ದಾಂಡೇಲಿ: ಕಾಳಿ ನದಿಗೆ ಇಳಿದವನ ಎಳೆದೊಯ್ದ ಮೊಸಳೆಗಳು

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬನನ್ನು ಮೊಸಳೆಗಳು ಎಳೆದೊಯ್ದಿವೆ ಎಂದು ವರದಿಯಾಗಿದೆ.ಈತ ಈಜಲು ನದಿಗೆ ಇಳಿದಿದ್ದಾಗ ಮೊಸಳೆಗಳು ಎಳೆದೊಯ್ದಿವೆ ಎಂದು ಹೇಳಲಾಗಿದೆ. ಮೊಸಳೆ ಎಳೆದೊಯ್ಯುವುದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಗ ವ್ಯಕ್ತಿಗಾಗಿ ಕಾಳಿ ನದಿಯಲ್ಲಿ ಹುಡುಕಾಟ ನಡೆದಿದೆ.
ಸ್ಥಳೀಯರ ಪ್ರಕಾರ, ಈ ವ್ಯಕ್ತಿ ನಂದಿ ದಂಡೆಯ ಮೇಲೆ ಬಟ್ಟೆ ಹಾಗೂ ಚಪ್ಪಲಿ ತೆಗೆದಿಟ್ಟು ಸ್ನಾನಕ್ಕಾಗಿ ನದಿಗೆ ಇಳಿದಿದ್ದಾರೆ. ಮೃತದೇಹವು ಕುಳಗಿ ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪೀತಾಂಬರದಾಸ ಮಹೇಶ್ವರಿ (೬೫) ಎಂದು ಗುರುತಿಸಲಾಗಿದೆ. ಇಂದು ಗುರುವಾರ ಬೆಳಿಗ್ಗೆ ಈಶ್ವರ ದೇವಸ್ಥಾನದ ಸಮೀಪ ಮೆಟ್ಟಿಲುಗಳನ್ನು ಇಳಿದು ನದಿಗೆ ಈಜಲು ಇಳಿದಾಗ ಎರಡು ಮೊಸಳೆಗಳು ದಾಳಿ ನಡೆಸಿವೆ ಎಂದು ಹೇಳಲಾಗಿದೆ. ಈ ಭಾಗದಲ್ಲಿ ಮೊಸಳೆ ಹೆಚ್ಚಿದೆ.  ಹೀಗಾಗಿ ನೋಡಿದವರು ತಕ್ಷಣವೇ ಮೇಲೆ ಬರುವಂತೆ ಕೂಗಿ ಹೇಳಿದ್ದಾರೆ. ಆದರೆ ಇಳಿದ ಕೆಲವೇ ಹೊತ್ತಿನಲ್ಲಿ ಎರಡು ಮೊಸಳೆಗಳು  ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ : ಒಟ್ಟು ₹35,000 ಬಹುಮಾನ ಗೆಲ್ಲಿ

ಇದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ  ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು, ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ.ಸ್ಥಳೀಯರು ಜಮಾಯಿಸಿದ್ದಾರೆ ಹಾಗೂ ಸಹಕರಿಸುತ್ತಿದ್ದಾರೆ. ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಾಳಿ ನದಿಯಲ್ಲಿ ಮೊಸಳೆಗಳ ಸಂತತಿ ಗಣನೀಯವಾಗಿ ಏರಿವೆ. ಈ ವರ್ಷವೇ ಇಬ್ಬರನ್ನು ಮೊಸಳೆ ಎಳೆದೊಯ್ದಿದೆ. ಓರ್ವ ಮೊಸಳೆ ದಾಳಿಯಿಂದ ಗಾಯಗೊಂಡಿದ್ದಾನೆ. ಅವುಗಳು  ನದಿ ದಂಡೆ ಪ್ರದೇಶಗಳಾದ ಹೊಸಕೊಣಪಾ ಗ್ರಾಮ ದಾಂಡೇಲಪ್ಪ ನಗರ, ಹಳಿಯಾಳ ರಸ್ತೆ, ಹಾಲಮಡ್ಡಿ ಗ್ರಾಮ ಹೀಗೆ ಹಲವು ಕಾಲೋನಿಗಳಿಗೆ ಮೊಸಳೆಗಳು ಆಹಾರ ಅರಸಿ ಬರುತ್ತಿವೆ. ಹೀಗೆ ಬಂದ ಮೊಸಳೆಗಳು ಮನೆಗಳಿಗೆ ನುಗ್ಗಿ ಸಾಕುಪ್ರಾಣಿಗಳನ್ನು ತಿನ್ನುತ್ತಿವೆ. ಮೊಸಳೆಯ ಕಾಟಕ್ಕೆ ಬೇಸತ್ತ ಜನ ಮೊಸಳೆಗಳು ನಗರ ಭಾಗಕ್ಕೆ ಬಾರದಂತೆ ತಪ್ಪಿಸಲು ನದಿ ಪ್ರದೇಶದ ನಾಲೆಗಳಿಗೆ ತಂತಿಯ ಬಲೆ ಕಟ್ಟಿ ಅದು ಗ್ರಾಮಗಳಿಗೆ ಪ್ರವೇಶಿದಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಪಿಎಫ್‌ಐ ನಿಷೇಧ : ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌, ನಿಷೇಧ ಪ್ರಶ್ನಿಸಿದ್ದ ಅರ್ಜಿ ವಜಾ

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement