ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆಯ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕೇರಳ ಮತ್ತು ಮಾಹೆಯಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚೆನ್ನೈ ಸೇರಿದಂತೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈ, ತಿರುವಳ್ಳುವೂರ್ ಸೇರಿದಂತೆ ಹಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement