪ್ಪಾರೆಡ್ಡಿ ಮಾಹಿತಿ ನೀಡಿದ್ದಾರೆ. ಅಪರಿತರು ಶಾಸಕರನ್ನು ಹನಿಟ್ರ್ಯಾಪ್ ಗೆ ಬೀಳಿಸುವ ಯತ್ನ ಮಾಡಿರಬಹುದು ಎಂದು ಶಂಕಿಸಲಾಗಿದೆ.ಚಿತ್ರದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬಿಜೆಪಿ ಸಂಸದರ ಎಚ್ಚರಿಕೆ ನಂತರ ಮೈಸೂರು-ಊಟಿ ರಸ್ತೆಯ ಬಸ್ ಶೆಲ್ಟರ್‌ನ ಎರಡು ಗುಮ್ಮಟ ತೆರವು

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement