ಪಂಜಾಬ್‌: ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ನವದೆಹಲಿ: ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಅವರ ಮೇಲೆ ಗುಂಡಿನ ದಾಳಿ ನಡೆಸಿ  ಹತ್ಯೆ ಮಾಡಲಾಗಿದೆ. ನಗರದ ದೇವಸ್ಥಾನದ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಶಿವಸೇನೆ ಮುಖಂಡರು ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಗುಂಪಿನಿಂದ ಯಾರೋ ಬಂದು ಸೂರಿ ಅವರಿಗೆ ಗುಂಡು ಹಾರಿಸಿದ್ದಾರೆ. ಸುಧೀರ್ ಸೂರಿ ಅವರನ್ನು ಗುಂಡಿಕ್ಕಿ ಹತ್ಯೆಗೈದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಸೂರಿ ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಕನಿಷ್ಠ ಐದು ಗುಂಡುಗಳನ್ನು ಹಾರಿಸಿದ್ದಾನೆ ಎಂದು ಹೇಳಲಾಗಿದೆ.
ಸೂರಿ ಪೊಲೀಸ್ ರಕ್ಷಣೆಯನ್ನು ಹೊಂದಿದ್ದರು. ಆದರೂ ಅವರನ್ನು ತಪ್ಪಿಸಿ ದಾಳಿ ಮಾಡಲಾಗಿದೆ. ದಾಳಿಕೋರ ಸಂದೀಪ್ ಸಿಂಗ್‌ನನ್ನು ಬಂಧಿಸಲಾಗಿದೆ – ಆಸ್ಪತ್ರೆಗೆ ಕರೆತರುವ ಮೊದಲು ಕನಿಷ್ಠ ಎರಡು ಗುಂಡುಗಳು ಸೂರಿ ಅವರ ಶರೀರ ಹೊಕ್ಕಿದ್ದವು.

ಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ನಗರ ಪೊಲೀಸ್ ಮುಖ್ಯ ಆಯುಕ್ತ ಅರುಣ್ ಪಾಲ್ ಸಿಂಗ್ ಅವರು ದಾಳಿಕೋರನ ಉದ್ದೇಶದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ. ದಾಳಿಕೋರ ಇತರ ಮೂವರೊಂದಿಗೆ ಎಸ್‌ಯುವಿಯಲ್ಲಿ ಸ್ಥಳಕ್ಕೆ ಬಂದಿದ್ದರು ಆದರೆ ಉಳಿದವರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೂರಿ, ಕೆಲವು ಸಿಖ್ ಸಂಘಟನೆಗಳನ್ನು ಮತ್ತು ನಿರ್ದಿಷ್ಟವಾಗಿ ಖಲಿಸ್ತಾನ್ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸಂದೇಶಗಳಿಗೆ ಹೆಸರುವಾಸಿಯಾಗಿದ್ದರು. ಇಂದು ಮುಂಜಾನೆ, ಸೂರಿ ನಗರದ ಅತ್ಯಂತ ಜನನಿಬಿಡ ಸ್ಥಳಗಳಲ್ಲಿ ಒಂದಾದ ಮಜಿತಾ ರಸ್ತೆ ಬಳಿಯ ಗೋಪಾಲ್ ಮಂದಿರದ ಆಡಳಿತ ಮಂಡಳಿಯ ಕೆಲವು ಸದಸ್ಯರೊಂದಿಗೆ ವಿಗ್ರಹಗಳ ಎಸೆದಿದ್ದರೆ ವಾಗ್ವಾದಕ್ಕಿಳಿದಿದ್ದರು. ದಾಳಿಗೆ ಕೇವಲ ಒಂದು ಗಂಟೆ ಮೊದಲು ಅವರು ಫೇಸ್‌ಬುಕ್‌ನಲ್ಲಿ ಲೈವ್ ಆಗಿದ್ದರು, ಕೆಲವು ಹಳೆಯ ವಿಗ್ರಹಗಳನ್ನು ಕಸದಲ್ಲಿ ಬಿಸಾಡಿದ್ದಾರೆ” ಎಂದು ಅವರು ತೋರಿಸಿದ್ದರು.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

ದೇವಾಲಯದ ಆವರಣದ ಹೊರಗೆ ಕಸದ ಬುಟ್ಟಿಯಲ್ಲಿ ಕೆಲವು ಒಡೆದ ವಿಗ್ರಹಗಳು ಪತ್ತೆಯಾದ ನಂತರ ಶಿವಸೇನೆ ಮುಖಂಡರು ದೇವಾಲಯದ ಅಧಿಕಾರಿಗಳ ವಿರುದ್ಧ ಧರಣಿ ನಡೆಸುತ್ತಿದ್ದರು. ಪ್ರತಿಭಟನೆ ವೇಳೆ  ದುಷಕ್ರಮಿಗಳು ಸೂರಿ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ತಕ್ಷಣವೇ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಗುಂಡು ಹಾರಿದ ಸ್ಥಳ ಜನವಸತಿ ಪ್ರದೇಶ ಎನ್ನಲಾಗಿದೆ.  ಸೂರಿ  ಕೆಲವರ ಹಿಟ್‌ಲಿಸ್ಟ್‌ನಲ್ಲಿದ್ದಾರೆ ಎಂದು ವರದಿಯಾಗಿತ್ತು ಮತ್ತು ಅವರಿಗೆ ಭದ್ರತೆಯನ್ನು ಒದಗಿಸಲಾಗಿತ್ತು. ಗುಂಪೊಂದು ಶಂಕಿತ ದಾಳಿಕೋರನನ್ನು ಹಿಡಿದಿದ್ದು, ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ತಜೀಂದರ್ ಸಿಂಗ್ ಬಗ್ಗಾ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದಾರೆ. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ, ಅಮೃತಸರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಗಾಯಗೊಂಡಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈ ವರ್ಷದ ಜುಲೈನಲ್ಲಿ ನಿರ್ದಿಷ್ಟ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಸೂರಿ ಸುದ್ದಿಯಲ್ಲಿದ್ದರು.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement