ಕೆ.ಆರ್.ನಗರ : ಕಂಡವರ ಮೇಲೆ ದಾಳಿ ಮಾಡಿದ ಚಿರತೆ … ಝಲ್‌ ಎನಿಸುವ ದೃಶ್ಯ ವೀಡಿಯೊದಲ್ಲಿ ಸೆರೆ } ವೀಕ್ಷಿಸಿ

ಮೈಸೂರು: ಆಹಾರವನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಅನೇಕರ ಮೇಲೆ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕನಕ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ ಶಾಲೆಯ ಹತ್ತಿರ … Continued

ಪಂಜಾಬ್‌: ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ನವದೆಹಲಿ: ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಅವರ ಮೇಲೆ ಗುಂಡಿನ ದಾಳಿ ನಡೆಸಿ  ಹತ್ಯೆ ಮಾಡಲಾಗಿದೆ. ನಗರದ ದೇವಸ್ಥಾನದ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಶಿವಸೇನೆ ಮುಖಂಡರು ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಗುಂಪಿನಿಂದ ಯಾರೋ ಬಂದು ಸೂರಿ ಅವರಿಗೆ ಗುಂಡು ಹಾರಿಸಿದ್ದಾರೆ. ಸುಧೀರ್ ಸೂರಿ ಅವರನ್ನು ಗುಂಡಿಕ್ಕಿ ಹತ್ಯೆಗೈದಿರುವುದು … Continued

ತನ್ನ ಕಾರಿಗೆ ಒರಗಿ ನಿಂತಿದ್ದ ಎಂಬ ಕಾರಣಕ್ಕೆ 6 ​​ವರ್ಷದ ಬಾಲಕನ ಎದೆಗೆ ಝಾಡಿಸಿ ಒದ್ದ ವ್ಯಕ್ತಿಯ ಬಂಧನ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗುರುವಾರ, ಕೇರಳ ಪೊಲೀಸರು ರಾಜ್ಯದ ತಲಸ್ಸೆರಿ ಪ್ರದೇಶದಲ್ಲಿ 6 ವರ್ಷದ ಮಗುವಿನೊಂದಿಗೆ ಅಮಾನುಷವಾಗಿ ವರ್ತಿಸಿದ ಶಿಹಶಾದ್ ಎಂಬ ಯುವಕನನ್ನು ಬಂಧಿಸಿದ್ದಾರೆ. ವಲಸೆ ಕಾರ್ಮಿಕನ ಮಗುವನ್ನು ತನ್ನ ಕಾರಿನ ಮೇಲೆ ಒರಗಿದ್ದ ಎಂಬ ಕಾರಣಕ್ಕೆ ಆರೋಪಿ ಒದ್ದಿದ್ದಾನೆ. ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ, ಅದರ ಆಧಾರದ ಮೇಲೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶಿಹಶಾದ್ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, … Continued

ದೆಹಲಿಯಲ್ಲಿ ವಾಯು ಮಾಲಿನ್ಯ ಉಲ್ಬಣ: ನಾಳೆಯಿಂದ ಪ್ರಾಥಮಿಕ ಶಾಲೆಗಳು ಬಂದ್‌

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆ, ಶನಿವಾರದಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ (SAFAR) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ … Continued

ಪ್ರಮೋದ ಮುತಾಲಿಕಗೆ ಜೀವ ಬೆದರಿಕೆ ಕರೆ; ದೂರು ದಾಖಲು

ಬೆಳಗಾವಿ: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು (Threatening Call) ಬರುತ್ತಿರುವ ಕುರಿತು ಪ್ರಮೋದ ಮುತಾಲಿಕ್ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಮೋದ ಮುತಾಲಿಕ್‌, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು … Continued

ಗುಜರಾತ್ ಚುನಾವಣೆ ; ಟೈಮ್ಸ್ ನೌ -ನವಭಾರತ-ಇಟಿಜಿ ಒಪಿನಿಯನ್ ಪೋಲ್ : ಬಿಜೆಪಿ ಗೆಲ್ಲುತ್ತಾ..? ಕಾಂಗ್ರೆಸ್‌ಗೆ ಆಪ್‌ ಅಡ್ಡಿಯಾಗುತ್ತಾ..? ಸಮೀಕ್ಷೆಯಲ್ಲಿ ಬಹಿರಂಗ

ಅಹ್ಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ 2022 ಘೋಷಣೆಯಾಗಿದೆ. ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಹಿಮಾಚಲ ಪ್ರದೇಶದೊಂದಿಗೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಗುಜರಾತ್‌ಗೆ ಸಂಬಂಧಿಸಿದಂತೆ ಟೈಮ್ಸ್ ನೌ -ನವಭಾರತ ಮತ್ತು ಇಟಿಜಿಯ ಅಭಿಪ್ರಾಯ ಸಂಗ್ರಹ (opinion poll) ಹೊರಬಿದ್ದಿದೆ. ಇದು ಗುಜರಾತ್ … Continued

ಸಾರ್ವಜನಿಕ ಪ್ರಯಾಣ ಇನ್ನಷ್ಟು ಸುರಕ್ಷಿತ; 6.8 ಲಕ್ಷ ಸಾರಿಗೆ ವಾಹನಗಳಿಗೆ ಲೊಕೇಷನ್ ಟ್ರ್ಯಾಕಿಂಗ್, ಪ್ಯಾನಿಕ್ ಬಟನ್ ಅಳವಡಿಕೆಗೆ ನಿರ್ಧಾರ

ಬೆಂಗಳೂರು: ಮಹಿಳೆಯರು, ಮಕ್ಕಳು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಸಿಸ್ಟಮ್ (ವಿಎಲ್​ಟಿಎಸ್) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳಿಗೆ ‘ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌’ ಅಳವಡಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ … Continued

ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಗುರುವಾರ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಇದರಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಬಿಜೆಪಿಯ ಎಂ ಕೆ ಪ್ರಾಣೇಶ ಅವರಗೆ ಸಂಕಷ್ಟ ಎದುರಾಗಿದೆ. ಆದರೆ, ಎಂ ಕೆ ಪ್ರಾಣೇಶ … Continued

ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಮಕ್ಕಳು ಸಾವು ಪ್ರಕರಣ: ಡ್ಯೂಟಿ ವೈದ್ಯೆ ಸೇರಿ ನಾಲ್ವರನ್ನ ಸಸ್ಪೆಂಡ್ ಮಾಡಿದ ಸಚಿವ ಸುಧಾಕರ

ತುಮಕೂರು: ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ಕರ್ತವ್ಯದಲ್ಲಿದ್ದ ವೈದ್ಯೆ ವೈದ್ಯೆ, ಮೂವರು ನರ್ಸ್​ಗಳನ್ನು ಸಸ್ಪೆಂಡ್‌ ಮಾಡಿ ಆರೋಗ್ಯ ಸಚಿವ ಸುಧಾಕರ ಆದೇಶ ಹೊರಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಇಬ್ಬರು ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನರ್ಸ್​​ಗಳು ಮತ್ತು ಡ್ಯೂಟಿ ವೈದ್ಯರನ್ನು ಕರ್ತವ್ಯ ಲೋಪದಡಿ … Continued