ಕಾಲೇಜು ಮೇಟ್‌ಗಳು ಸಹ ವಿದ್ಯಾರ್ಥಿಗೆ ಥಳಿಸಿದರು…ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟರು: ವೀಡಿಯೊ ವೈರಲ್‌, ನಾಲ್ವರ ಬಂಧನ

ವಿಜಯವಾಡ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಮತ್ತೊಬ್ಬ ವಿದ್ಯಾರ್ಥಿಯನ್ನು ಹಾಸ್ಟೆಲ್ ಕೊಠಡಿಯೊಳಗೆ ಕರುಣೆಯಿಲ್ಲದೆ ಥಳಿಸಿದ ವಿಡಿಯೋ ವೈರಲ್ ಆಗಿದೆ.
ಆತ ತನ್ನನ್ನು ಬಿಡುವಂತೆ ಬೇಡಿಕೊಂಡರೂ ಹಲ್ಲೆಕೋರರು ಆತನನ್ನು ಪೈಪ್‌ ಹಾಗೂ ದೊಣ್ಣೆಯಂತಹವುಗಳಿಂದ ಹೊಡೆಯುತ್ತಲೇ ಇರುವುದು ವೈರಲ್‌ ವೀಡಿಯೊದಲ್ಲಿ ಕಂಡುಬರುತ್ತದೆ. ಆ ವಿದ್ಯಾರ್ಥಿ ಕ್ಷಮೆ ಯಾಚಿಸುತ್ತಿದ್ದರೂ ಬಿಡದೆ ಹೊಡೆದಿರುವುದನ್ನು ಘಟನೆಯ ವಿಡಿಯೋ ತೋರಿಸುತ್ತದೆ. ಆತನ ಅಂಗಿ ಹರಿದಂತಿದೆ. ಸಂತ್ರಸ್ತ ಮತ್ತು ಎಲ್ಲಾ ಆರೋಪಿಗಳು ಎಸ್‌ಆರ್‌ಕೆಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದು, ಘಟನೆ ಒಂದೆರಡು ದಿನಗಳ ಹಿಂದೆ ನಡೆದಿದೆ ಎಂದು ವರದಿಯಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸಂತ್ರಸ್ತ ವಿದ್ಯಾರ್ಥಿ ಅಂಕಿತ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ದೇಹದಾದ್ಯಂತ ಗಾಯಗಳಾಗಿವೆ.
ನಾಲ್ವರು ದಾಳಿಕೋರರು ಅಂಕಿನಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟಿದ್ದಾರೆ ಎಂದೂ ವರದಿಯಾಗಿದೆ. ಕಾರಣ ಅಸ್ಪಷ್ಟವಾಗಿದ್ದರೂ ದೊಣ್ಣೆ ಮತ್ತು ಪಿವಿಸಿ ಪೈಪ್‌ಗಳಿಂದ ಹೊಡೆದಿದ್ದಾರೆ ಎಂದು ಶಂಕಿಸಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭೀಮಾವರಂ- ಟೌನ್ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಮ್‌ ವರದಿ ಮಾಡಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಸ್ಥಿರವಾಗಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಐವರು ವಿದ್ಯಾರ್ಥಿಗಳು ಭೀಮಾವರಂನ ಎಸ್‌ಆರ್‌ಕೆಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ ಕೋರ್ಸ್ (ಸಿಎಸ್‌ಇ) ಓದುತ್ತಿದ್ದರು ಮತ್ತು ಪಟ್ಟಣದ ಖಾಸಗಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು. ಬುಧವಾರ ರಾತ್ರಿ ನಾಲ್ವರು ವಿದ್ಯಾರ್ಥಿಗಳು ಹುಡುಗಿಯೊಬ್ಬಳ ವಿಚಾರವಾಗಿ ಸಂತ್ರಸ್ತನೊಂದಿಗೆ ವಾಗ್ವಾದ ನಡೆಸಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮನೀಶ ಸಿಸೋಡಿಯಾ ಹಲವು ಬಾರಿ ಫೋನ್ ಬದಲಾಯಿಸಿದರು, ಸಾಕ್ಷ್ಯ ನಾಶಪಡಿಸಿದರು: ಮದ್ಯ ನೀತಿ ಪ್ರಕರಣದಲ್ಲಿ ಇ.ಡಿ. ಆರೋಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement