ಸಾರ್ವಜನಿಕ ಪ್ರಯಾಣ ಇನ್ನಷ್ಟು ಸುರಕ್ಷಿತ; 6.8 ಲಕ್ಷ ಸಾರಿಗೆ ವಾಹನಗಳಿಗೆ ಲೊಕೇಷನ್ ಟ್ರ್ಯಾಕಿಂಗ್, ಪ್ಯಾನಿಕ್ ಬಟನ್ ಅಳವಡಿಕೆಗೆ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ಮಹಿಳೆಯರು, ಮಕ್ಕಳು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಸಿಸ್ಟಮ್ (ವಿಎಲ್​ಟಿಎಸ್) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳಿಗೆ ‘ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌’ ಅಳವಡಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸುರಕ್ಷಿತ ಪ್ರಯಾಣ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಅತ್ಯಾಚಾರ ತಡೆ ದೃಷ್ಟಿಯಿಂದ ಸಾರಿಗೆ ನಿಗಮದ ಬಸ್‌ಗಳು, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌, ಖಾಸಗಿ ಬಸ್‌ಗಳು, ಶಾಲಾ -ಕಾಲೇಜು ವಾಹನಗಳಿಗೆ ಪ್ಯಾನಿಕ್‌ ಬಟನ್‌ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಅಧಿಸೂಚನೆಯಂತೆ 20.36 ಕೋಟಿ ರೂ. ವೆಚ್ಚದಲ್ಲಿ ಸಾರಿಗೆ ವಾಹನಗಳಲ್ಲಿ ಪ್ಯಾನಿಕ್‌ ಬಟನ್‌ ಅಳವಡಿಸಲು ನಿರ್ಧರಿಸಲಾಗಿದೆ. ಇದರಲ್ಲಿ ಶೇ.60ರಷ್ಟು ಅನುದಾನವನ್ನು ಕೇಂದ್ರ ಸರ್ಕಾರವೇ ನೀಡಲಿದೆ. ರಾಜ್ಯ ಸರ್ಕಾರ 5.97 ಕೋಟಿ ರೂ. ಬಿಡುಗಡೆ ಮಾಡಲು ಸಮ್ಮತಿಸಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಯೋಜನಾ ಸಮಾಲೋಚಕರನ್ನು ಹಾಗೂ ಕ್ಲೌಡ್ ಸರ್ವೀಸ್ ಅನ್ನು ಕೇಂದ್ರ ಸರ್ಕಾರದಿಂದ ನೀಡಲಾಗುತ್ತದೆ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

ಪ್ಯಾನಿಕ್‌ ಬಟನ್‌ ಅಳವಡಿಕೆಯಿಂದ ವಾಹನ ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ. ಜಿಪಿಆರ್‌ಎಸ್‌ ಅಳವಡಿಕೆಯಿಂದ ಅತಿವೇಗದ ಸಂಚಾರದಿಂದ ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸಲೂ ಸಹಾಯವಾಗಲಿದೆ ಎಂದು ತಿಳಿಸಿದರು.
ರಾಜ್ಯದ 6.8 ಲಕ್ಷ ವಾಹನಗಳು ಈ ವ್ಯವಸ್ಥೆಗೆ ಒಳಪಡಲಿವೆ. ಜಿಎಸ್​ಟಿ ಒಳಗೊಂಡಂತೆ ಬಂಡವಾಳ ವೆಚ್ಚ 9.23 ಕೋಟಿ ರೂ.ಗಳು ಮತ್ತು ಎರಡು ವರ್ಷಗಳ ನಿರ್ವಹಣಾ ವೆಚ್ಚ ಸೇರಿ 6.21 ಕೋಟಿ ರೂ.ಗಳು ಹಾಗೂ ಕ್ಲೌಡ್ ಸರ್ವೀಸ್ ಶುಲ್ಕ 4.97 ಕೋಟಿ ರೂ.ಗಳು ಸೇರಿ ಒಟ್ಟು ಯೋಜನಾ ವೆಚ್ಚ 20.35 ಕೋಟಿ ರೂ.ಗಳಷ್ಟು ಆಗಲಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಪ್ರಯೋಜನವೇನು..?
ವಾಹನಗಳು ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಆಗುವ ಅನವಶ್ಯಕ ವಿಳಂಬ ತಡೆಯಬಹುದು.
ಅಲ್ಲದೆ, ಅನಧಿಕೃತವಾಗಿ ಸಂಚರಿಸುವ ವಾಹನಗಳ ಮೇಲೆ ನಿಗಾ ವಹಿಸಲು ಅನುಕೂಲವಾಗಲಿದೆ.
ವಾಹನ ಚಾಲಕರು ನಿಯಮಬಾಹಿರವಾಗಿ ಬೇರೆ ಮಾರ್ಗಗಳಲ್ಲಿ ಸಂಚರಿಸುವುದನ್ನು ತಡೆಯಬಹುದಾಗಿದೆ
ಒಂದುವೇಳೆ ಮಾರ್ಗ ತಪ್ಪಿ ಬೇರೆ ಮಾರ್‌ಗದಲ್ಲಿ ಸಂಚರಿಸಿದರೂ ಮಾಹಿತಿ ಸಿಗಲಿದೆ.
ತುರ್ತು ರಕ್ಷಣೆಗೆ ಪ್ಯಾನಿಕ್ ಬಟನ್ ಅಳವಡಿಕೆಯಿಂದ ವಾಹನಗಳ ಅತಿವೇಗದ ಸಂಚಾರ, ಅಪಘಾತ ಮತ್ತು ತುರ್ತು ಸಂದರ್ಭಗಳಲ್ಲಿ, ಅತ್ಯಾಚಾರದಕ್ಕೆ ಯತ್ನದಂತಹ ಘಟನೆಗಳಲ್ಲಿ ಪ್ಯಾನಿಕ್ ಬಟನ್ ಒತ್ತುವ ಮೂಲಕ ಮಾಹಿತಿ ನೀಡುವ ಅವಕಾಶ ಕಲ್ಪಿಸಲಾಗುತ್ತದೆ. ವಾಹನಗಳು ಅತಿವೇಗದಲ್ಲಿ ಸಂಚರಿಸುತ್ತಿದ್ದರೆ ಕೂಡಲೇ ಆ ವಾಹನದ ವಿಎಲ್​ಟಿಎಸ್ (ವೆಹಿಕಲ್ ಲೊಕೇಷನ್ ಟ್ರಾಯಕಿಂಗ್ ಸಿಸ್ಟಮ್ ಮಾಹಿತಿಯನ್ನು ಕಂಟ್ರೋಲ್ ರೂಂನಲ್ಲಿಯೇ ಪಡೆದು ಕೊಳ್ಳಬಹುದಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ : ಒಟ್ಟು ₹35,000 ಬಹುಮಾನ ಗೆಲ್ಲಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement