ವಿಕೃತ ಕಾಮಿ ಉಮೇಶ ರೆಡ್ಡಿ ಮರಣದಂಡನೆ ರದ್ದು :30 ವರ್ಷ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಿ ಸುಪ್ರೀಂ ಕೋರ್ಟ್ ತೀರ್ಪು

posted in: ರಾಜ್ಯ | 0

ನವದೆಹಲಿ: ವಿಕೃತ ಕಾಮಿ, ಸೀರಿಯಲ್‌ ಕಿಲ್ಲರ್ ಉಮೇಶ್ ರೆಡ್ಡಿ ಮರಣದಂಡನೆ ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಅದನ್ನು ಮಾರ್ಪಡಿಸಿ 30 ವರ್ಷ ಜೀವಾವಧಿ ಶಿಕ್ಷೆ ವಿಧಿಸಿದೆ.
ಕರ್ನಾಟಕ ಹೈಕೋರ್ಟ್‌ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ ರೆಡ್ಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಉದಯ್‌ ಲಲಿತ್‌ ನೇತೃತ್ವದ ತ್ರಿಸದಸ್ಯ ಪೀಠ, ಐತಿಹಾಸಿಕ ಸುನಿಲ ಬಾತ್ರಾ ಪ್ರಕರಣವನ್ನು ಉಲ್ಲೇಖಿಸಿ ಈ ತೀರ್ಪನ್ನು ನೀಡಿದೆ. ಸಿಜೆಐ ಯು.ಯು. ಲಲಿತ್, ನ್ಯಾ., ಎಸ್. ರವೀಂದ್ರ ಭಟ್, ನ್ಯಾ. ಪಿ.ಎಸ್. ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತ್ತು. ಆತನನ್ನು ಈ ಹತ್ತು ವರ್ಷಗಳ ಕಾಲ ಏಕಾಂಗಿಯಾಗಿ ಜೈಲಿನಲ್ಲಿರಿಸಿರುವುದರಿಂದ ಮಾನಸಿಕ ಹಿಂಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ ಎಂದು ಪೀಠ ತಿಳಿಸಿದೆ.
ಒಂದು ವೇಳೆ ಇನ್ನು ಅಪರಾಧಿಯ ಪರವಾಗಿ ಯಾವುದೇ ಅರ್ಜಿಯನ್ನು ಸಲ್ಲಿಸಿದರೆ ಅದನ್ನು 30 ವರ್ಷಗಳ ಶಿಕ್ಷೆ ಅನುಭವಿಸಿದ ಬಳಿಕವೇ ಪರಿಗಣಿಸಲಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಆ ಬಳಿಕವೂ ಯಾವುದೇ ಅರ್ಜಿ ಸಲ್ಲಿಕೆಯಾಗದಿದ್ದರೆ ಉಮೇಶ್ ರೆಡ್ಡಿ ಆಜೀವ ಶಿಕ್ಷೆಗೊಳಪಡುತ್ತಾನೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಅಪರಾಧಿಯನ್ನು 2011ರ ನವೆಂಬರ್ 6ರಿಂದ ಇಲ್ಲಿಯ ವರೆಗೆ ಏಕಾಂತ ಬಂಧನದಲ್ಲಿ ಇರಿಸಲಾಗಿತ್ತು ಎಂಬ ಬೆಳಗಾವಿ ಜೈಲಿನ ವೈದ್ಯಾಧಿಕಾರಿ ಸಲ್ಲಿಸಿದ್ದ ಪತ್ರವನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.
ಪೊಲೀಸ್‌ ಆಗಿದ್ದ, ಉಮೇಶ ರೆಡ್ಡಿ ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರದ ಆರೋಪ ಹೊತ್ತಿದ್ದಾನೆ. 9 ಪ್ರಕರಣಗಳಲ್ಲಿ ಈತ ಶಿಕ್ಷೆಗೆ ಗುರಿಯಾಗಿದ್ದಾನೆ. ಈತನ ಕೃತ್ಯಗಳು ಕರ್ನಾಟವಲ್ಲದೆ, ಮಹಾರಾಷ್ಟ್ರ, ಗುಜರಾತ್‌ನಲ್ಲೂ ಬೆಳಕಿಗೆ ಬಂದಿದ್ದವು.
ಎರಡು ದಶಕಕಗಳ ಉಮೇಶ್‌ ರೆಡ್ಡಿ ಪ್ರಕರಣ ರಾಷ್ಟ್ರವನ್ನೇ ಬೆಚ್ಚಿ ಬೀಳಿಸಿತ್ತು. 1969ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ್ದ ಉಮೇಶ ರೆಡ್ಡಿ, ಸಿಆರ್‌ಪಿಎಫ್‌ಗೆ ಸೇರಿದ್ದ. ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆಗೆ ನಿಯೋಜನೆಗೊಂಡಿದ್ದಾಗ ಕಮಾಂಡರ್‌ ಮನೆಯಲ್ಲಿ ಡ್ಯೂಟಿಯಲ್ಲಿದ್ದಾಗ ಅವರ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಸೇನೆಯಿಂದ ಹೊರಬಿದ್ದಿದ್ದ. ಬಳಿಕ ಚಿತ್ರದುರ್ಗ ಜಿಲ್ಲಾ ಸಶಸ್ತ್ರಮೀಸಲು ಪಡೆ ಸೇರಿ ಅಪಘಾತ ಪ್ರಕರಣವೊಂದರಲ್ಲಿ ಸಿಕ್ಕಿ ಹಾಕಿಕೊಂಡಿದ್ದ. ಇದು ಸಣ್ಣ ಅಪರಾಧ ಎಂದು ಆತನನ್ನು ಬಿಟ್ಟು ಕಳುಹಿಸಲಾಗಿತ್ತು.
ನಂತರ ಈತ ತನ್ನ ಅಪರಾಧ ಕೃತ್ಯ ಆರಂಭಿಸಿದ್ದ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಪುರುಷರು ಮನೆಯಲ್ಲಿ ಇಲ್ಲದ ಸಮಯದಲ್ಲಿ ನೀರು ಕೇಳುವ ನೇಪದಲ್ಲಿ ಮನೆ ಪ್ರವೇಶಿಸಿ ಮಹಿಳೆಯರಿಗೆ ಚಾಕು ತೋರಿಸಿ ಅತ್ಯಾಚಾರ ನಡೆಸಿ ಹತ್ಯೆಗೈದು ಚಿನ್ನಗಳೊಂದಿಗೆ ಪರಾರಿಯಾಗುತ್ತಿದ್ದ. ಸಂತ್ರಸ್ತೆಯ ಒಳ ಉಡುಪಿನೊಂದಿಗೆ ತೆರಳುತ್ತಿದ್ದ.

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ಆತನಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಈ ಸಂದರ್ಭದಲ್ಲಿ ಉಮೇಶ್ ರೆಡ್ಡಿ ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದ. 12 ಮೇ 2013ರಂದು ಆತನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದರು.
ಉಮೇಶ್ ರೆಡ್ಡಿ 10 ವರ್ಷಗಳಿಂದ ಒಂಟಿಯಾಗಿ ಜೈಲಿನಲ್ಲಿದ್ದ. ಹೀಗಾಗಿ ರೆಡ್ಡಿ ಮಾನಸಿಕ ಯಾತನೆ ಅನುಭವಿಸಿದ್ದು, ಶಿಕ್ಷೆಯನ್ನು ಜೀವಾವಧಿಯಾಗಿ ಮಾರ್ಪಾಡು ಮಾಡುವಂತೆ ಆತನ ಪರ ವಕೀಲ ಬಿ.ಎನ್. ಜಗದೀಶ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ ಪೀಠ ಗಲ್ಲು ಶಿಕ್ಷೆ ಕಾಯಂಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಿತ್ತು ಹಾಗೂ ಅಲ್ಲಿಯ ತನಕ ಗಲ್ಲಿಗೇರಿಸಬಾರದು ಎಂಬ ಮನವಿ ಒಪ್ಪಿಕೊಂಡಿತ್ತು.
ನಂತರ ಉಮೇಶ ರೆಡ್ಡಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಉದಯ್‌ ಲಲಿತ್‌ ನೇತೃತ್ವದ ತ್ರಿಸದಸ್ಯ ಪೀಠಏಕಾಂಗಿತನದ ಪರಿಣಾಮವು ನಿಸ್ಸಂಶಯವಾಗಿ ಸ್ಪಷ್ಟವಾಗಿದೆ ಮತ್ತು ವೈದ್ಯಕೀಯ ವೃತ್ತಿಪರರ ಪತ್ರ ಮತ್ತು ಜೈಲಿನ ಸಂವಹನದಿಂದ ಸ್ಪಷ್ಟವಾಗುತ್ತದೆ ಎಂದು ಪೀಠವು ಗಮನಿಸಿದೆ. ಏಕಾಂತದ ಸೆರೆವಾಸವು ಅವನ ಯೋಗಕ್ಷೇಮದ ಮೇಲೆ ಕೆಟ್ಟ ಪರಿಣಾಮಗಳನ್ನು ತೋರಿಸಿದೆ ಎಂದು ಅದು ಗಮನಿಸಿದೆ.
ಈಗ ಸುಪ್ರೀಂ ಕೋರ್ಟಿನ ತೀರ್ಪು ನೀಡಿದ್ದು ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡು ಮಾಡಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement