ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ ಶವವಾಗಿ ಪತ್ತೆ

posted in: ರಾಜ್ಯ | 0

ದಾವಣಗೆರೆ: ಕಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದೆ. ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಕಾರಿನ ಹಿಂದಿನ ಸೀಟಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನಲ್ಲಿ ಶವ ಇರುವುದು ಪತ್ತೆಯಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕಾರನ್ನು ಕಾಲುವೆಯಿಂದ ಮೇಲೆತ್ತಿದಾಗ ಏರ್‌ಬ್ಯಾಗ್ ಓಪನ್ ಆಗಿರುವುದು ಕಂಡುಬಂದಿದೆ. ಇನ್ನು ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ ಮೃತದೇಹ ಪತ್ತೆಯಾಗಿದೆ. ಕಾರು ನಾಲೆಯೊಳಗೆ ಬಿದ್ದಿರುವ ರಭಸಕ್ಕೆ, ಕಾರಿನ ಹಿಂಭಾಗ ಮತ್ತು ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ ಕಾರಿನ ಹಿಂಬದಿಯ ಸೀಟ್‌ನಲ್ಲಿ ಮೃತ ದೇಹ ಪತ್ತೆಯಾಗಿರುವುದು ಪ್ರಶ್ನೆಗಳು ಮೂಡುವಂತೆ ಮಾಡಿದೆ.
ಶಾಸಕ ರೇಣುಕಾಚಾರ್ಯ ಅವರ ತಮ್ಮ ಎಂ. ಪಿ. ರಮೇಶ ಮತ್ತು ಜಿಪಂ ಮಾಜಿ ಅಧ್ಯಕ್ಷೆ ಉಮಾ ರಮೇಶ ಅವರ ಪುತ್ರನಾಗಿರುವ ಚಂದ್ರಶೇಖರ ಅವರ ಮೃತ ದೇಹ ಹೊರಕ್ಕೆ ತೆಗೆಯುತ್ತಿದ್ದಂತೆ ಶಾಸಕ ರೇಣುಕಾಚಾರ್ಯ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ನನ್ನ ಮಗನನ್ನು ನನಗೆ ಕೊಡಿ ಎಂದು ಕಣ್ಣೀರು ಹಾಕಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಕಾರ್‌ನಲ್ಲಿ ಶವ ಪತ್ತೆಯಾದ ಬೆನ್ನಲ್ಲೇ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಕಾರು ಹಾಗೂ ಶವವನ್ನು ವಿಧಿ ವಿಜ್ಞಾನ ತಜ್ಞರು ತಮ್ಮ ವಶಕ್ಕೆ ಪಡೆಯಲಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಿದ್ದಾರೆ.
ಚಂದ್ರಶೇಖರ ಭಾನುವಾರ (ಅಕ್ಟೋಬರ್ 30) ರಾತ್ರಿ 11:30 ರಿಂದ ನಾಪತ್ತೆಯಾಗಿದ್ದರು. ಭಾನುವಾರ ರಾತ್ರಿ 11:30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement