ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ: ಶಿಕ್ಷಣ ಸಚಿವ ನಾಗೇಶ ಪತ್ರ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ (Meditation) ಮೊರೆ ಹೋಗಲು ನಿರ್ಧರಿಸಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು, ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು ಎಂದು ಸೂಚಿಸಿರುವ ಅವರು, ಇದಕ್ಕಾಗಿ ಸಮಯ ನಿಗದಿ ಮಾಡಲು ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಬಿ.ಸಿ. ನಾಗೇಶ ಅವರಿಗೆ ಪತ್ರ ಬರೆದಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement