ಕೆ.ಆರ್.ನಗರ : ಕಂಡವರ ಮೇಲೆ ದಾಳಿ ಮಾಡಿದ ಚಿರತೆ … ಝಲ್‌ ಎನಿಸುವ ದೃಶ್ಯ ವೀಡಿಯೊದಲ್ಲಿ ಸೆರೆ } ವೀಕ್ಷಿಸಿ

ಮೈಸೂರು: ಆಹಾರವನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಅನೇಕರ ಮೇಲೆ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕನಕ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ ಶಾಲೆಯ ಹತ್ತಿರ ಬೀದಿನಾಯಿಯನ್ನು ಬೆನ್ನಟ್ಟಿಕೊಂಡು ಹೋದ ಚಿರತೆ ನಂತರ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಒಮ್ಮೆಲೇ ಎರಗಿದೆ. ಚಿರತೆ ದಾಳಿಯಿಂದ ಬೈಕ್ ಮೇಲಿಂದ ಬಿದ್ದ ಸವಾರನಿಗೆ ಸಣ್ಣುಪುಟ್ಟ ಗಾಯಗಳಾಗಿವೆ. ಇದೇ ವೇಳೆ ಸ್ಥಳಕ್ಕೆ ಬಂದಿದ್ದ ಅರಣ್ಯ ಸಿಬ್ಬಂದಿಯ ಮೇಲೂ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಅನಂತರ ಮತ್ತಿಬ್ಬರ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.
ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅರವಳಿಕೆ ಮದ್ದು ನೀಡಿ ಬಲೆ ಹಾಕಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ, ಚಿರತೆ ಮನೆಯೊಂದರ ಟೆರೇಸ್‌ಗೆ ಜಿಗಿಯಲು ಪ್ರಯತ್ನಿಸುತ್ತಿರುವುದನ್ನು ನೋಡುತ್ತಿರುವ ಜನರ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ. ಹಾಗೆ ಮಾಡಲು ವಿಫಲವಾದ ನಂತರ, ಅದು ಹಿಂತಿರುಗಿ ನಾಯಿಯನ್ನು ಬೆನ್ನಟ್ಟಲು ಪ್ರಾರಂಭಿಸಿತು. ಇದೇ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿತು. ಬೈಕ್ ನಲ್ಲಿದ್ದ ವ್ಯಕ್ತಿ ಕೆಳಗೆ ಬಿದ್ದಿದ್ದು, ಚಿರತೆ ಓಡಿ ಹೋಗುತ್ತಿರುವುದು ಕಂಡು ಬಂದಿದೆ.

ಈ ನಡುವೆ ಚಿರತೆಗೆ ಕಲ್ಲು ಎಸೆಯುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಅದು ಅಟ್ಟಿಸಿಕೊಂಡು ಬಂದಿದ್ದು, ಅದೃಷ್ಟವಶಾತ್ ಆತ ಪಾರಾಗಿದ್ದಾರೆ.
ಇದಕ್ಕೂ ಮುನ್ನ ಚಿರತೆ ಒಂದು ಮನೆಯಿಂದ ಮತ್ತೊಂದು ಮನೆಗೆ ಜಿಗಿದಿದ್ದು, ನಿವಾಸಿಗಳಲ್ಲಿ ಭೀತಿ ಮೂಡಿಸಿತು. ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಕೊನೆಗೂ ಟ್ರ್ಯಾಂಕ್ವಿಲೈಸರ್ ಬಳಸಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement