ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್‌ ನಟಿ ಪೂಜಾ ಭಟ್ | ವೀಕ್ಷಿಸಿ

ಹೈದರಾಬಾದ್‌: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಹೈದರಾಬಾದ್ ನಗರದಿಂದ ಇಂದಿನ ಪಾದಯಾತ್ರೆ ಆರಂಭಿಸಿದ್ದಾರೆ.
ಇಂದಿನ ಭಾರತ ಜೋಡೋ ಪಾದಯಾತ್ರೆಗೆ ಬಾಲಿವುಡ್‌ ನಟಿ ಪೂಜಾ ಭಟ್ ಕೂಡ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ ಪೂಜಾ ಭಟ್ ಯಾತ್ರೆಯಲ್ಲಿ ರಾಹುಲ್‌ ಜೊತೆ ಜೆಜ್ಜೆ ಹಾಕುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. ಪ್ರತಿದಿನ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ ಎಂದು ಅದರಲ್ಲಿ ಬರೆಯಲಾಗಿದೆ.
ಮಂಗಳವಾರ ಹೈದರಾಬಾದ್ ವಿಶ್ವವಿದ್ಯಾನಿಲಯದ ದಿವಂಗತ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ತಾಯಿ ಕೂಡ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ರೋಹಿತ್ ತಾಯಿ ರಾಧಿಕಾ ವೇಮುಲಾ ಬೆಳಗ್ಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬುಧವಾರ ನಟಿ ಪೂಜಾ ಅವರು ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ನಡೆದುಕೊಂಡು ಹೋಗುವ ಫೊಟೋಗಳು ವೈರಲ್ ಆಗಿವೆ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಏಳನೇ ದಿನದಂದು ಹೈದರಾಬಾದ್‌ಗೆ ಪ್ರವೇಶಿಸಿತು. ಬುಧವಾರ ತೆಲಂಗಾಣದಲ್ಲಿ ಎಂಟನೇ ದಿನ ಯಾತ್ರೆ ನಡೆಯುತ್ತಿದೆ.

ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದ ಉತ್ತಮ್ ಕುಮಾರ್ ರೆಡ್ಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ, ಮಾಜಿ ಸಂಸದ ಮಧು ಯಾಸ್ಕಿ ಗೌಡ್ ಮೊದಲಾದವರು ಭಾಗವಹಿಸಿದ್ದರು. ತೆಲಂಗಾಣದಲ್ಲಿ, ಭಾರತ್ ಜೋಡೋ ಯಾತ್ರೆಯು ಮಾಜಿ ಭಾರತೀಯ ಕ್ರಿಕೆಟ್ ನಾಯಕ ಮತ್ತು ತೆಲಂಗಾಣ ಪಿಸಿಸಿ ಕಾರ್ಯಾಧ್ಯಕ್ಷರಲ್ಲಿ ಒಬ್ಬರಾದ ಮೊಹಮ್ಮದ್ ಅಜರುದ್ದೀನ್, ದಕ್ಷಿಣದ ನಟಿ ಪೂನಂ ಕೌರ್ ಕೂಡ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಜೊತೆಗೆ ನಡೆದರು.

ಪ್ರಮುಖ ಸುದ್ದಿ :-   ವೀಡಿಯೊ..| ತನ್ನ ಮರಿಯನ್ನು ಕಾಪಾಡಿದ ಅರಣ್ಯ ಸಿಬ್ಬಂದಿಗೆ 'ಕೃತಜ್ಞತೆ' ಸಲ್ಲಿಸಿದ ಕಾಡಾನೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement