ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಂಸದ ಮುದ್ದಹನುಮೇಗೌಡ, ಖ್ಯಾತ ನಟ ಶಶಿಕುಮಾರ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಹಾಗೂ ಖ್ಯಾತ ನಟ ಶಶಿಕುಮಾರ್ ಇಂದು, ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.
ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.
ನಿವೃತ್ತ ಐಎಎಸ್ ಅಧಿಕಾರಿ ಅನಿಲಕುಮಾರ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಡಾ.ಅಶ್ವತ್ಥ ನಾರಾಯಣ, ಎಸ್.ಟಿ. ಸೋಮಶೇಖರ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಜಗ್ಗೇಶ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಿ.ಪಿ.ಯೋಗೀಶ್ವರ, ರಾಜ್ಯ ಬಿಜೆಪಿ ಸಂಘಟನಾ ಪ್ರದಾನ ಕಾರ್ಯದರ್ಶಿ ರಾಜೇಶ ಮೊದಲಾದವರು ಇದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮುದ್ದ ಹನುಮೇಗೌಡ ಸಜ್ಜನ ರಾಜಕಾರಣಿ. ಮುದ್ದಹನುಮೇಗೌಡರ ಸೇರ್ಪಡೆ ನಮಗೆ ದೊಡ್ಡ ಬಲ ನೀಡಿದೆ. ಚಿತ್ರನಟ ಶಶಿಕುಮಾರ್ ನಮ್ಮಲ್ಲೇ ಇದ್ದವರು. ಈಗ ಅವರು ಮರಳಿ ಪಕ್ಷಕ್ಕೆ ಬಂದಿದ್ದಾರೆ. ಶಶಿಕುಮಾರ ಅವರ ಸೇರ್ಪಡೆ ನಮ್ಮ ಪಕ್ಷದ ಬಲ ಹೆಚ್ಚಿಸಿದೆ. ಅನಿಲಕುಮಾರ ಜನಪರ ಐಎಎಸ್ ಅಧಿಕಾರಿ ಆಗಿದ್ದವರು.ಾವರ ಪಕ್ಷ ಸೇರ್ಪಡೆಯಿಂದ ಎಸ್ಸಿ ಸಮುದಾಯದಲ್ಲಿ ಮತ್ತು ಮೌಲಿಕ ರಾಜಕಾರಣಕ್ಕೆ ಬೆಲೆ ಬಂದಿದೆ ಎಂದು ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಕೈ ಟಿಕೆಟ್​ ತಪ್ಪಿದ್ದಕ್ಕೆ ಅಸಮಾಧಾನಗೊಂಡ ಮುದ್ದಹನುಮೇಗೌಡ ಅವರು ಬಿಜೆಪಿಗೆ ಸೇರ್ಪಡೆಯಾಗುವುದು ಕೆಲದಿನಗಳಿಂದ ಸುದ್ದಿಯಲ್ಲಿತ್ತು. ಈಗ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಚಿತ್ರ ನಟ ಶಶಿಕುಮಾರ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಅನಿಲ್ ಕುಮಾರ ಅವರು ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement