ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಮಕ್ಕಳು ಸಾವು ಪ್ರಕರಣ: ಡ್ಯೂಟಿ ವೈದ್ಯೆ ಸೇರಿ ನಾಲ್ವರನ್ನ ಸಸ್ಪೆಂಡ್ ಮಾಡಿದ ಸಚಿವ ಸುಧಾಕರ

ತುಮಕೂರು: ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ಕರ್ತವ್ಯದಲ್ಲಿದ್ದ ವೈದ್ಯೆ ವೈದ್ಯೆ, ಮೂವರು ನರ್ಸ್​ಗಳನ್ನು ಸಸ್ಪೆಂಡ್‌ ಮಾಡಿ ಆರೋಗ್ಯ ಸಚಿವ ಸುಧಾಕರ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಇಬ್ಬರು ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನರ್ಸ್​​ಗಳು ಮತ್ತು ಡ್ಯೂಟಿ ವೈದ್ಯರನ್ನು ಕರ್ತವ್ಯ ಲೋಪದಡಿ ಸಸ್ಪೆಂಡ್ ಮಾಡಲಾಗಿದೆ ಎಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಬಳಿಕ ಆರೋಗ್ಯ ಸಚಿವ ಡಾ.ಕೆ ಸುಧಾಕರ ತಿಳಿಸಿದ್ದಾರೆ.
ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಮಹಿಳೆಗೆ ಚಿಕಿತ್ಸೆ ಕೊಡಿಸಲು ಇಬ್ಬರು ಸ್ಥಳೀಯರು ಬುಧವಾರ (ನವೆಂಭರ್‌ 2) ರಾತ್ರಿ 9-10 ಗಂಟೆ ವೇಳೆಗೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಕೆ ಬಂದಾಗ ದಾದಿಯರು ಒಳಗಡೆ ಕರೆದುಕೊಂಡು ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ತಾಯಿ ಕಾರ್ಡ್,ಆಧಾರ್ ಕಾರ್ಡ್ ಕೇಳಿದ್ದಾರೆ. ಅದ್ಯಾವುದೂ ಆಕೆಯ ಬಳಿ ಇರಲಿಲ್ಲ. ಅಕ್ಕಪಕ್ಕದ ಮನೆಯರು ಒತ್ತಾಯ ಮಾಡಿ ಕರೆದುಕೊಂಡು ಬಂದಿದ್ದಾರೆ. ಮೊದಲ ಹೆರಿಗೆ ನಾರ್ಮಲ್ ಆಗಿದ್ದು, ಇದು ಕೂಡ ಹಾಗೆಯೇಆಗುತ್ತದೆ ಎಂದು ನರ್ಸ್‌ಗಳು ಭಾವಿಸಿದ್ದರಿಂದ ಹೀಗಾಗಿದೆ ಎಂದು ತಿಳಿಸಿದರು.
ಆಸ್ಪತ್ರೆ ಸಿಬ್ಬಂದಿ ವಿಶೇಷ ಆರೈಕೆಯಲ್ಲಿ ಮಹಿಳೆಗೆ ತಕ್ಷಣ ಚಿಕಿತ್ಸೆ ಕೊಡಬಹುದಿತ್ತು. ಮೇಲ್ನೋಟಕ್ಕೆ ಇದು ಹೆರಿಗೆ ವಾರ್ಡ್​​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂವರು ನರ್ಸ್​​ಗಳ ಕರ್ತವ್ಯಲೋಪ ಎಸಗಿದ್ದಾರೆ. ಡ್ಯೂಟಿ ಡಾಕ್ಟರ್ ಇದ್ದರೂ ಚಿಕಿತ್ಸೆಗೆ ಮುಂದಾಗಿಲ್ಲ. ಈ ಘಟನೆಯಿಂದ ದಿಗ್ಭ್ರಮೆಗೊಳಗಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ನತದೃಷ್ಟ ಹೆಣ್ಣು ಮಗು ಇಂದು ನಿರ್ಗತಿಕಳಾಗಿದ್ದಾಳೆ. ಆಕೆಯನ್ನ ಕುಟುಂಬಸ್ಥರು ಪೋಷಿಸದಿದ್ದಲ್ಲಿ, ಜಿಲ್ಲಾಡಳಿತದಿಂದ 18 ರ್ಷದವರೆಗೂ ಉಚಿತ ಶಿಕ್ಷಣ,ವಸತಿ ಕಲ್ಪಿಸಲು ವ್ಯವಸ್ಥೆ ಮಾಡುತ್ತೇವೆ. ವೈಯಕ್ತಿಕವಾಗಿ ನಾನು ಆಕೆಯ ಅಕೌಂಟ್​​ನಲ್ಲಿ ಎಫ್‌ಡಿ ಮಾಡಲು ಇಚ್ಚಿಸಿದ್ದೇನೆ ಎಂದು ಜಿಲ್ಲಾಸ್ಪತ್ರೆಯಲ್ಲಿ ಸಚಿವ ಸುಧಾಕರ ತಿಳಿಸಿದ್ದಾರೆ.
ತಾಯಿ ಕಾರ್ಡ್ ಇಲ್ಲ ಎಂಬ ಕಾರಣ ನೀಡಿ, ಆಸ್ಪತ್ರೆಯಿಂದ ವಾಪಸ್‌ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಈ ಕ್ರಮ ಕೈಗೊಂಡಿದ್ದಾರೆ.
ವೈದ್ಯೆಯ ಬಳಿ ಅಂಗಲಾಚಿ ಕೇಳಿದ್ರೂ ಚಿಕಿತ್ಸೆ ಕೊಡದೆ ವೈದ್ಯೆ ನಿರ್ಲಕ್ಷ್ಯ ಮಾಡಿದ್ದರಿಂದ ಮಕ್ಕಳು ಹಾಗೂ ತಾಯಿ ಮೂವರೂ ಕೊನೆಯುಸಿರೆಳೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಇಂದು(ನ.3) ಸಂಜೆ ಆರೋಗ್ಯ ಸಚಿವ ಡಾ ಕೆ ಸುಧಾಕರ ಖುದ್ದ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಸಭೆ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಕರ್ತವ್ಯ ಲೋಪದ ಮೇಲೆ ಾಗ ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಮೂವರು ನರ್ಸ್​ಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ತಮಿಳುನಾಡು ಮೂಲದ ಕಸ್ತೂರಿ ಎಂಬ ಮಹಿಳೆ 1 ತಿಂಗಳಿಂದ ಓರ್ವ ಪುತ್ರಿ ಜತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಗರ್ಭಿಣಿ ಕಸ್ತೂರಿಗೆ ಬುಧವಾರ (ನ.2) ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ತಾಯಿ ಕಾರ್ಡ್​, ಆಧಾರ್​ ಕಾರ್ಡ್​ ಇಲ್ಲವೆಂದು ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ ಹಾಗೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಸಿಬ್ಬಂದಿ ಹೇಳಿದ್ದರು ಎಂದು ಆರೋಪಿಸಲಾಗಿದೆ. ಬೆಂಗಳೂರಿಗೆ ತೆರಳಲು ಹಣವಿಲ್ಲದೆ ಕಸ್ತೂರಿ ಮನೆಗೆ ಹಿಂದಿರುಗಿದ್ದರು. ಬಳಿಕ ಇಂದು(ನ.3) ಹೆರಿಗೆ ನೋವು ಪ್ರಾರಂಭವಾಗಿದೆ. ಒಂದು ಮಗುವಿಗೆ ಜನ್ಮ ನೀಡಿದ ನಂತರ ಮತ್ತೊಂದು ಮಗುವಿಗೆ ಜನ್ಮನೀಡುವಾಗ ರಕ್ತಸ್ರಾವವಾಗಿದೆ. ಪರಿಣಾಮ ಅವಳಿ ಗಂಡು ಮಕ್ಕಳು ಹಾಗೂ ತಾಯಿ ಕಸ್ತೂರಿ(30) ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ತಾಯಿ, ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement