ಸೆಪ್ಟೆಂಬರ್‌ನಲ್ಲಿ ಭಾರತದ 26. 85 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ನವದೆಹಲಿ: ವಾಟ್ಸ್ ಆ್ಯಪ್ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ನಿಷೇಧಿಸುವ ಮುನ್ನ ಬಳಕೆದಾರರನ್ನು ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು ಎಂದು ಕಂಪನಿ ಮಂಗಳವಾರ ತಿಳಿಸಿದೆ.
ಆಗಸ್ಟ್‌ನಲ್ಲಿ ಮೆಸೇಜಿಂಗ್ ಪ್ಲಾಟ್‌ಫಾರ್ಮ್ 23.28 ಲಕ್ಷ ಖಾತೆಗಳನ್ನು ನಿಷೇಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ.
ಸೆಪ್ಟೆಂಬರ್ 1, 2022 ರಿಂದ ಸೆಪ್ಟೆಂಬರ್ 30, 2022 ರ ನಡುವೆ, 26,85,000 ವಾಟ್ಸ್ ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಖಾತೆಗಳಲ್ಲಿ 8,72,000 ಬಳಕೆದಾರರನ್ನು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು. ಭಾರತೀಯ ಖಾತೆಗಳನ್ನು +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ” ಎಂದು ವಾಟ್ಸ್ ಆ್ಯಪ್ ತನ್ನ ಸೆಪ್ಟೆಂಬರ್ ತಿಂಗಳ ಬಳಕೆದಾರರ ಸುರಕ್ಷತೆ ವರದಿ ತಿಳಿಸಿದೆ.
ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳುತ್ತಿವೆ.
ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳು, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ) ಪ್ರತಿ ತಿಂಗಳು ಸ್ವೀಕರಿಸಿದ ದೂರುಗಳ ವಿವರಗಳು ಮತ್ತು ತೆಗೆದುಕೊಂಡ ಕ್ರಮಗಳ ಕುರಿತ ವರದಿ ಪ್ರಕಟಿಸಲು ಕಡ್ಡಾಯಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

ದೊಡ್ಡ ಟೆಕ್ ಕಂಪನಿಗಳ ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಕ್ರಿಯತೆ ಅಥವಾ ಟೇಕ್‌ಡೌನ್ ನಿರ್ಧಾರಗಳ ವಿರುದ್ಧ ಕುಂದುಕೊರತೆ ಮೇಲ್ಮನವಿ ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರವು ಕಳೆದ ವಾರ ನಿಯಮಗಳನ್ನು ಪ್ರಕಟಿಸಿದೆ.
ಇತ್ತೀಚಿನ WhatsApp ವರದಿಯ ಪ್ರಕಾರ, ಸೆಪ್ಟೆಂಬರ್‌ನಲ್ಲಿ ಪ್ಲಾಟ್‌ಫಾರ್ಮ್ 666 ಕುಂದುಕೊರತೆಗಳನ್ನು ಸ್ವೀಕರಿಸಿದೆ ಆದರೆ 23 ವಿರುದ್ಧ ಮಾತ್ರ ಕ್ರಮ ಕೈಗೊಂಡಿದೆ.

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement