ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗರಿಷ್ಠ ವಯೋಮಿತಿ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇರುವ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದಕ್ಕೆ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಸಿವಿಲ್‌, ಸಿಎಆರ್‌ (CAR), ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ವಯೋಮಿತಿ (Age limit) 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು 2022-23ನೇ ಸಾಲಿನ ಕಾನ್ಸ್‌ಟೇಬಲ್‌ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ. ಈ ಸಂಬಂಧ ಜಿಲ್ಲಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವಿಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಗಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ವಯಸ್ಸನ್ನು 35 ಹಾಗೂ ಇತರೆ ಅಭ್ಯರ್ಥಿಗಳ ವಯಸ್ಸನ್ನು 33 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷಗಳನ್ನು ನಿಗದಿ ಪಡಿಸಲಾಗಿದೆ.

ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಕರೆಯಲಾಗಿದೆ. (ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿವೆ. ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡುವ ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ೆಂದು ಗೃಹ ಸಚಿವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement