ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ: ನವೆಂಬರ್ 6ರಂದು ಸರ್ವೋದಯ ಸಮಾವೇಶ

ಬೆಂಗಳೂರು:ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ಹೆಸರು ನೀಡಲಾಗಿದೆ.
ಈ ಕುರಿತಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಕಾರ್ಯಕ್ರಮ‌ ಆಯೋಜಿಸಿದ್ದೇವೆ. ನವೆಂಬರ್ 6ರಂದು ಬೆಳಗ್ಗೆ 10 ಖರ್ಗೆ ಆಗಮಿಸಲಿದ್ದಾರೆ. ಖರ್ಗೆಗೆ ಸಾವಿರಾರು ಕಾರ್ಯಕರ್ತರು ಸ್ವಾಗತ ಮಾಡಲಿದ್ದಾರೆ ಎಂದರು.

ಬೆಂಗಳೂರು ವಿಮಾನ ನಿಲ್ದಾಣದ ಬಳಿಯೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಲಿದ್ದಾರೆ. ಅದೇ ದಿನ ಮಧ್ಯಾಹ್ನ 2ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಹೊರಗಿನಿಂದ ಬರುವವರಿಗೆ ಅನುಕೂಲವಾಗಬೇಕು ಎಂಬ ಕಾರಣಕ್ಕಾಗಿ ಮಧ್ಯಾಹ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಕುಮಾರ ತಿಳಿಸಿದರು.
ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಖರ್ಗೆ ಅಧಿಕಾರ‌ ಸ್ವೀಕಾರ ಮಾಡಿದ ಬಳಿಕ ಇದೇ ಮೊದಲ ಬಾರಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಂಡಿದೆ ಎಂದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement