‘ನಾನು ಮತ್ತೆ ಹೋರಾಡುತ್ತೇನೆ..’: ಹತ್ಯೆ ಯತ್ನದ ನಂತರ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೊದಲ ಹೇಳಿಕೆ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗುರುವಾರ (ನವೆಂಬರ್ 3)ರಂದು ವಜೀರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಹತ್ಯೆ ಯತ್ನದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತದೆ. ವಜೀರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಪಿಟಿಐ ಮುಖ್ಯಸ್ಥ ಇಮ್ರಾನ್‌ ಖಾನ್‌ ಮತ್ತು ಹಲವರು ಗಾಯಗೊಂಡಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ, ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ‘ದೇವರು ನನಗೆ ಮತ್ತೊಂದು ಜೀವನವನ್ನು ನೀಡಿದ್ದಾನೆ, ಮತ್ತು ನಾನು ಮತ್ತೆ ಹೋರಾಡುತ್ತೇನೆ ಎಂದು ಇಮ್ರಾನ್ ಖಾನ್ ಘಟನೆಯ ನಂತರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯ ದೃಶ್ಯಗಳು ಖಾನ್ ತನ್ನ ಕಾಲಿಗೆ ಬ್ಯಾಂಡೇಜ್ ಅನ್ನು ಸುತ್ತಿಕೊಂಡಿರುವುದನ್ನು ತೋರಿಸಿದೆ. ಪಿಟಿಐ ಮುಖ್ಯಸ್ಥರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಲಾಹೋರ್‌ಗೆ ಕರೆದೊಯ್ಯಲಾಯಿತು. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಲಾಹೋರ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ಪಿಟಿಐ ನಾಯಕ ಫವಾದ್ ಚೌಧರಿ ಹೇಳಿದ್ದಾರೆ. ಪಿಟಿಐನ ಸೆನೆಟರ್ ಫೈಸಲ್ ಜಾವೇದ್ ಕೂಡ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಉದ್ದೇಶಿತ ದಾಳಿಯಲ್ಲಿ’ ಇಮ್ರಾನ್ ಖಾನ್ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪಿಟಿಐ ನಾಯಕ ಫವಾದ್ ಚೌಧರಿ ಖಚಿತಪಡಿಸಿದ್ದಾರೆ.
ವರದಿಗಳ ಪ್ರಕಾರ, ರ್ಯಾಲಿಯಲ್ಲಿ ಗುಂಡು ಹಾರಿಸಿದ ಶಂಕಿತನನ್ನು ಬಂಧಿಸಲಾಗಿದೆ. ಸದ್ಯಕ್ಕೆ ಆರೋಪಿಯ ಗುರುತು ಪತ್ತೆಯಾಗಿಲ್ಲ. ದಾಳಿಕೋರ ಇಮ್ರಾನ್ ಖಾನ್ ಅವರ ಕಂಟೈನರ್ ಮೇಲೆ ಗುಂಡು ಹಾರಿಸಿದ ನಂತರ ಸ್ಥಳದಿಂದ ಪರಾರಿಯಾಗುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪ್ರಮುಖ ಸುದ್ದಿ :-   ದಾಖಲೆಯ 613 ದಿನಗಳ ಕಾಲ ಕೋವಿಡ್‌ ಜೊತೆ ಜೀವಿಸಿದ್ದ 72 ವರ್ಷದ ವ್ಯಕ್ತಿ ; ಸಾಯುವ ಮೊದಲು ಆತನ ದೇಹದಲ್ಲಿ ಕೊರೊನಾ ವೈರಸ್‌ 50ಕ್ಕೂ ಹೆಚ್ಚು ಬಾರಿ ರೂಪಾಂತರಗೊಂಡಿತ್ತು..!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement