ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ ಕಶ್ಯಪ ನೇಮಕ

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಕ ಮಾಡಿ, ಸರಕಾರ ಆದೇಶ ಹೊರಡಿಸಿದೆ.
ಸುನೀಲ ಪುರಾಣಿಕ ಅವರಿಂದ ಈ ಸ್ಥಾನ ತೆರುವಾಗಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.
ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಆದೇಶ ಹೊರಡಿಸಿದ್ದಾರೆ.ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಅಶೋಕ್ ಕಶ್ಯಪ್, ಲಿಫ್ಟ್ ಕೊಡ್ಲಾ, ಧ್ವಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಶೋಕ ಕಶ್ಯಪ ಅವರು ಕರ್ನಾಟಕ ಚಲನಚಿತ್ರ ಅಕಾಡಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement